– ಪರ್ಯಾಯ ಪಕ್ಷ ಕಟ್ಟುವ ಎಚ್ಚರಿಕೆ ನೀಡಿದ ನಾಯಕರು
ಮಂಗಳೂರು: ದಕ್ಷಿಣ ಕನ್ನಡದಲ್ಲಿ (Dakshina Kannada) ಕಾಂಗ್ರೆಸ್ ಸರ್ಕಾರ ಕೋಮು ಹಿಂಸಾಚಾರ ತಡೆಯುವಲ್ಲಿ ವಿಫಲವಾಗಿದೆ ಎಂದು ಹೇಳಿ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಪೋಸ್ಟ್ಗಳಿಗೆ (Congress Minority Morcha) ಮುಸ್ಲಿಮ್ ಮುಖಂಡರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
ಸಮುದಾಯದಲ್ಲಿ ಆಕ್ರೋಶ ಹೆಚ್ಚಾದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಅಶ್ರಫ್(K Ashraf) ರಾಜೀನಾಮೆ ನೀಡಿದ್ದಾರೆ.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಇಂದು ಮಧ್ಯಾಹ್ನ ಮಂಗಳೂರಿನಲ್ಲಿ ನಮ್ಮ ಸಭೆ ನಡೆಯಲಿದ್ದು ಅಲ್ಲಿ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ. ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ. ನಮಗೆ ನ್ಯಾಯ ಸಿಗುವವರೆಗೂ ನಾವು ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಇಬ್ಬರು ಕನ್ನಡಿಗರು ಸೇರಿ 26 ಮೃತ ಪ್ರವಾಸಿಗರ ನೆನಪಿಗೆ ಪಹಲ್ಗಾಮ್ನಲ್ಲಿ ಸ್ಮಾರಕ – ಒಮರ್ ಅಬ್ದುಲ್ಲಾ
ವೈಯುಕ್ತಿಕ ಕಾರಣಕ್ಕೆ ಅಬ್ದುಲ್ ರಹೀಂ ಕೊಲೆ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿಕೆ ಕೊಟ್ಟಿದ್ದಾರೆ. ಆ ಹೇಳಿಕೆಯನ್ನು ಸಚಿವರು ವಾಪಾಸ್ ಪಡೆಯಬೇಕು ಎಂದು ಒತ್ತಾಯ ಮಾಡಿದ್ದಾರೆ.
ಬಂಟ್ವಾಳದಲ್ಲಿ ಅಬ್ದುಲ್ ರಹೀಂ (Abdul Rahim Murder) ಹತ್ಯೆಯಾದ ಬೆನ್ನಲ್ಲೇ ಮುಸ್ಲಿಂ ಮುಖಂಡರು (Muslim Leaders) ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ಕಾಂಗ್ರೆಸ್ (Congress) ಪಕ್ಷದಲ್ಲಿರುವ ಸಮುದಾಯದ ನಾಯಕರು ಸಾಮೂಹಿಕ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದರು. ಇದನ್ನೂ ಓದಿ: ಬಿಷ್ಣೋಯ್ ಗ್ಯಾಂಗ್ನ ಶಾರ್ಪ್ಶೂಟರ್ ನವೀನ್ ಕುಮಾರ್ ಎನ್ಕೌಂಟರ್
ಅಲ್ಪಸಂಖ್ಯಾತ ಘಟಕದ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ ಬಳಿಕ ಪರ್ಯಾಯ ಪಕ್ಷ ಕಟ್ಟುವ ಎಚ್ಚರಿಕೆಯನ್ನು ನೀಡಿದ್ದಾರೆ.