Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ 3 ಕೋಟಿ ಜನರಿಗೆ ಗ್ಯಾರಂಟಿ ಯೋಜನೆ.. ಲೋಕಸಭೆ ಚುನಾವಣೆ ಗೆಲ್ಲಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕು: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ 3 ಕೋಟಿ ಜನರಿಗೆ ಗ್ಯಾರಂಟಿ ಯೋಜನೆ.. ಲೋಕಸಭೆ ಚುನಾವಣೆ ಗೆಲ್ಲಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕು: ಡಿಕೆಶಿ

Bengaluru City

ರಾಜ್ಯದ 3 ಕೋಟಿ ಜನರಿಗೆ ಗ್ಯಾರಂಟಿ ಯೋಜನೆ.. ಲೋಕಸಭೆ ಚುನಾವಣೆ ಗೆಲ್ಲಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕು: ಡಿಕೆಶಿ

Public TV
Last updated: January 10, 2024 8:58 pm
Public TV
Share
4 Min Read
DKSHI 1
SHARE

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಇಡೀ ದೇಶ, ನಮ್ಮ ಪಕ್ಷ ಕರ್ನಾಟಕದ ಮೇಲೆ ಬಹಳ ವಿಶ್ವಾಸ ಇಟ್ಟುಕೊಂಡಿದ್ದು, ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಜನರಿಗೆ ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ. ನಮ್ಮ ಕಾರ್ಯಕರ್ತರು ಮತ್ತೆ ಜನರ ಬಳಿಗೆ ಹೋಗಲು ಆತ್ಮವಿಶ್ವಾಸ ತುಂಬಿದ್ದೇವೆ. ಈ ಹಿಂದೆ ದೇಶದಲ್ಲಿ ಯಾವ ಸರ್ಕಾರವೂ ಕೊಟ್ಟ ಮಾತನ್ನು ಏಳೇ ತಿಂಗಳಲ್ಲಿ ಪೂರ್ಣಗೊಳಿಸಿರಲಿಲ್ಲ. ನಾಲ್ಕು ಗ್ಯಾರಂಟಿ ಜನರನ್ನು ತಲುಪಿದ್ದು, ಐದನೇ ಗ್ಯಾರಂಟಿ ಯುವನಿಧಿಗೆ ಇದೇ 12 ರಂದು ವಿವೇಕಾನಂದರ ಜಯಂತಿ ದಿನ ಶಿವಮೊಗ್ಗದಲ್ಲಿ ಚಾಲನೆ ನೀಡಲಿದ್ದೇವೆ. ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಹೊಸ ಸ್ವರೂಪದ ಕಾರ್ಯಕ್ರಮ ರೂಪಿಸಿದ್ದೇವೆ. ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಸಂದಾಯ ಮಾಡಿ ಪಾರದರ್ಶಕತೆ ಕಾಪಾಡಿಕೊಂಡಿದ್ದೇವೆ. ರಾಜ್ಯದ ಶೇ.80 ರಷ್ಟು ಕುಟುಂಬಗಳಿಗೆ ಈ ಯೋಜನೆ ತಲುಪಿದ್ದು, 3 ಕೋಟಿಗೂ ಹೆಚ್ಚು ಜನ ಇದರ ಫಲಾನುಭವಿಗಳಾಗಿದ್ದಾರೆ ಎಂದರು. ಇದನ್ನೂ ಓದಿ: ಸ್ತಬ್ಧಚಿತ್ರ ವಿಷಯದಲ್ಲಿ ಕೇಂದ್ರಕ್ಕೆ ದುರುದ್ದೇಶ ಇಲ್ಲ: ವಿಜಯೇಂದ್ರ

Karnataka Budget 2023 4 pre poll congress guarantee schemes to cost 57910 crore CM Siddaramaiah

