ಚಿಕ್ಕೋಡಿ: ಬಿಜೆಪಿ (BJP) ಪಕ್ಷದಿಂದ ಕಾಂಗ್ರೆಸ್‌ಗೆ (Congress) ಸಚಿವರು, ಶಾಸಕರು ಸೇರುವ ಪ್ರಯತ್ನ ಯಾರೂ ಮಾಡುತ್ತಿಲ್ಲ. ಕಾಂಗ್ರೆಸ್‌ನಿಂದ ಬರುವವರಿಗೆ ಸ್ವಾಗತ, ಹೋಗುವವರನ್ನು ಗೌರವಯುತವಾಗಿ ಕಳುಹಿಸಿಕೊಡುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಹೇಳಿದರು.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೋಮಣ್ಣನವರು ಪಕ್ಷ ಬಿಡುತ್ತಾರೆ ಎನ್ನುವುದರಲ್ಲಿ ಸತ್ಯಾಂಶ ಇಲ್ಲ. ಇಲ್ಲಿಂದ ಹೋದ ಮೇಲೆ ಸೋಮಣ್ಣ ಅವರನ್ನು ಕರೆದು ಮಾತಾಡುತ್ತೇನೆ. ಆ ರೀತಿಯ ಯಾವ ಭಿನ್ನಾಭಿಪ್ರಾಯವೂ ಇಲ್ಲ. ಎಲ್ಲರೂ ಒಟ್ಟಾಗಿದ್ದೇವೆ ಎಂದರು.
Advertisement
Advertisement
ವಿ ಸೋಮಣ್ಣ, ಡಿಕೆ ಶಿವಕುಮಾರ್ ಭೇಟಿಯಾಗಿದ್ದಾರೆ ಎಂಬ ವಿಚಾರಕ್ಕೆ ಉತ್ತರಿಸಿದ ಅವರು, ಡಿಕೆ ಶಿವಕುಮಾರ್ ಅವರು ಎಲ್ಲರನ್ನೂ ಕರೆದು ಮಾತನಾಡುವುದು ನಿರಂತರವಾಗಿ ಮಾಡುತ್ತಿದ್ದಾರೆ. ಆ ರೀತಿ ಯಾವುದಕ್ಕೂ ನಮ್ಮ ಮುಖಂಡರು ಬೆಲೆ ಕೊಡುತ್ತಿಲ್ಲ. ಯಾರೂ ಸಹ ಅವರ ಮಾತಿಗೆ ಬಲಿಯಾಗುವುದಿಲ್ಲ. ಕಾಂಗ್ರೆಸ್‌ನವರಿಗೆ ಸೋಲಿನ ಭೀತಿ ಕಾಡುತ್ತಿದೆ. ಕಾಂಗ್ರೆಸ್‌ನಿಂದ ಬರುವವರಿಗೆ ಸ್ವಾಗತ, ಹೋಗುವವರನ್ನು ಗೌರವಯುತವಾಗಿ ಕಳುಹಿಸಿಕೊಡುತ್ತೇವೆ. 17 ಜನರಲ್ಲೂ ಯಾರೊಬ್ಬರೂ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕಾಂಗ್ರೆಸ್, ಜೆಡಿಎಸ್ ತೊರೆದು ಕೆಲವು ನಾಯಕರು ಬಿಜೆಪಿಗೆ ಬರಲಿದ್ದಾರೆ: ರವಿಕುಮಾರ್
Advertisement
ಅಧಿಕಾರಕ್ಕೆ ಬರುವವರು ಪಕ್ಷ ಬಿಟ್ಟು ಯಾಕೆ ಹೋಗುತ್ತಾರೆ? ಅವತ್ತಿನಿಂದ ಇವತ್ತಿನವರೆಗೂ ಪಕ್ಷ ಕಟ್ಟಲು ಬೆನ್ನೆಲುಬಾಗಿ ಸಹಕಾರ ನೀಡಿದ್ದಾರೆ. ಆ ತರ ಯಾರೊಬ್ಬರೂ ಸಹ ಪಕ್ಷ ಬಿಟ್ಟು ಹೋಗಲ್ಲ ಎಂದರು.
Advertisement
ಸೋಲಿನ ಭೀತಿಯಿಂದ ರಾಜ್ಯಕ್ಕೆ ಪದೇ ಪದೇ ಮೋದಿ, ಅಮಿತ್ ಶಾ ಬರುತ್ತಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರಯಿಕ್ರಿಯಿಸಿದ ಅವರು, ಸಿದ್ದರಾಮಯ್ಯನವರು ಹಾಗೆ ಹೇಳಿರುವುದರಿಂದ ನಮಗೆ ತೊಂದರೆ ಇಲ್ಲ. ಅವರು ಬರ್ತಾಯಿರುವುದರಿಂದ ಕಾಂಗ್ರೆಸ್‌ಗೆ ಸೋಲಿನ ಭೀತಿ ಜಾಸ್ತಿ ಆಗಿದೆ ಎನ್ನುವುದು ನಿಜ. ಅದನ್ನು ಅವರೇ ಒಪ್ಪಿಕೊಂಡಿದ್ದಾರೆ. ಅದಕ್ಕೆ ಸಂತೋಷ ಪಡುತ್ತೇನೆ. ಕರ್ನಾಟಕಕ್ಕೆ ನಿರಂತರವಾಗಿ ಅವರು ಹೆಚ್ಚು ಒತ್ತು ಕೊಡುತ್ತಿದ್ದಾರೆ. ಅದಕ್ಕೆ ಅವರು ಬರುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಅಂಬೇಡ್ಕರ್ ಮರಣಹೊಂದಿದಾಗಲೂ ಕಾಂಗ್ರೆಸ್ 6*3 ಅಡಿ ಜಾಗ ಕೊಟ್ಟಿರಲಿಲ್ಲ – ಸಿ.ಟಿ ರವಿ ಕಿಡಿ