– ಸಿಎಲ್‍ಪಿ ಸಭೆಗೆ ಹಾಜರಾಗುತ್ತೇನೆ
ಬೆಂಗಳೂರು: ಎಲ್ಲರೂ ಅಲ್ಲಲ್ಲಿ ಇದ್ವಿ ಅಷ್ಟೇ. ಕೆಲವರು ಏನೇನೋ ಹೇಳುತ್ತಾರೆ. ಅದನ್ನೆಲ್ಲಾ ನಾವು ನೀವು ನಂಬುವುದಕ್ಕೆ ಆಗುತ್ತಾ ಎಂದು ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ ಹೇಳಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣ ಹಿನ್ನಲೆಯಲ್ಲಿ ಶಾಸಕರಾದ ನಾಗೇಂದ್ರ ಹಾಗೂ ಆನಂದ್ ಸಿಂಗ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರಾಗಿದ್ದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ನಾಗೇಂದ್ರ ಅವರು, ಆನಂದ್ ಸಿಂಗ್ ಅವರ ಜೊತೆಯಲ್ಲಿ ಮೊದಲಿಂದಲೂ ಇದ್ದೇನೆ. ನಮ್ಮಿಂದ ಸರ್ಕಾರಕ್ಕೆ ಸಂಕಷ್ಟ ಇಲ್ಲ. ನಾವು ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರಾಗಿ ಇದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
Advertisement
Advertisement
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಭಾಗವಹಿಸುವ ಕುರಿತು ಪ್ರತಿಕ್ರಿಯೆ ನೀಡಿದ ಶಾಸಕರು, ವಿಧಾನಸೌಧದಲ್ಲಿ ನಾಳೆ ನಡೆಯುವ ಸಭೆಗೆ ಹಾಜರಾಗುತ್ತೇವೆ. ಕೋರ್ಟ್ ನಲ್ಲಿರುವ ಪ್ರಕರಣ ಇತ್ಯರ್ಥವಾಗುತ್ತಿದ್ದಂತೆ ಮಾಧ್ಯಮಗಳ ಮುಂದೆ ಬಂದು ಸ್ಪಷ್ಟೀಕರಣ ನೀಡುತ್ತೇನೆ ಎಂದರು.
Advertisement
ಕೋರ್ಟ್ ಆವರಣದಲ್ಲಿ ಶಾಸಕರು ಕೆಲಹೊತ್ತು ಆಪ್ತ ಸಮಾಲೋಚನೆ ನಡೆಸಿದರು. ಈ ವೇಳೆ ಆನಂದ್ ಸಿಂಗ್ ಅವರಿಗೆ ಸಂಬಂಧಿ ಅಜಯ್ ಸಿಂಗ್ ಸಾಥ್ ನೀಡಿದರು. ಇದನ್ನು ಓದಿ: ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಇದ್ದರಿಂದ ನ್ಯಾಯಾಲಯಕ್ಕೆ ಹಾಜರಾಗಿಲ್ಲ- ಶಾಸಕ ನಾಗೇಂದ್ರ
Advertisement
ಪ್ರಕರಣ ಏನು?:
ವಿಜಯನಗರ ಶಾಸಕ ಆನಂದ್ ಸಿಂಗ್ ಹಾಗೂ ಶಾಸಕ ಬಿ ನಾಗೇಂದ್ರ ಅವರ ಮೇಲಿರುವ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿತ್ತು. ಈ ಪ್ರಕರಣದ ವಿಚಾರಣೆಗೆ ಶಾಸಕರು ಹಾಜರಾಗುತ್ತಿರಲಿಲ್ಲ. ಇದರಿಂದಾಗಿ ಹಲವು ಬಾರಿ ಸಮನ್ಸ್ ಅನ್ನು ಕೂಡ ಜಾರಿ ಮಾಡಲಾಗಿತ್ತು. ಆದರೂ ಶಾಸಕರು ನ್ಯಾಯಾಲಯಕ್ಕೆ ಗೈರಾಗಿದ್ದರಿಂದ ನ್ಯಾಯಾಧೀಶ ಬಿ.ವಿ.ಪಾಟೀಲ್ ಅವರು ಈ ಹಿಂದೆ ವಾರಂಟ್ ಜಾರಿ ಮಾಡಿದ್ದರು. ವಾರಂಟ್ ಜಾರಿಯಾದ ಹಿನ್ನೆಲೆಯಲ್ಲಿ ಶಾಸಕರು ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv