ಮೈಸೂರು: ಸದ್ಯಕ್ಕೆ ಮುಡಾ ಸೈಟ್ (MUDA Case) ವಾಪಸ್ ಕೇಳಲ್ಲ ಎಂದು ಸಿಎಂ ಪುತ್ರ ಹಾಗೂ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಸ್ಪಷ್ಟಪಡಿಸಿದರು.
ಮುಡಾ ಹಗರಣದಲ್ಲಿ ಇ.ಡಿ ವಿಚಾರಣೆ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನಿಂದ ಸಿಎಂ ಪತ್ನಿಗೆ ರಿಲೀಫ್ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಮುಡಾ ಕೇಸ್ | ಇಡಿ-ಬಿಜೆಪಿ ಪಾಲುದಾರಿಕೆಯ ಪ್ರಚಾರವನ್ನು ಸುಪ್ರೀಂ ರದ್ದುಗೊಳಿಸಿದೆ: ಸುರ್ಜೇವಾಲಾ
ಸುಪ್ರೀಂ ಕೋರ್ಟ್‌ನಿಂದ ರಿಲೀಫ್ ಸಿಕ್ಕರೂ ನಾವು ಈ ಸಂದರ್ಭದಲ್ಲಿ ಮುಡಾದಿಂದ 14 ಸೈಟ್ ವಾಪಸ್ ಕೇಳುವುದಿಲ್ಲ. ಇನ್ನೂ ಕೂಡ ಈ ವಿಚಾರದ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ವಿಚಾರಣೆ ಮುಗಿದು ಆ ತೀರ್ಪು ಹೊರಬರಲಿ. ಆ ನಂತರ ಇದರ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ. ಸದ್ಯಕ್ಕೆ ಮುಡಾದಿಂದ ಸೈಟ್‌ಗಳನ್ನ ವಾಪಸ್ ಕೇಳುವುದಿಲ್ಲ ಎಂದು ತಿಳಿಸಿದರು.
ಆ ಸೈಟ್‌ಗಳಿಂದಲೇ ತಂದೆಯ ರಾಜಕೀಯಕ್ಕೆ ಕಪ್ಪುಚುಕ್ಕೆ ಬಂತು ಎಂಬ ನೋವು ನಮ್ಮ ತಾಯಿಗೆ ಇದೆ. ಹೀಗಾಗಿ, ಅವುಗಳನ್ನು ಆ ಸಂದರ್ಭದಲ್ಲಿ ವಾಪಸ್ ಕೊಟ್ಟರು. ಸುಪ್ರೀಂ ಕೋರ್ಟ್ ಈಗ ಈ ವಿಚಾರದಲ್ಲಿ ರಿಲೀಫ್ ಕೊಟ್ಟರು ಕೂಡ ನಾವು ಅದನ್ನ ವಾಸಸ್ ಕೇಳುವುದಿಲ್ಲ. ಈ ಸೈಟ್‌ಗಳಲ್ಲಿ ಮನಿ ಲಾಂಡರಿಂಗ್ ಪ್ರಶ್ನೆಯೇ ಇಲ್ಲ. ಆದರೂ ಮನಿ ಲಾಂಡರಿಂಗ್ ಕೇಸ್ ಹಾಕಿದ್ರು. ಇದರಿಂದ ತಾಯಿ ಮನನೊಂದು ಸೈಟ್‌ಗಳನ್ನ ವಾಪಸ್ ಕೊಟ್ಟರು. ಕಾನೂನು ಪ್ರಕ್ರಿಯೆ ಮುಗಿಯಲಿ. ಆಮೇಲೆ ನೋಡೋಣ ಎಂದರು. ಇದನ್ನೂ ಓದಿ: ಮುಡಾ ಕೇಸ್ | ಸಿಎಂ ಪತ್ನಿ ವಿಚಾರಣೆ ರದ್ದು – ನಿಮ್ಮನ್ಯಾಕೆ ರಾಜಕೀಯಕ್ಕೆ ಬಳಕೆ ಮಾಡ್ತಾರೆ?: ಇ.ಡಿಗೆ ಸುಪ್ರೀಂ ಛೀಮಾರಿ
ಸುಪ್ರೀಂ ತೀರ್ಪು ಏನು?
ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಆರೋಪದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ನೀಡಲಾದ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್ ತೀರ್ಪಿನ ವಿರುದ್ಧ ಇ.ಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿತು. ಕೇಂದ್ರ ತನಿಖಾ ಸಂಸ್ಥೆ ಇ.ಡಿ ಕಾರ್ಯವೈಖರಿ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ಹೊರಹಾಕಿತು.