ಜ.21 ರಂದು ರಾಜ್ಯದ ಕಾರ್ಯಕರ್ತರ ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷರು ಸೂಚಿಸಿದ್ದಾರೆ. ಶಾಸಕರು, ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಮುಖಂಡರು, ಸಹಕಾರ ಸಂಸ್ಥೆಗಳ ಪ್ರತಿನಿಧಿಗಳು, ಪದಾಧಿಕಾರಿಗಳು, ವಿವಿಧ ಘಟಕಗಳ ಪದಾಧಿಕಾರಿಗಳು, ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಗೆದ್ದವರು, ಸೋತವರು, ಬೂತ್ ಮಟ್ಟದ ಪ್ರತಿನಿಧಿಗಳನ್ನು ಸೇರಿಸಿ ಈ ಸಮಾವೇಶ ಮಾಡಲು ತಿಳಿಸಿದ್ದು, ಕಾರ್ಯಕ್ರಮ ಸ್ಥಳದ ಬಗ್ಗೆ ಎರಡು ದಿನಗಳಲ್ಲಿ ತಿಳಿಸುತ್ತೇವೆ. ಇಂದಿನ ಸಭೆಯಲ್ಲಿ ಮುಖ್ಯಮಂತ್ರಿಗಳು ಹಾಗೂ ನಮ್ಮ ಪಕ್ಷ ಶಾಸಕರು ಹಾಗೂ ಸಚಿವರಿಗೆ ಕೆಲವು ಸೂಚನೆ ನೀಡಿದ್ದೇವೆ. ಈ ತಿಂಗಳ ಒಳಗಾಗಿ ಆಶ್ರಯ ಸಮಿತಿ, ಆರಾಧನಾ ಸಮಿತಿ, ಇಂಧನ ಇಲಾಖೆ ಉಪಸಮಿತಿ, ನೀರಾವರಿ ಇಲಾಖೆ ಕೆರೆಗಳ ಸಮಿತಿ, ಕೆಡಿಪಿ ಸೇರಿದಂತೆ ಎಲ್ಲ ಸಮಿತಿಗಳಿಗೆ ನಾಮನಿರ್ದೇಶನ ಮಾಡಬೇಕು. ಜಿಲ್ಲಾಧ್ಯಕ್ಷರು ಹಾಗೂ ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ತಿಂಗಳ ಒಳಗಾಗಿ ಜಿಲ್ಲಾ ಮಂತ್ರಿಗಳು ನಾಮನಿರ್ದೇಶನ ಮಾಡಿ ಕಾರ್ಯಕರ್ತರಿಗೆ ಶಕ್ತಿ ತುಂಬಬೇಕು ಎಂದು ತಿಳಿಸಿದರು.

ಸಂಸತ್ ಚುನಾವಣೆ ದೃಷ್ಟಿಯಿಂದ ಪ್ರತಿ ಜಿಲ್ಲೆಗೂ ಓರ್ವ ಸಚಿವರಿಗೆ ಜವಾಬ್ದಾರಿ ನೀಡಿದ್ದೇವೆ. ಅವರ ಕೈಕೆಳಗೆ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿಧಾನ ಪರಿಷತ್ ಸದಸ್ಯರನ್ನು ನಿಯೋಜಿಸಿದ್ದೇವೆ. ಬ್ಲಾಕ್ ಮಟ್ಟದಲ್ಲಿ ಜವಾಬ್ದಾರಿಯನ್ನು ಹಂಚಿಕೆ ಮಾಡಿ ಮತದಾರರ ಪಟ್ಟಿ ಪರಿಷ್ಕರಣೆ, ಬಿಎಲ್ಎಗಳ ನೇಮಕ ಮಾಡಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಪಕ್ಷದ ಸಂಘಟನೆಗಳು, ಬ್ಲಾಕ್ ಮಟ್ಟದಲ್ಲಿ ಬದಲಾವಣೆ ಮಾಡಿ ಆದಷ್ಟು ಬೇಗ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ್ದೇವೆ. ಜಿಲ್ಲಾ ಹಾಗೂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮಾಡಲು ತೀರ್ಮಾನಿಲಾಗಿದೆ. ಫೆ.12 ರಂದು ವಿಧಾನಮಂಡಲದ ಅಧಿವೇಶನ ಆರಂಭವಾಗುವ ಸಾಧ್ಯತೆ ಇದೆ. ಹೀಗಾಗಿ ಮುಂದಿನ ತಿಂಗಳ 12ರ ಒಳಗಾಗಿ ಈ ಸಮಾವೇಶಗಳನ್ನು ನಡೆಸಬೇಕಿದೆ. ಜಿಲ್ಲಾ ಮಂತ್ರಿಗಳು ಈ ಸಮಾವೇಶಗಳ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಹೋಗಲ್ಲ: ಕಾಂಗ್ರೆಸ್

