ನವದೆಹಲಿ: ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಮುಂಬರುವ ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ (MCD) ಚುನಾವಣೆಗೆ (Elelction) ಪಕ್ಷದ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆಗೊಳಿಸಿದರು. ಪ್ರಣಾಳಿಕೆಯಲ್ಲಿ 10 ಭರವಸೆಗಳನ್ನು ಈಡೇರಿಸುವುದಾಗಿ ಆಶ್ವಾಸನೆ ನೀಡಿದರು.
Advertisement
ರಾಷ್ಟ್ರರಾಜಧಾನಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, ದೆಹಲಿಯಲ್ಲಿ ನಾವು 10 ಭರವಸೆಗಳನ್ನು ಈಡೇರಿಸಲು ಕೆಲಸ ಮಾಡುತ್ತೇವೆ. ದೆಹಲಿಯ ಬೀದಿ-ಬೀದಿಗಳನ್ನು ಸ್ವಚ್ಛಗೊಳಿಸುತ್ತೇವೆ. ಕಸದ ಸಮಸ್ಯೆಗಳನ್ನು ಪರಿಹರಿಸುತ್ತೇವೆ. ಉದ್ಯಾನಗಳ ಸೌಂದರ್ಯ ಹೆಚ್ಚಿಸುವ ಕೆಲಸ ಮಾಡ್ತೇವೆ. ಇದರೊಂದಿಗೆ ಎಂಸಿಡಿಯನ್ನು ಭ್ರಷ್ಟಾಚಾರ ಮುಕ್ತಗೊಳಿಸಿ, ವಾಹನ-ಪಾರ್ಕಿಂಗ್ ಸಮಸ್ಯೆಗಳನ್ನು ಪರಿಹರಿಸುತ್ತೇವೆ. ಎಂಸಿಡಿ ಕಾರ್ಮಿಕರಿಗೆ ಸಮಯಕ್ಕೆ ಸರಿಯಾಗಿ ವೇತನ ನೀಡುವ ಕ್ರಮ ಜಾರಿಗೆ ತರುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಹವಾಲಾ ದಂಧೆ – ಕಾರಿನಲ್ಲಿ 2 ಕೋಟಿ ರೂ. ಪತ್ತೆ, 8 ಮಂದಿ ಅರೆಸ್ಟ್
Advertisement
Advertisement
ಇದಕ್ಕೂ ಮುನ್ನ ಎಎಪಿ (AAP) ಶಾಸಕರು ಹಾಗೂ ಉಪಮುಖ್ಯಮಂತ್ರಿಗಳೂ ಆಗಿರುವ ಮನೀಶ್ ಸಿಸೋಡಿಯಾ (Manish Sisodia) ಹಾಗೂ ರಾಜ್ಯ ಎಎಪಿ ಘಟಕದ ಸಂಚಾಲಕ ಗೋಪಾಲ್ ರೈ ಮೊದಲಾದವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಯಿತು. ಇದನ್ನೂ ಓದಿ: ಮಾಡೆಲ್ ಆಗಲು ಪೊಲೀಸ್ ಉದ್ಯೋಗ ಬಿಡಲ್ಲ ಎಂದ ವಿಶ್ವಸುಂದರಿ ಡಯಾನಾ
Advertisement
ಎಂಸಿಡಿ 250 ಸ್ಥಾನಗಳಿಗೆ ನಡೆಯುವ ಚುನಾವಣಾ (Election) ತಯಾರಿಗಳ ಕುರಿತು ಚರ್ಚಿಸಲಾಯಿತು. ಜೊತೆಗೆ ಚುನಾವಣಾ ತಯಾರಿಯ ಭಾಗವಾಗಿ ಜನ ಸಂವಾದ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಸಮಸ್ಯೆಗಳನ್ನು ಆಲಿಸಲು ತೀರ್ಮಾನ ತೆಗೆದುಕೊಳ್ಳಲಾಯಿತು. ನವೆಂಬರ್ 20ರ ಒಳಗೆ, ದೆಹಲಿಯ 13,682 ಬೂತ್‌ಗಳಲ್ಲಿ ಸಾರ್ವಜನಿಕ ಸಂವಾದವನ್ನು ನಡೆಸಲು ಪಕ್ಷವು ಯೋಜಿಸಿದ್ದು, ಪ್ರತಿದಿನಕ್ಕೆ 500 ಸಾರ್ವಜನಿಕ ಸಭೆಗಳನ್ನು ನಡೆಸಲು ಪಕ್ಷ ತೀರ್ಮಾನ ತೆಗೆದುಕೊಂಡಿದೆ.