ಬೆಳಗಾವಿ: ಈ ಬಾರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಲಿಂಗಾಯತರನ್ನೇ (Lingayat) ಆಯ್ಕೆ ಮಾಡುತ್ತೇವೆ ಎನ್ನುವ ಮೂಲಕ ಶಾಸಕ ಬಾಲಚಂದ್ರ ಜಾರಕಿಹೊಳಿ (Balachandra Jarkiholi) ಡಿಸಿಸಿ ಬ್ಯಾಂಕ್ ಚುನಾವಣೆಗೂ (DCC Bank Election) ಮುನ್ನ ಲಿಂಗಾಯತ ಸಮಾಜದ ಪರ ಬ್ಯಾಟ್ ಬೀಸಿದ್ದಾರೆ.
ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು ಬೆಳಗಾವಿ ಡಿಸಿಸಿ ಚುನಾವಣೆಯಲ್ಲಿ 16 ರಲ್ಲಿ 12 ಸ್ಥಾನ ಗೆದ್ದೇ ಗೆಲ್ಲುತ್ತೇವೆ. ಮುಂದಿನ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ನಮ್ಮ ಗುಂಪಿನವರೇ ಆಗುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು. ಇದನ್ನೂ ಓದಿ: ನಮ್ಮದಷ್ಟೆ ಅಲ್ಲ, ಬಿಜೆಪಿಯವರ ಕೇಸ್ ಕೂಡ ವಾಪಸ್ – 62 ಪ್ರಕರಣ ವಾಪಸ್‌ಗೆ ಡಿಕೆಶಿ ಸಮರ್ಥನೆ
ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ಹುಕ್ಕೇರಿ ಜನರೇ ಬಂದು ನಮ್ಮ ಬಳಿ ಬೆಂಬಲ ಕೇಳಿದ್ದಾರೆ. ಶಾಂತಿ ಸಮಾಧಾನದಿಂದ ಚುನಾವಣೆ ಮಾಡುತ್ತೇವೆ. ಜನರ ಆಶೀರ್ವಾದ ಇದ್ದವರು ಗೆಲ್ಲುತ್ತಾರೆ. ಇದನ್ನೂ ಓದಿ: ಒಂದಲ್ಲ ಎರಡಲ್ಲ ಮೂವರೊಟ್ಟಿಗೆ ಕಾಂಟ್ಯಾಕ್ಟ್‌ನಲ್ಲಿದ್ದ ಬ್ಯೂಟಿ – ಸ್ಟೇಷನ್‌ನಲ್ಲೇ ತಾಳಿ ಕಿತ್ತು ಗಂಡನ ಕೈಗಿಟ್ಟು ಹೋದ ಪತ್ನಿ
ಜಾರಕಿಹೊಳಿ ಸಹೋದರರು ಕಳ್ಳರು ಎಂದು ಮಾಜಿ ಸಚಿವ ಎ ಬಿ ಪಾಟೀಲ್ ಅವರು ತುಡಗರು ಯಾರು ಎಂದು ಸ್ಪಷ್ಟಪಡಿಸಬೇಕು. ರಮೇಶ ಕತ್ತಿ ಅವರನ್ನ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ನಾವೇ ದಿವಂಗತ ಉಮೇಶ ಕತ್ತಿ ಅವರಿಗೆ ಈ ವಿಚಾರ ಗೊತ್ತಿತ್ತು.ರಮೇಶ ಕತ್ತಿ ಅವರಿಗಿಂತ ಚೆನ್ನಾಗಿ ಡಿಸಿಸಿ ಬ್ಯಾಂಕ್ ನಾವು ಮುನ್ನೆಡೆಸುತ್ತೇವೆ. ಮುಂದಿನ ದಿನಗಳಲ್ಲಿ ಅಣ್ಣಾಸಾಹೇಬ ಜೊಲ್ಲೆ ಹಾಗೂ ನಾನು ಹುಕ್ಕೇರಿಯಲ್ಲಿ ಪ್ರಚಾರ ಆರಂಭ ಮಾಡುತ್ತೇವೆ ಎಂದರು.
ಡಿಸಿಸಿ ಬ್ಯಾಂಕ್ ಚುನಾವಣೆ ನಮ್ಮ ಗುಂಪಿನಲ್ಲಿ ಲಕ್ಷ್ಮಣ ಸವದಿ ಇಲ್ಲ. ಅಥಣಿ ಹಾಗೂ ಕಾಗವಾಡ ತಾಲೂಕುಗಳಲ್ಲಿ ನಮ್ಮ ಗುಂಪಿನ ಅಭ್ಯರ್ಥಿಗಳಿಲ್ಲ ಎಂದು ಸ್ಪಷ್ಟಪಡಿಸಿದರು.