ಚಿಕ್ಕೋಡಿ: ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಕಾರನ್ನು ಸುಟ್ಟಿರುವವರಿಗೂ, ನಮಗೂ ಸಂಬಂಧವಿಲ್ಲ. ಯೂಥ್ ಕಾಂಗ್ರೆಸ್‍ಗೂ, ನಮಗೂ ಸಂಬಂಧವಿಲ್ಲ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಅಶೋಕ್ ಪಟ್ಟಣ ಕಿಡಿಕಾರಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರು ಸುಟ್ಟಿರುವುದು ನಲಪಾಡ್ ಅವರ ವೈಯಕ್ತಿಕ ವಿಚಾರ. ಈ ಕುರಿತು ಕಾಂಗ್ರೆಸ್‍ನಲ್ಲಿ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ವರಿಷ್ಠರು ಕ್ರಮ ಕೈಗೊಳ್ಳುತ್ತಾರೆ. ನಾವು ಶಾಂತಿಯುತ ಪ್ರತಿಭಟನೆ ಮಾಡುತ್ತೇವೆ. ಕಾರು, ಬಸ್ಸುಗಳಿಗೆ ಕಲ್ಲು ಹೊಡೆಯುವುದಿಲ್ಲ. ನಲಪಾಡ್ ಮಾಡಿರೋ ಕೃತ್ಯಕ್ಕೂ ನಮಗೂ ಸಂಬಂಧವಿಲ್ಲ. ಯೂಥ್ ಕಾಂಗ್ರೆಸ್ ಅಧ್ಯಕ್ಷರಾಗಿ ಈ ರೀತಿಯಾಗಿ ಮಾಡಬಾರದಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಗುಪ್ತಗಾಮಿನಿಯಾಗಿ ಹರಡುತ್ತಿರುವ ಕೊರೊನಾ – ಐದು ದಿನದಲ್ಲಿ 25 ಜನರಿಗೆ ಸೋಂಕು
Advertisement
Advertisement
ನಾಲ್ಕು ತಲೆಮಾರಿಗೆ ಆಗುವಷ್ಟು ಮಾಡಿದ್ದೇವೆ ಎಂಬ ರಮೇಶ್ ಕುಮಾರ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ರಮೇಶ್ ಕುಮಾರ್ ಹಿರಿಯ ನಾಯಕರು. ಅವರು ಯಾವ ರೀತಿ ಹೇಳಿದ್ದಾರೆ ಅನ್ನೋದು ಗೊತ್ತಿಲ್ಲ. ಆರು ತಲೆಮಾರಿನಿಂದ ಅಧಿಕಾರ ಅನುಭವಿಸಿದ್ದೀವಿ. ನೈತಿಕತೆಗೋಸ್ಕರ ಇದ್ದೀವಿ ಅನ್ನೋದಕ್ಕೆ ಹೇಳಿಕೆ ನೀಡಿದ್ದಾರೆ ಎಂದು ಸಮರ್ಥನೆ ಮಾಡಿಕೊಂಡರು.
Advertisement
Advertisement
ಕಾಂಗ್ರೆಸ್‍ನಲ್ಲಿ ಮುಂದಿನ ಸಿಎಂ ಚರ್ಚೆ ವಿಚಾರವಾಗಿ ಪ್ರತಿಕ್ರಿಯೆ ಕೊಟ್ಟ ಅವರು, ಕಾಂಗ್ರೆಸ್‍ನಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಸ್ಥಾನ ಕೇಳಬಹುದು. ಅವರವರ ಯೋಗ್ಯತೆಗೆ ಅನುಸಾರ ಕೇಳುತ್ತಾರೆ. ಮುಖ್ಯಮಂತ್ರಿಯನ್ನ ಹೈಕಮಾಂಡ್ ಆಯ್ಕೆ ಮಾಡಲ್ಲ. ಎಲ್ಲ ಶಾಸಕರು ಒಟ್ಟಾಗಿ ಸೇರಿ ಮುಖ್ಯಮಂತ್ರಿಯನ್ನ ಆಯ್ಕೆ ಮಾಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: 2 ವರ್ಷಗಳ ನಂತರ ಸೋಫಾದಲ್ಲಿ ಪತ್ತೆಯಾದ ಮಹಿಳೆ ಅಸ್ಥಿಪಂಜರ
ಅದೇ ರೀತಿಯಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಹ ಆಯ್ಕೆ ಆಗಿದ್ದರು. ಮೊದಲು ನಮಗೆ ಬಹುಮತ ಬರಲಿ ಬಳಿಕ ಶಾಸಕರೆ ಕುಳಿತುಕೊಂಡು ಒಳ್ಳೆಯವರನ್ನ ಆಯ್ಕೆ ಮಾಡುತ್ತಾರೆ ಎಂದು ಹೇಳಿದರು.