ಹುಬ್ಬಳ್ಳಿ: ನಾವೇನು ದೊಡ್ಡ ಸಮಾವೇಶ ಮಾಡಿ ವಿದ್ಯಾರ್ಥಿಗಳ ದುರ್ಬಳಕೆ ಮಾಡಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
Advertisement
ರಸ್ತೆ ಉದ್ಘಾಟನೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳ ಬಳಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವೇನು ದೊಡ್ಡ ಸಮಾವೇಶ ಮಾಡಿ ವಿದ್ಯಾರ್ಥಿಗಳ ದುರ್ಬಳಕೆ ಮಾಡಿಲ್ಲ. ಈ ಭಾಗದಲ್ಲಿ ಅಭಿವೃದ್ದಿ ಕೆಲಸಗಳು ಆಗಿದ್ದಕ್ಕೆ ಮಕ್ಕಳು ಅಭಿನಂದನೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳನ್ನ ಬಳಕೆ ಮಾಡಿಕೊಂಡಿರೋದನ್ನ ಅನ್ಯತಾ ಭಾವಿಸಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಜೂ.ಎನ್‍ಟಿಆರ್ ಜೊತೆ ನಟಿಸಬೇಕು ಎಂದಾಗ ಶಾಕ್ ಆಗಿತ್ತು: ರಾಮ್ ಚರಣ್
Advertisement
Advertisement
ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಕೇವಲ ಹುಳ ಬಿಡುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಹೋಗೋದಕ್ಕೆ ಯಾರೂ ತಯಾರಿಲ್ಲ. ಸಿಎಂ ಆಗಬೇಕು ಎಂದು ಸಿದ್ದರಾಮಯ್ಯ ಹಾಗೂ ಡಿಕೆಶಿ ಪ್ರತಿದಿನ ಹೊಡೆದಾಡುತ್ತಿದ್ದಾರೆ. ಅವರಿಬ್ಬರು ಸಿಎಂ ಆಗೋ ಭ್ರಮೆಯಲ್ಲಿದ್ದಾರೆ. ಅವರಲ್ಲಿಯೇ ಕಿತ್ತಾಟ ಶುರುವಾಗಿದೆ ಎಂದು ವ್ಯಂಗ್ಯವಾಡಿದರು.
Advertisement
ಕಾಂಗ್ರೆಸ್ ನಲ್ಲಿಯೇ ಕಿತ್ತಾಟ ಶುರುವಾಗಿರುವ ಪರಿಸ್ಥಿತಿಯಲ್ಲಿ ಬಿಜೆಪಿ ತೊರೆದು ಯಾರೂ ಹೋಗಲ್ಲ. ಚುನಾವಣೆ ಬಂದಾಗ ಮಾತ್ರ ಕಾಂಗ್ರೆಸ್ ಅವರು ಇಂತಹ ಗಿಮಿಕ್ ಶುರು ಮಾಡುತ್ತಾರೆ. ಆ ರೀತಿ ಯಾರಾದರೂ ಸಂಪರ್ಕದಲ್ಲಿದ್ದರೆ ಅವರ ಹೆಸರುಗಳನ್ನ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ್ದು, 2023ರ ಚುನಾವಣೆ ನಂತರ ಕಾಂಗ್ರೆಸ್ ತನ್ನ ಸಂಪೂರ್ಣ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು ನುಡಿದರು. ಇದನ್ನೂ ಓದಿ: ಗುಡಿಸಲಿನ ಮೇಲೆ ಬಿದ್ದ ಟ್ರಕ್ – ಮೂವರು ಅಪ್ರಾಪ್ತ ಸಹೋದರಿಯರು ಬಲಿ
ಡಿಕೆಶಿ ಪ್ಲಾನ್ ಗೆ ರಮೇಶ್ ಜಾರಕಿಹೊಳಿ ಅವರಿಂದ ರೀವರ್ಸ್ ಆಪರೇಶನ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆ ರೀತಿಯ ಯಾವುದೇ ಬೆಳವಣಿಗೆ ನಮ್ಮಲ್ಲಿ ನಡೆದಿಲ್ಲ. ರಾಜ್ಯಾಧ್ಯಕ್ಷರಾಗಲಿ, ಸಿಎಂ ಆಗಲಿ ಈ ಬಗ್ಗೆ ಏನೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.