Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟು ಬರುತ್ತೆ, ಬರೆದಿಟ್ಟುಕೊಳ್ಳಿ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Haveri | ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟು ಬರುತ್ತೆ, ಬರೆದಿಟ್ಟುಕೊಳ್ಳಿ: ಡಿಕೆಶಿ

Haveri

ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟು ಬರುತ್ತೆ, ಬರೆದಿಟ್ಟುಕೊಳ್ಳಿ: ಡಿಕೆಶಿ

Public TV
Last updated: February 14, 2026 8:50 pm
Public TV
Share
5 Min Read
DK Shivakumar 9
SHARE

– ಕಾಂಗ್ರೆಸ್ ಆರನೇ ಗ್ಯಾರಂಟಿ ಭೂಮಿ ಗ್ಯಾರಂಟಿ, ಏಳನೇ ಗ್ಯಾರಂಟಿ ನೀರಿನ ಗ್ಯಾರಂಟಿ ಎಂದ ಡಿಸಿಎಂ

ಹಾವೇರಿ: ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟು ಬರಲಿವೆ, ಬರೆದಿಟ್ಟುಕೊಳ್ಳಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಸವಾಲು ಹಾಕಿದ್ದಾರೆ.

ಹಾವೇರಿಯಲ್ಲಿ ಶನಿವಾರ ನಡೆದ ಜನಸೇವೆಯಲ್ಲಿ ಸಾರ್ಥಕ ಸಾವಿರ ದಿನ, ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರವು ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಪಂಚ ಗ್ಯಾರಂಟಿಗಳ ಜೊತೆಗೆ ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ನೀಡುತ್ತಿದೆ. ಕೇಂದ್ರ ಸರ್ಕಾರ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ, ಎತ್ತಿನಹೊಳೆಗೆ ಅನುಮತಿ ಕೊಟ್ಟರೆ ಏಳನೇ ಗ್ಯಾರಂಟಿಯಾಗಿ ನೀರಿನ ಗ್ಯಾರಂಟಿ ನೀಡಲಾಗುವುದು ಎಂದು ಘೋಷಿಸಿದರು. ಇದನ್ನೂ ಓದಿ: ಬಡವರ ತಲೆ ಮೇಲೆ ಆರ್ಥಿಕ ಭಾರ ಹೇರಿದ ಶೂನ್ಯ ಸಾಧನೆ ಸಮಾವೇಶ: ಬಸವರಾಜ ಬೊಮ್ಮಾಯಿ

ನಾನು ಚುನಾವಣೆಗೆ ಬಂದಾಗ ಒಂದು ಮಾತು ಹೇಳಿದ್ದೆ. ಕಮಲ ಕೆರೆಯಲ್ಲಿದ್ದರೆ ಚಂದ, ತೆನೆ ಹೊಲದಲ್ಲಿದ್ದರೆ ಚಂದ, ದಾನ ಧರ್ಮ ಮಾಡುವ ‘ಕೈ’ ಅಧಿಕಾರದಲ್ಲಿದ್ದರೆ ಚಂದ. ಈ ದಾನ-ಧರ್ಮ ಮಾಡುವ ‘ಕೈ’ ಅಧಿಕಾರದಲ್ಲಿರುವ ಕಾರಣಕ್ಕೆ ಪಂಚ ಗ್ಯಾರಂಟಿ ನೀಡಿ, ಆರನೇ ಗ್ಯಾರಂಟಿ ಭೂಮಿ ಗ್ಯಾರಂಟಿ ನೀಡುತ್ತಿದ್ದೇವೆ. ಭೂ ದಾಖಲೆ ಇಲ್ಲದ 1,11,111 ಜನರಿಗೆ ಪೋಡಿ ಮಾಡಿ, ಖಾತಾ ಮಾಡಿ ದಾಖಲೆ ನೀಡಲಾಗಿದೆ. ಆ ಮೂಲಕ ನಿಮ್ಮ ಮುಂದಿನ ಪೀಳಿಗೆಗೆ ಆಸ್ತಿ ದಾಖಲೆ ಕೊಟ್ಟ ಏಕೈಕ ಸರ್ಕಾರ ಈ ಕಾಂಗ್ರೆಸ್ ಸರ್ಕಾರ ಎಂದು ತಿಳಿಸಿದರು.

DK Shivakumar

ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕಾಗಿ ಭೂಮಿ ಕಳೆದುಕೊಳ್ಳುವ ರೈತರಿಗೆ 35-40 ಲಕ್ಷ ಪರಿಹಾರ ನೀಡಲು ನಮ್ಮ ಸರ್ಕಾರ ತೀರ್ಮಾನಿಸಿದೆ. ಕಾವೇರಿ ನದಿಗೆ ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ನಮ್ಮ ಮಾರ್ಗದರ್ಶನದಲ್ಲಿ ಕಾನೂನು ತಜ್ಞರ ತಂಡ ವಾದ ಮಂಡಿಸಿ ಸುಪ್ರೀಂ ಕೋರ್ಟ್‌ನಲ್ಲಿ ಈ ಯೋಜನೆ ಪರವಾಗಿ ತೀರ್ಪು ಬಂದಿದೆ. ಆ ಮೂಲಕ ತಮಿಳುನಾಡು ಹಾಕಿದ್ದ ಆಕ್ಷೇಪಣಾ ಅರ್ಜಿ ವಜಾಗೊಳಿಸಲಾಗಿದೆ. ಈಗ ಈ ಯೋಜನೆಗೆ ಡಿಪಿಆರ್ ಸಿದ್ಧಪಡಿಸುತ್ತಿದ್ದೇವೆ. ಮಹದಾಯಿ ವಿಚಾರದಲ್ಲಿ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡಿಲ್ಲ. ಕುಡಿಯುವ ನೀರು ಪೂರೈಕೆ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರ 3 ತಿಂಗಳಲ್ಲಿ ಅನುಮತಿ ಕೊಟ್ಟರೆ ಸಾಕು. ಚಿಕ್ಕಬಳ್ಳಾಪುರ, ಕೋಲಾರಕ್ಕೆ ನೀರು ಹರಿಸುವ ಕೆಲಸವನ್ನು ಈ ಸರ್ಕಾರ ಹಾಗೂ ಡಿ.ಕೆ.ಶಿವಕುಮಾರ್ ಮಾಡಲಿದ್ದಾರೆ ಎಂದರು.

