ಬೆಂಗಳೂರು: ನಿಗಮ ಮಂಡಳಿ (Corporation Board) ನೇಮಕ ಪಟ್ಟಿ ಅಂತಿಮಗೊಳಿಸುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಇಂದು (ಸೋಮವಾರ) ದೆಹಲಿಗೆ ತೆರಳಿದ್ದು, ವರಿಷ್ಠರು ಹಾಗೂ ಹೈಕಮಾಂಡ್ ಜೊತೆ ಮಂಗಳವಾರ ಚರ್ಚೆ ನಡೆಸಲಿದ್ದಾರೆ.
ದೆಹಲಿಗೆ (New Delhi) ತೆರಳುವ ಮುನ್ನ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಡಿಕೆ ಶಿವಕುಮಾರ್ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಾನು ಹಾಗೂ ಮುಖ್ಯಮಂತ್ರಿಗಳು ದೆಹಲಿಗೆ ತೆರಳಿ ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಜಾತಿಗಣತಿಗೆ ನಮ್ಮ ವಿರೋಧ ಇಲ್ಲ.. ಕೆಲವು ಆತಂಕಗಳಿವೆ: ಎಂ.ಬಿ.ಪಾಟೀಲ್
ನಿಗಮ ಮಂಡಳಿ ನೇಮಕ ವಿಚಾರವಾಗಿ ಈಗಾಗಲೇ ಸಭೆ ಮಾಡಿ ಪಟ್ಟಿ ಕಳುಹಿಸಿಕೊಟ್ಟಿದ್ದೇವೆ. ಈ ಮಧ್ಯೆ ಬೇರೆಬೇರೆ ರಾಜ್ಯಗಳ ವಿಧಾನಸಭೆ ಚುನಾವಣೆಗಳ ಕಾರಣ ಅಂತಿಮವಾಗಿಲ್ಲ. ಈಗ ದೆಹಲಿಯಲ್ಲಿ ಈ ಪಟ್ಟಿ ಅಂತಿಮವಾಗಲಿದೆ. ಮುಖ್ಯಮಂತ್ರಿಗಳ ಭೇಟಿಗೆ ಪ್ರಧಾನಮಂತ್ರಿಗಳು ಸಮಯಾವಕಾಶ ನೀಡಿದರೆ, ಅವರು ಹೋಗಿ ಭೇಟಿ ಮಾಡುತ್ತಾರೆ ಎಂದರು. ಇದನ್ನೂ ಓದಿ: ಕೋವಿಡ್ ಉಲ್ಬಣವಾಗುತ್ತಿದೆ ಎಂದು ಆತಂಕಗೊಳ್ಳುವುದು ಬೇಡ: ಡಿ.ಕೆ ಶಿವಕುಮಾರ್