ಶಿವಮೊಗ್ಗ: ಗುಲಾಮಗಿರಿ ಮಸೀದಿ ಒಡೆದು ರಾಮಮಂದಿರ ಕಟ್ಟಿದ್ದೇವೆ. ಮಥುರಾದಲ್ಲೂ ಶ್ರೀಕೃಷ್ಣನ ದೇವಸ್ಥಾನ ಕಟ್ಟೇ ಕಟ್ಟುತ್ತೇವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ (K.S.Eshwarappa) ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ (Shivamogga) ಮಾತನಾಡಿದ ಅವರು, 496 ವರ್ಷದ ಕೆಳಗೆ ಅಯೋಧ್ಯೆಯಲ್ಲಿ ರಾಮಮಂದಿರ ಧ್ವಂಸ ಮಾಡಿದ್ದರು. ಬಾಬರ್ ಮಸೀದಿ ಕಟ್ಟಿದ್ದರು. ಗುಲಾಮಗಿರಿ ಮಸೀದಿ ಹೊಡೆದು ರಾಮಮಂದಿರ ಕಟ್ಟಿದ್ದೇವೆ. ನಮ್ಮೆಲ್ಲರ ಸೌಭಾಗ್ಯ, ನಾವು ಬದುಕಿರುವ ದಿನದಲ್ಲೇ ಬಾಲರಾಮನ ವಿಗ್ರಹ ಪ್ರತಿಷ್ಠಾಪನೆ ಆಗ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Ayodhya Ram Mandir – ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ಪ್ರತಿಮೆ ಆಯ್ಕೆ?
Advertisement
Advertisement
ಗುಲಾಮಗಿರಿ ಸಂಕೇತ ಹೋಗಿ ಸ್ವಾಭಿಮಾನ ಸಂಕೇತ ನಿರ್ಮಾಣ ಆಗಿದೆ. ಮನೆ ಮನೆಗೆ ಮಂತ್ರಾಕ್ಷತೆ ಕೊಡ್ತಿದ್ದೇವೆ. ಜ.22 ರಂದು ದೇವರ ಮನೆಯಲ್ಲಿ ಇಟ್ಟು ಪೂಜೆ ಮಾಡಿ ಸಿಹಿ ತಯಾರಿಸಿ ಊಟ ಮಾಡಿ. ದೀಪಾವಳಿ ಹಬ್ಬದ ರೀತಿ ಆಚರಣೆ ಮಾಡಿ ಎಂದು ತಿಳಿಸಿದ್ದಾರೆ.
Advertisement
ಪವಿತ್ರವಾದ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ರಾಜಕಾರಣ ಮಾತನಾಡಲ್ಲ. ಪ್ರಭು ಶ್ರೀರಾಮಚಂದ್ರನ ಭಕ್ತರು ಇದ್ದಾರೋ, ಅವರಿಗೆ ಆಹ್ವಾನ ಕೊಟ್ಟಿದ್ದೇವೆ. ಬಿಜೆಪಿಯ ರಾಮ ಎನ್ನುವವರಿಗೆ ಕೇಂದ್ರದ ನಾಯಕರು ಆಹ್ವಾನ ಕೊಟ್ಟಿಲ್ಲ. ರಾಮನ ಬಗ್ಗೆ ಯಾರಿಗೆ ಗೌರವ ಇದೆ, ಅಭಿಮಾನ ಇದೆ ಎಲ್ಲರೂ ಬರಬಹುದು ಎಂದು ವಿಪಕ್ಷಗಳಿಗೆ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಶ್ರೀರಾಮನ ಭಕ್ತರಿಗೆ ಮಾತ್ರ ಅಯೋಧ್ಯೆಗೆ ಆಹ್ವಾನ: ಉದ್ಧವ್ ಠಾಕ್ರೆಗೆ ಆಚಾರ್ಯ ಸತ್ಯೇಂದ್ರ ದಾಸ್ ತಿರುಗೇಟು
Advertisement
ಅಯೋಧ್ಯೆಯಲ್ಲಿ ರಾಮಮಂದಿರ ಆಗಬೇಕು ಎನ್ನುವ ತೀರ್ಮಾನ ಆಗುತ್ತಿದ್ದಂತೆ, ಕಾಶಿ ಮಥುರಾದಲ್ಲಿ ಸರ್ವೇಗೆ ಆದೇಶ ಆಗಿದೆ. ನಮ್ಮ ಪರವಾಗಿ ತೀರ್ಪು ಬರುತ್ತದೆ. ಕಾಶಿಯಲ್ಲೂ ಮಸೀದಿ ಒಡೆದುಹಾಕಿ ಕಾಶಿ ಮಂದಿರ ಕಟ್ಟುತ್ತೇವೆ. ಮಥುರಾದಲ್ಲೂ ಶ್ರೀಕೃಷ್ಣನ ದೇವಸ್ಥಾನ ಕಟ್ಟಿಯೇ ಕಟ್ಟುತ್ತೇವೆ ಎಂದು ಮಾತನಾಡಿದ್ದಾರೆ.