ಬೆಂಗಳೂರು: ಎಸ್‍ಡಿಪಿಐ (SDPI) ಮತ್ತು ಪಿಎಫ್‍ಐ (PFI) ಬ್ಯಾನ್ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಸಕರೂ ಸೇರಿದಂತೆ ಎಲ್ಲರೂ ಈ ಸಂಘಟನೆಗಳನ್ನು ಬ್ಯಾನ್ ಮಾಡಲು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
Advertisement
Advertisement
ಶಿವಮೊಗ್ಗ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಘಟನೆ ಹಿಂದೆ ಅನೇಕ ಸಂಘಟನೆಗಳು ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದರ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮೆಲಾನಿಯಾ ಟ್ರಂಪ್, ಕೇಜ್ರಿವಾಲ್ ಶಾಲೆಯನ್ನು ಮಾತ್ರ ನೋಡಬೇಕೆಂದಿದ್ದರು: ದೆಹಲಿ ಸಿಎಂ
Advertisement
ಎಸ್‍ಡಿಪಿಐ ಮತ್ತು ಪಿಎಫ್‍ಐ ಬ್ಯಾನ್ ಬಗ್ಗೆ ಅನೇಕರು ಒತ್ತಾಯ ಮಾಡಿದ್ದಾರೆ. ಸರ್ಕಾರ ಕೂಡಾ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ತನಿಖೆ ಬಳಿಕ ಸಿಎಂ ಜೊತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಮಾಡುವುದಾಗಿ ಸಚಿವರು ತಿಳಿಸಿದರು.
Advertisement
ಶಿವಮೊಗ್ಗ ಘಟನೆಯಲ್ಲಿ ಈವರೆಗೂ 8 ಜನರ ಬಂಧನ ಆಗಿದ್ದು, ತನಿಖೆ ಮುಂದುವರೆದಿದೆ ಅಂತ ಸಚಿವರು ಮಾಹಿತಿ ನೀಡಿದರು. ಇನ್ನೂ ಸ್ವಲ್ಪ ದಿನ ಶಿವಮೊಗ್ಗದಲ್ಲಿ ಪೊಲೀಸರ ಭದ್ರತೆ ಮುಂದುವರೆಸುತ್ತೇವೆ. ಸೆಕ್ಷನ್ 144 ಕೂಡಾ ಮುಂದುವರಿಸುತ್ತೇವೆ. ಘಟನೆಯಲ್ಲಿ ಅಪರಾಧಿಗಳಿಗೆ ಯಾರ ಲಿಂಕ್ ಇದೆ. ಯಾರು ಇದರ ಹಿಂದೆ ಇದ್ದಾರೆ ಅಂತ ತನಿಖೆ ನಡೆಯುತ್ತಿದೆ. ಸಂಪೂರ್ಣ ತನಿಖೆ ಬಳಿಕ ಎಲ್ಲವೂ ಗೊತ್ತಾಗಲಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಡಿಕೆಶಿ ಹೇಳುವುದು ಒಂದು, ಮಾಡುವುದು ಇನ್ನೊಂದು: ನಾರಾಯಣಗೌಡ