ಬೆಂಗಳೂರು: ನಾವು ಯಾವುದೇ ರೌಡಿಗಳನ್ನು (Rowdy) ಪಕ್ಷಕ್ಕೆ ಸೇರಿಸಿಕೊಂಡಿಲ್ಲ. ಅವರಿಗೆ ಪ್ರೋತ್ಸಾಹವನ್ನೂ ನೀಡಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿ (BJP) ನಾಯಕರು ಇತ್ತೀಚೆಗೆ ರೌಡಿಗಳ ಸಹವಾಸ ಮಾಡುತ್ತಿರುವ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಸಚಿವ ವಿ. ಸೋಮಣ್ಣ ಅವರ ಮನೆಗೆ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ, ನಾವು ಯಾವುದೇ ರೌಡಿಗಳನ್ನೂ ಪ್ರೋತ್ಸಾಹ ಮಾಡಲ್ಲ. ಅವರಿಗೆ ಯಾವುದೇ ಅವಕಾಶಗಳನ್ನೂ ಕೊಡುವುದಿಲ್ಲ. ಇದರ ಬಗ್ಗೆ ನಾನು ಹೆಚ್ಚು ಮಾತನಾಡಲು ಹೋಗಲ್ಲ. ಇದು ಬಹಳ ಸ್ಪಷ್ಟವಾಗಿದ್ದು, ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿನ ಇತಿಹಾಸದಲ್ಲೇ ಫಸ್ಟ್ ಟೈಮ್ ಎಸ್‍ಪಿ ರೋಡ್ ಬಂದ್ – ಡಿ.13ಕ್ಕೆ ವಿಧಾನಸೌಧಕ್ಕೆ ವರ್ತಕರ ಮೆರವಣಿಗೆ
Advertisement
Advertisement
ವಕ್ಫ್ ಬೋರ್ಡ್‌ನಿಂದ ಮುಸ್ಲಿಂ ಯುವತಿಯರಿಗೆ ಪ್ರತ್ಯೇಕ ಕಾಲೇಜು ತೆರೆಯುವ ವಿಚಾರದ ಬಗ್ಗೆ ಮಾತನಾಡಿದ ಅವರು, ಪ್ರತ್ಯೇಕ ಕಾಲೇಜಿನ ಬಗ್ಗೆ ನಮ್ಮ ಸರ್ಕಾರದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಇದು ನಮ್ಮ ಸರ್ಕಾರದ ನಿಲುವು ಕೂಡಾ ಅಲ್ಲ. ಅಂತಹ ಯಾವುದೇ ಪ್ರಸ್ತಾವನೆ ಇದ್ದರೂ ವಕ್ಫ್ ಬೋರ್ಡ್ ಅಧ್ಯಕ್ಷರೇ ಬಂದು ನನ್ನೊಂದಿಗೆ ಚರ್ಚೆ ಮಾಡಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಡ್ರಗ್ಸ್ ಸೇವನೆ ಆರೋಪ – NCB ಅಧಿಕಾರಿಗಳಿಂದ 3 ಯುವತಿಯರು ವಶಕ್ಕೆ