ಕೊಪ್ಪಳ: ನಾವು ಯಾವುದೇ ಆಪರೇಷನ್ ಮಾಡಿಲ್ಲ, ಅವರೇ ಒಪ್ಪಿಕೊಂಡು ಬಂದಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದರು.
ಜಿಲ್ಲೆಯ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಸಮಸ್ಯೆ ತಡೆಗಟ್ಟುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿ.ಪಿ ಯೋಗೇಶ್ವರ್ (CP Yogeshwar) ಕಾಂಗ್ರೆಸ್ (Congress) ಪಕ್ಷದವರು, ಮರಳಿ ಪಕ್ಷ ಸೇರಿದ್ದಾರೆ. ಪಕ್ಷದ ಅಭ್ಯರ್ಥಿಯಾದರೆ ಸಂತೋಷ. ಅದು ಉಪಮುಖ್ಯಮಂತ್ರಿಗಳ ಜವಾಬ್ದಾರಿ ಕ್ಷೇತ್ರ ಎಂದಿದ್ದಾರೆ.ಇದನ್ನೂ ಓದಿ: ತುಮಕೂರು| ಮಳೆಗೆ ಮನೆಗೋಡೆ ಕುಸಿದು ಬಿದ್ದು ಮಹಿಳೆ ಸಾವು
ನಾವು ಯಾವುದೇ ಆಪರೇಷನ್ ಮಾಡಿಲ್ಲ. ಅವರೇ ಒಪ್ಪಿಕೊಂಡು ಬಂದಿದ್ದಾರೆ. ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುತ್ತದೆ. ಬಿಜೆಪಿಯವರು ಮಾಡಬಾರದು ಮಾಡಿದ್ದಾರೆ. ಅವರು ನಮಗೆ ಪಾಠ ಮಾಡಬೇಕಾಗಿಲ್ಲ ಎಂದು ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಳೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೂರು ನಾಲ್ಕು ಕಡೆ ಸಣ್ಣ ಪುಟ್ಟ ಸಮಸ್ಯೆಯಾಗಿದೆ. ಹೆಚ್ಚಿನ ಅನುದಾನ ತಂದು ಬೆಂಗಳೂರು ಸಮಸ್ಯೆಗೆ ಶಾಶ್ವತ ಪರಿಹಾರ ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಆರೋಗ್ಯ ಕೇಂದ್ರಗಳಲ್ಲಿ ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕ ಮಾಡಿಕೊಳ್ಳುತ್ತೇವೆ. ಆರೋಗ್ಯ ಇಲಾಖೆಯಿಂದ ಉಚಿತವಾಗಿ ಮನೆಮನೆಗೆ ಮಾತ್ರೆ, ಚಿಕಿತ್ಸೆ ನೀಡುವ ಯೋಜನೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಯೋಗೇಶ್ವರ್ ನಮ್ಮನ್ನು ಬಿಡುವುದಿಲ್ಲ ಎನ್ನುವ ವಿಶ್ವಾಸವಿತ್ತು: ಕೋಟ ಶ್ರೀನಿವಾಸ ಪೂಜಾರಿ ಬೇಸರ