ಬೆಂಗಳೂರು: 3 ಕ್ಷೇತ್ರಗಳ ಉಪ ಚುನಾವಣೆಗೆ ನಾವು ಸಿದ್ಧರಾಗಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಉಪಚುನಾವಣೆ ಎದುರಿಸಲು ನಾವು ಸಿದ್ಧರಾಗಿದ್ದೇವೆ. ಚುನಾವಣೆಗೆ ಎಲ್ಲಾ ತಯಾರಿ ಮಾಡಿಕೊಂಡಿದ್ದೇವೆ. ಉಪಚುನಾವಣೆಯನ್ನು ಸಮರ್ಥವಾಗಿ ಎದುರಿಸುತ್ತೇವೆ ಎಂದರು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದಿದ್ದು ಸರಿಯಾಗಿದೆ: ಮಧು ಬಂಗಾರಪ್ಪ
ರಾಜ್ಯಕ್ಕೆ ತೆರಿಗೆ ಅನ್ಯಾಯ ವಿಚಾರ ಮತ್ತೆ ದೆಹಲಿಯಲ್ಲಿ ಪ್ರತಿಭಟನೆ ಮಾಡೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರದ ವಿರುದ್ಧ ದೆಹಲಿಯಲ್ಲಿ (Delhi) ಪ್ರತಿಭಟನೆ ಮಾಡೋ ವಿಚಾರ ಸದ್ಯಕ್ಕೆ ಚರ್ಚೆ ಆಗಿಲ್ಲ. ಪ್ರತಿಭಟನೆ ಮಾಡೋ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಅಂತ ತಿಳಿಸಿದರು. ಇದನ್ನೂ ಓದಿ: ಮಹಿಷಾಸುರನ ರೀತಿ ನೀವು ಸಂಹಾರ ಆಗ್ತೀರಾ: ಸಿಎಂ ವಿರುದ್ಧ ಈಶ್ವರಪ್ಪ ಕಿಡಿ