congress guarantee conditions

ಮನೆ, ಮನೆಗೆ ಕಾಂಗ್ರೆಸ್ ಎಂಬ ಕಾರ್ಯಕ್ರಮವನ್ನು ರೂಪಿಸುತ್ತಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡುತ್ತೇವೆ. ಇನ್ನು ಕಾರ್ಯಕರ್ತರಿಗೆ ಶಕ್ತಿ ತುಂಬಲು ನಿಗಮ ಮಂಡಳಿಗಳ ನೇಮಕದ ಮೊದಲ ಪಟ್ಟಿ ಸದ್ಯದಲ್ಲೇ ಪ್ರಕಟವಾಗಲಿದೆ. ಈ ಹುದ್ದೆಗಳ ಕಾಲವಧಿ 2 ವರ್ಷ. ಎಲ್ಲರಿಗೂ ಅವಕಾಶ ಸಿಗಲಿ ಎಂದು ಈ ಕಾಲಮಿತಿ ಮಾಡಿದ್ದೇವೆ. ಮುಂಬರುವ ಲೋಕಸಭಾ ಚುನಾವಣೆಗೆ ತಯಾರಿ ಬಗ್ಗೆ ಎಐಸಿಸಿ ನಾಯಕರು ನಮಗೆ ಅಜೆಂಡಾ ನಿಗದಿ ಮಾಡಿದ್ದಾರೆ. 28 ಕ್ಷೇತ್ರಗಳಿಗೆ ಮಂತ್ರಿಗಳನ್ನು ಉಸ್ತುವಾರಿಯಾಗಿ ನೇಮಕ ಮಾಡಿದ್ದು, ನಾಳೆ ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಾಲ್ಕು ರಾಜ್ಯಗಳ ಸಚಿವರುಗಳ ಸಭೆ ಕರೆಯಲಾಗಿದೆ. ಅಲ್ಲಿ ಯಾವ ರೀತಿ ಕೆಲಸ ಮಾಡಬೇಕು ಎಂಬುದರ ಬಗ್ಗೆ ತಿಳಿಸುತ್ತಾರೆ ಎಂದು ಮಾತನಾಡಿದರು.

ನಮ್ಮ ಬಳಿ ಹೆಚ್ಚಿನ ಕಾಲಾವಕಾಶವಿಲ್ಲ. ನಮ್ಮ ಕ್ಷೇತ್ರಗಳಲ್ಲಿ ಕೆಲಸ ಆರಂಭಿಸಬೇಕಿದೆ. ಕಳೆದ ಚುನಾವಣೆಯಲ್ಲಿ ತೋರಿದ ಒಗ್ಗಟ್ಟನ್ನು ಈ ಬಾರಿಯ ಚುನಾವಣೆಯಲ್ಲಿ ಇನ್ನೂ ದೊಡ್ಡದಾಗಿ ಪ್ರದರ್ಶಿಸಬೇಕಿದೆ. ನಮ್ಮ ವೈಯಕ್ತಿಕ ಹಿತಾಸಕ್ತಿಗಿಂತ ರಾಜಕೀಯ ಹಿತಾಸಕ್ತಿ ಬಗ್ಗೆ ಗಮನಹರಿಸಬೇಕು. ಪಕ್ಷ ನಮ್ಮ ಮೇಲೆ ಭರವಸೆ ಇಟ್ಟುಕೊಂಡಿದ್ದು, ನಾವು ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ನನಗೆ ಬಂದಿರುವ ವರದಿಗಳು ತೃಪ್ತಿಕರವಾಗಿಲ್ಲ. ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮುಖ್ಯಮಂತ್ರಿಗಳು, ನಾನು ಹಾಗೂ ಎಐಸಿಸಿ ಸಮೀಕ್ಷೆ ನಡೆಸುತ್ತಿದ್ದೇವೆ. ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೆ ಗುರುತಿನ ಚೀಟಿ ನೀಡಲು ನಾವು ಚರ್ಚೆ ಮಾಡಿದ್ದು, ಅದನ್ನು ಕಾರ್ಯಕರ್ತರ ಕೈಯಲ್ಲಿ ಹಂಚಿಕೆ ಮಾಡಿಸಲು ತೀರ್ಮಾನಿಸಿದ್ದೇವೆ. ಕಾರ್ಯಕರ್ತರ ಬಲವರ್ಧನೆಗಾಗಿ ಕಳೆದ ಒಂದು ವಾರದಿಂದ ಎಐಸಿಸಿ ನಾಯಕರ ಜತೆ ಚರ್ಚೆ ಮಾಡಿ ಕೆಲವು ನಿರ್ಧಾರಗಳನ್ನು ಮಾಡಿದ್ದೇವೆ. ಐದು ಗ್ಯಾರಂಟಿ ಯೋಜನೆಗಳು ಪ್ರತಿಯೊಂದು ಕುಟುಂಬದ ಅಭಿವೃದ್ಧಿಗೆ ಪೂರಕವಾಗಿರುವ ವಿಚಾರವನ್ನು ನೀವು ಜನರಿಗೆ ಮನದಟ್ಟು ಮಾಡಿಕೊಡಬೇಕು ಎಂದು ತಿಳಿಸಿದರು. ಇದನ್ನೂ ಓದಿ: ರಾಮಮಂದಿರ ದೇಶದ ಕತೆಯ ಪ್ರತಿಬಿಂಬ; ರಾಮನ ಬಗ್ಗೆ ಅಪಪ್ರಚಾರ ಸಲ್ಲದು: ಗುರೂಜಿ ರಿತೇಶ್ವರ್ ಮಹಾರಾಜ್

TAGGED:Congress Guaranteed k shivakumarಕಾಂಗ್ರೆಸ್‌ ಗ್ಯಾರಂಟಿಡಿ.ಕೆ.ಶಿವಕುಮಾರ್
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
29 minutes ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
31 minutes ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
49 minutes ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
2 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
2 hours ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?