ಬೆಂಗಳೂರು: ಕಿರುತೆರೆ ನಟಿ ಸೌಜನ್ಯ ಅಲಿಯಾಸ್ ಸವಿ ಮಾದಪ್ಪ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸವಿ ಮಾದಪ್ಪ ತಂದೆ ನಟ ವಿವೇಕ್ ವಿರುದ್ಧ ದೂರು ದಾಖಲಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ವಿವೇಕ್, ಸಾವಿಗೆ ಕಾರಣ ಏನು ಅನ್ನೋದು ಗೊತ್ತಿಲ್ಲ. ನಾನು ಪೊಸ್ಟ್ ಮಾರ್ಟಂ ರಿಪೋರ್ಟ್ ಗಾಗಿ ಕಾಯುತ್ತಿದ್ದೇನೆ. ತನಿಖೆ ಬಳಿಕ ಸಾವಿನ ಕಾರಣ ಗೊತ್ತಾಗುತ್ತೆ. ನಾನು ಅದಕ್ಕೆ ಕಾಯುತ್ತಿದ್ದೇನೆ. ಆಕೆಯ ಹೆತ್ತವರು ಮಾತನಾಡುತ್ತಿದ್ದಾರೆ ಮಾತಾಡಲಿ ಎಂದರು. ಇದನ್ನೂ ಓದಿ: ಚಪಾತಿ, ಪಲ್ಯ ಮಾಡಿದ್ದೆ, ತಿನ್ನೋಕೆ ಮಗಳೇ ಬರಲಿಲ್ಲ- ನಟಿ ಸೌಜನ್ಯ ತಾಯಿ ಕಣ್ಣೀರು
ನಾನು ಏನು ಮಾತನಾಡುವುದಿಲ್ಲ. ಆಕೆ ಒಂದು ವರ್ಷದಿಂದ ಪರಿಚಯ. ಮ್ಯೂಚುವಲ್ ಫ್ರೆಂಡ್‍ನಿಂದ ಪರಿಚಯವಾಗಿದ್ದೇವೆ. ಆಕೆಗೆ ಬೇಜಾರಾದಾಗ ನನಗೆ ಆಗಾಗ ಸಿಗುತ್ತಿದ್ದಳು. ತುಂಬಾ ಇನೋಸೆಂಟ್, ಒಬಿಡಿಯಂಟ್ ಆಗಿದ್ದಳು. ಸಾವಿಗೆ ಕಾರಣ ಏನು ಅನ್ನೋದು ಗೊತ್ತಿಲ್ಲ. ವಿವೇಕ್ ಆಗಿರುವ ನಾನೇ ಹೇಳುತ್ತಿದ್ದೇನೆ. ನಡೆದಿರುವ ವಿಚಾರ ನನಗೆ ಗೊತ್ತಿಲ್ಲ. ಅಪ್ಸೆಟ್ ಆಗಿದ್ಲು ನಾನು ಕೇಳಿದ್ದೆ ಅಷ್ಟೇ. ಪೊಲೀಸರು ತನಿಖೆ ನಡೆಸಿದ ಬಳಿಕ ವಿಚಾರ ಗೊತ್ತಾಗುತ್ತೆ ಕಾಯಬೇಕು ಎಂದು ತಿಳಿಸಿದರು.
ಸೌಜನ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ತಂದೆ ನಟ ವಿವೇಕ್ ಹಾಗೂ ಸವಿ ಮಾದಪ್ಪ ಪಿ.ಎ ವಿರುದ್ಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ನನ್ನ ಮಗಳ ಸಾವಿಗೆ ತೆಲುಗು ನಟ ಕಾರಣ- ಸೌಜನ್ಯ ತಂದೆ ದೂರು
ಕನ್ನಡ ಕಿರುತೆರೆಗಳಲ್ಲಿ ನಟಿಸುತ್ತಿದ್ದ ನಟಿ ಸೌಜನ್ಯ(25) ಇಂದು ಬೆಂಗಳೂರಿನ ದೊಡ್ಡಬೆಲೆ ಗ್ರಾಮದ ಕುಂಬಳಗೋಡು ಅಪಾರ್ಟ್‍ಮೆಂಟ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಸೌಜನ್ಯ ಮೂಲತಃ ಕೊಡಗು ಜಿಲ್ಲೆಯ ಕುಶಾಲನಗರದವರಾಗಿದ್ದು, ಕನ್ನಡದ ಚೌಕಟ್ಟು, ಫನ್ ಎಂಬ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.