ಬೆಂಗಳೂರು: ಮೆಜೆಸ್ಟಿಕ್ ರೈಲ್ವೇ ನಿಲ್ದಾಣವನ್ನು ವಿಮಾನ ನಿಲ್ದಾಣದ ಮಾದರಿಯಲ್ಲಿ ಅಭಿವೃದ್ಧಿ ಮಾಡುವುದಾಗಿ ಕೇಂದ್ರ ರೈಲ್ವೆ ರಾಜ್ಯ ಖಾತೆಯ ಸಚಿವ ಸೋಮಣ್ಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತಾನಾಡಿದ ಅವರು, ಮೆಜೆಸ್ಟಿಕ್ ರೈಲ್ವೇ ನಿಲ್ದಾಣವನ್ನ ಅಭಿವೃದ್ಧಿ ಪಡಿಸಲು ನಿರ್ಧಾರ ಮಾಡಲಾಗಿದೆ. ವಿಮಾನ ನಿಲ್ದಾಣ ಮಾದರಿಯಲ್ಲಿ ಮೆಜೆಸ್ಟಿಕ್ ರೈಲ್ವೇ ನಿಲ್ದಾಣ ಅಭಿವೃದ್ಧಿ ಮಾಡುತ್ತೇವೆ. ಇದಕ್ಕಾಗಿ 1500 ಕೋಟಿ ರೂ. ವೆಚ್ಚವಾಗಲಿದ್ದು ಈಗಾಗಲೇ ಸಮಗ್ರ ಯೋಜನಾ ವರದಿ (ಡಿಪಿಆರ್) ರಚಿಸಲಾಗಿದೆ ಎಂದರು. ಇದನ್ನೂ ಓದಿ: ಬಿಜೆಪಿಗೆ ಕಾಂಗ್ರೆಸ್ ಶಾಸಕರನ್ನು ಕಳುಹಿಸಿದ್ದೇ ಸಿದ್ದರಾಮಯ್ಯ: ಜೋಶಿ ಬಾಂಬ್
Advertisement
Advertisement
ಯೋಜನೆಯ ಬಗ್ಗೆ ಬೋರ್ಡ್ ಮುಂದೆ ಇಟ್ಟಾಗ ಕೆಲವೊಂದು ಸ್ಪಷ್ಟನೆ ಕೇಳಿದ್ದರು. ಹೀಗಾಗಿ ಮುಂದಿನ ರೈಲ್ವೇ ಬೋರ್ಡ್ ಸಂಬಂಧ ಚರ್ಚೆ ಮಾಡುತ್ತೇವೆ. ಪ್ರಧಾನಿ ಮೋದಿ ಅವರು ಗ್ರೀನ್ ಸಿಗ್ನಲ್ ನೀಡಿದ್ದಕ್ಕೆ ಕೆಲಸ ಆಗುತ್ತಿದೆ. 3-4 ದಿನಗಳಲ್ಲಿ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತನಾಡಿ ಆದಷ್ಟು ಬೇಗ ಕೆಲಸ ಆರಂಭ ಮಾಡುತ್ತೇವೆ. ನಾನೇ ಬೆಂಗಳೂರಿಗೆ ಬಂದು ಘೋಷಣೆ ಮಾಡುತ್ತೇನೆ ಎಂದು ಹೇಳಿದರು.
Advertisement