ಯಾವ್ಯಾವ ತೆರಿಗೆ ಹೆಚ್ಚಿಸಬೇಕು ಅನ್ನೋದನ್ನ ಪರಿಶೀಲನೆ ಮಾಡ್ತೀವಿ – ಡಿಸಿಎಂ ಡಿಕೆಶಿ

Public TV
2 Min Read
DK SHIvakumar 1

ಬೆಂಗಳೂರು: ನಗರದಲ್ಲಿ ಎಲ್ಲೆಲ್ಲಿ ಸಂಪನ್ಮೂಲ ಸೋರಿಕೆಯಾಗುತ್ತಿದೆ? ಎಲ್ಲೆಲ್ಲಿ ತೆರಿಗೆ ವಂಚನೆಯಾಗುತ್ತಿದೆ? ಯಾವ-ಯಾವ ತೆರಿಗೆಗಳನ್ನ (Tax) ಹೆಚ್ಚಿಸಬೇಕು? ಎಂಬುದರ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಡಿಸಿಎಂ ಆಗಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

ಬೆಂಗಳೂರಿನಲ್ಲಿ ತ್ಯಾಜ್ಯ ವಿಲೇವಾರಿ ಘಟಕಗಳು (Bengaluru Waste Disposal Unit) ಹಾಗೂ ಇಂದಿರಾ ಕ್ಯಾಂಟಿನ್ ಗಳ ಕಾರ್ಯವೈಖರಿ ಪರಿಶೀಲನೆಗೆ ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ನಲ್ಲಿ ತಿಂಡಿ ತಿನ್ನಲು 500 ರೂ. ಕಂತೆಯನ್ನೇ ಹೊರತೆಗೆದ ಡಿಕೆಶಿ

DK Shivakumar 4

ಇಂದು ಅಧಿಕಾರಿಗಳಿಗೆ ಮಾಹಿತಿ ನೀಡದೇ ಇಂದಿರಾ ಕ್ಯಾಂಟೀನ್ (Indira Canteen), ಘನತ್ಯಾಜ್ಯ ಸಂಸ್ಕರಣ ಘಟಕಗಳಿಗೆ ಭೇಟಿ ನೀಡಿದ್ದೇನೆ. ಇಂದಿರಾ ಕ್ಯಾಂಟೀನ್ ನಲ್ಲಿ ಕೆಲವು ವ್ಯವಸ್ಥೆಗಳನ್ನು ಗಮನಿಸಿದ್ದೇನೆ. ಜೊತೆಗೆ ಘನತ್ಯಾಜ್ಯ ಘಟಕಗಳಲ್ಲಿ ಪರಿಶೀಲನೆ ಮಾಡಿದ್ದು, ಅಲ್ಲಿನ ಕಾರ್ಯವೈಖರಿ ತೃಪ್ತಿದಾಯಕವಾಗಿಲ್ಲ. ಮೊದಲು ಸರ್ಕಾರದ ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದೇನೆ. ನಂತರ ಕಸ ವಿಲೇವಾರಿ ಸ್ಥಳಕ್ಕೆ ಭೇಟಿ ನೀಡುತ್ತೇನೆ. ಈ ಎಲ್ಲ ಸಂಸ್ಥೆಗಳ ಕಾರ್ಯವೈಖರಿ ಸರಿಯಾದ ರೀತಿಗೆ ತರುವ ಕೆಲಸವನ್ನು ಮೊದಲು ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಮಂಗಳೂರಿನಲ್ಲಿ ಕಾರ್ಮಿಕನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಅಂಗಡಿ ಮಾಲೀಕ

