ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ (Belagavi Session) ಈ ಬಾರಿ ಸರ್ಕಾರವನ್ನ ಸಮರ್ಥವಾಗಿ ಎದುರಿಸಿ ಕಟ್ಟಿ ಹಾಕಿದ್ದೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ತಿಳಿಸಿದರು.
ಬೆಳಗಾವಿ ಅಧಿವೇಶನ ಕುರಿತು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಈ ಬಾರಿ ಬಿಜೆಪಿ ಒಗ್ಗಟ್ಟಿನಿಂದ ಸರ್ಕಾರದ ವಿರುದ್ಧ ಹೋರಾಟ ಮಾಡಿದೆ. ಈ ಬಾರಿ 5 ದಿನ ಮಾತ್ರ ನಮಗೆ ಚರ್ಚೆಗೆ ಅವಕಾಶ ಸಿಕ್ತು. ಅದರಲ್ಲಿ ವಕ್ಫ್, ಬಾಣಂತಿಯರ ಸಾವು, ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಮಾಡಿ ಸರ್ಕಾರದ ವಿರುದ್ಧ ಪ್ರಬಲವಾಗಿ ಹೋರಾಟ ಮಾಡಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ನನ್ನ ವಿರುದ್ಧ ಸಂಚು: ನ್ಯಾಯಾಂಗ ತನಿಖೆಗೆ ಆಗ್ರಹಿಸಿದ ಸಿಟಿ ರವಿ
Advertisement
Advertisement
ವಕ್ಫ್ ಬೋರ್ಡ್ ವಿಚಾರವಾಗಿ ನಮ್ಮ ಹೋರಾಟದ ಫಲವಾಗಿ ಸರ್ಕಾರ ನ್ಯಾಯಾಂಗ ತನಿಖೆ ಮಾಡಿದೆ. ಬಾಣಂತಿಯರ ಸಾವು ವಿಚಾರದಲ್ಲೂ ನ್ಯಾಯಾಂಗ ತನಿಖೆ ಮಾಡಲು ಒಪ್ಪಿದ್ದು, ಇದು ನಮ್ಮ ಹೋರಾಟದ ಫಲ ಎಂದರು.
Advertisement
Advertisement
ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ. 30 ಕ್ಕೂ ಹೆಚ್ಚು ಶಾಸಕರು ಚರ್ಚೆ ಮಾಡಿದ್ದಾರೆ. ನಮ್ಮ ಶಾಸಕರು ಒಂದಲ್ಲ ಒಂದು ವಿಚಾರದಲ್ಲಿ ಮಾತಾಡೋ ವ್ಯವಸ್ಥೆ ಮಾಡಿದ್ದೇನೆ. ನಮ್ಮ ಎಲ್ಲಾ ಶಾಸಕರಿಗೆ ಮಾತಾಡಲು ಅವಕಾಶ ಮಾಡಿಕೊಟ್ಟಿದ್ದೇನೆ. ಉತ್ತರ ಕರ್ನಾಟಕ ಚರ್ಚೆ ಬಗ್ಗೆ ನೀಲನಕ್ಷೆ ಇರಬೇಕು ಅಂತ ಸರ್ಕಾರಕ್ಕೆ ಹೇಳಿದ್ದೇವೆಂದರು. ಸಿಎಂ ಸಂತೆ ಭಾಷಣ ಬಿಟ್ಟ ಘೋಷಣೆ ಮಾಡಿದ ಕಾರ್ಯಕ್ರಮ ಅನುಷ್ಠಾನ ಮಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಆ ಬಣ ಈ ಬಣ ಎನ್ನದೇ ಒಗ್ಗಟ್ಟು ಪ್ರದರ್ಶಿಸಿದ ಬಿಜೆಪಿ ನಾಯಕರು