DK Shivakumar

ಕಸದಿಂದ ಇಂಧನ ಉತ್ಪಾದನೆ ಮಾಡುವುದಾಗಿ ಹೇಳಿ ಜವಾಬ್ದಾರಿ ವಹಿಸಿಕೊಂಡವರು ಇಂಧನ ಉತ್ಪಾದನೆ ಮಾಡುತ್ತಿಲ್ಲ. ಈ ಘಟಕಗಳ ಕಾರ್ಯವೈಖರಿ ಬಗ್ಗೆ ಅಧಿಕಾರಿಗಳೂ ಪರಿಶೀಲನೆ ಮಾಡ್ತಿಲ್ಲ. ಬೆಂಗಳೂರು ನಗರ ಸ್ವಚ್ಛವಾಗಿಡಬೇಕು. ಆದ್ರೆ ರಸ್ತೆ ಮಧ್ಯದಲ್ಲಿ ಕಸದ ರಾಶಿ ಇರುವ ಬಗ್ಗೆ ಪರಿಶೀಲನೆ ಮಾಡಿ ಅಧಿಕಾರಿಗಳನ್ನ ಪ್ರಶ್ನಿಸಿದ್ದೇನೆ. ಈ ಮಧ್ಯೆ ಲಾರಿ ಮಾಲೀಕರ ಸಂಘದ ಜೊತೆ ಚರ್ಚೆ ಮಾಡುವಂತೆ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

DK Shivakumar 3

ಕಸ ತಂದು ರಸ್ತೆಗೆ ಸುರಿಯುತ್ತಿರುವ ವಾಹನಗಳ ಬಗ್ಗೆ ಗಮನಹರಿಸಬೇಕು. ತ್ಯಾಜ್ಯ ಸಂಸ್ಕರಣ ಘಟಕಗಳ ಲೆಕ್ಕಾಚಾರದಲ್ಲಿ ಏರುಪೇರುಗಳಿದ್ದು, ಅದೆಲ್ಲವನ್ನೂ ಸರಿಪಡಿಸುತ್ತೇವೆ. ಘಟಕಕ್ಕೆ ಬರುವ ಪ್ರತಿ ಕಸದ ವಾಹನಗಳ ವಿಡಿಯೋ ದಾಖಲೆ ಮಾಡಿಸಿದ್ದೇನೆ. ಎಲ್ಲವೂ ಲೆಕ್ಕ ಸರಿಯಾಗಿ ಹೊಂದಾಣಿಕೆಯಾಗುತ್ತದೆಯೇ ಎಂಬುದನ್ನು ನೋಡಬೇಕು. ಇದಕ್ಕೂ ಮುನ್ನ ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿದ್ದೆ. ಒಂದು ಕಡೆ 9 ಗಂಟೆಗೆ 200ಕ್ಕೂ ಹೆಚ್ಚು ಪ್ಲೇಟ್ ತಿಂಡಿ ಖಾಲಿ ಆಗಿತ್ತು. ಅಲ್ಲಿ 5 ರೂ. ಬದಲು 10 ರೂ. ಪಡೆಯಲಾಗಿದೆ. ಅಲ್ಲಿದ್ದ ಸಹಾಯವಾಣಿ ಸಂಖ್ಯೆ ದುರಸ್ತಿಯಲ್ಲಿತ್ತು. ಆದಷ್ಟು ಬೇಗ ಈ ಲೋಪದೋಷ ಸರಿಪಡಿಸಲಾಗುವುದು, ಎಲ್ಲಾ ಹಂತದಲ್ಲೂ ರಿಪೇರಿ ಮಾಡಲಾಗುವುದು ಎಂದು ಎಚ್ಚರಿಸಿದರು.

ಈ ಮಧ್ಯೆ ದಾರಿ ಮಧ್ಯದಲ್ಲಿ ಸೀಗೆಹಳ್ಳಿ ರಸ್ತೆಯಲ್ಲಿ ಸಾಗುವಾಗ ಮಾಗಡಿ ರಸ್ತೆ ಬದಿಯಲ್ಲಿ ಕಸದ ರಾಶಿ ಕಂಡ ಡಿಸಿಎಂ ಪರಿಶೀಲನೆಗೆ ಮುಂದಾದರು. ಈ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿ ದೊಡ್ಡ ಪ್ರಮಾಣದ ಕಸದ ರಾಶಿ ಕಂಡು, ಬೆಂಗಳೂರು ನಗರದ ರಸ್ತೆಯಲ್ಲೇ ಈ ರೀತಿ ಕಸ ಎಸೆದು ಹೋದ್ರೆ ಅದಕ್ಕೆ ಹೊಣೆ ಯಾರು? ಎಂದು ಪಾಲಿಕೆ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article