ಕೃಷ್ಣಾ, ಕಾವೇರಿ, ಮಹದಾಯಿ ಯೋಜನೆಗಳ ಮೂಲಕ ರೈತರ ಬದುಕು ಹಸನ ಮಾಡಲು ನಮ್ಮ ಸರ್ಕಾರ 7ನೇ ಗ್ಯಾರಂಟಿಯಾಗಿ ನೀರಿನ ಗ್ಯಾರಂಟಿ ನೀಡಲಿದೆ. ಪ್ರತಿಯೊಬ್ಬರಿಗೆ ಕುಡಿಯಲು ನೀರು, ವ್ಯವಸಾಯಕ್ಕೆ ನೀರು, ಕೆರೆ ತುಂಬಿಸಿ ಅಂತರ್ಜಲ ಹೆಚ್ಚಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಘೋಷಿಸಿದರು. ಇದನ್ನೂ ಓದಿ: ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ: ಸಿಎಂ

ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟು ಬರಲಿವೆ, ಬರೆದಿಟ್ಟುಕೊಳ್ಳಿ
ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಒದಗಿಸಲು ಇಂಧನ ಇಲಾಖೆಯಿಂದ ವರ್ಷಕ್ಕೆ 20 ಸಾವಿರ ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ. ಇಂತಹ ಐಸಿಹಾಸಿಕ ಕಾರ್ಯಕ್ರಮಗಳನ್ನು ನಾವು ನೀಡುತ್ತಿದ್ದೇವೆ. ಈ ಬಾರಿ ಚುನಾವಣೆಯಲ್ಲಿ ನಮಗೆ 136 ಸೀಟುಗಳು ಬಂದಿದ್ದವು. ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟುಗಳು ಬರಲಿವೆ. ನನ್ನ ಈ ಮಾತನ್ನು ಬರೆದಿಟ್ಟುಕೊಳ್ಳಿ. ನನಗೆ ನಮ್ಮ ಶಾಸಕರಿಗೆ ಆತ್ಮವಿಶ್ವಾಸವಿದೆ. 3 ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಎರಡು ಕಡೆ ಮಾಜಿ ಮುಖ್ಯಮಂತ್ರಿಗಳ ಪುತ್ರರು ಸ್ಪರ್ಧೆ ಮಾಡಿದ್ದರು. ಆ ಕ್ಷೇತ್ರಗಳು ನಮ್ಮ ಬಳಿ ಇರಲಿಲ್ಲ. ಆ ಕ್ಷೇತ್ರಗಳನ್ನು ಕಾಂಗ್ರೆಸ್‌ಗೆ ನೀಡಿ ನಮ್ಮ ಸಂಖ್ಯಾಬಲವನ್ನು 139ಕ್ಕೆ ಏರಿಕೆ ಮಾಡಿದ್ದೀರಿ. ನಿಮಗೆಲ್ಲರಿಗೂ ಧನ್ಯವಾದ. ನಿಮ್ಮ ಈ ಋಣ ತೀರಿಸಲು ಈ ಕಾರ್ಯಕ್ರಮವನ್ನು ಇಲ್ಲಿ ಆಯೋಜಿಸಿದ್ದೇವೆ ಎಂದು ತಿಳಿಸಿದರು.

ಬಿಜೆಪಿ, ದಳದ ಸರ್ಕಾರ ಇಂತಹ ಒಂದೇ ಒಂದು ಜನಪರ ಕಾರ್ಯಕ್ರಮ ನೀಡಿದೆಯೇ?
ಜನರು ನೆಮ್ಮದಿಯಿಂದ ಬದುಕುತ್ತಿರುವ ದಿನಗಳು, ಮಹಿಳೆಯರು ಸಂತೋಷದಿಂದ ಬಸ್‌ನಲ್ಲಿ ಪ್ರಯಾಣ ಮಾಡುತ್ತಿರುವ ದಿನಗಳು, ಗೃಹಿಣಿಯರ ಬದುಕಿನಲ್ಲಿ ಬದಲಾವಣೆ ಕಂಡ ದಿನಗಳು, ಯುವಕರು ಉದ್ಯೋಗ ಸೃಷ್ಟಿಮಾಡಿಕೊಳ್ಳುತ್ತಿರುವ ದಿನಗಳನ್ನು ನಾವು ನೀವು ನೋಡುತ್ತಿದ್ದೇವೆ. ಯಡಿಯೂರಪ್ಪನವರೇ, ಮಿಸ್ಟರ್ ಕುಮಾರಸ್ವಾಮಿ, ಮಿಸ್ಟರ್ ಅಶೋಕ್, ಮಿಸ್ಟರ್ ವಿಜಯೇಂದ್ರ ನಿಮ್ಮ ಆಡಳಿತ ಅವಧಿಯಲ್ಲಿ ಇಂತಹ ಒಂದು ಕೆಲಸವನ್ನು ನೀವು ಮಾಡಿದ್ದರೆ, ಜನರಿಗಾಗಿ ಒಂದೇ ಒಂದು ಕಾರ್ಯಕ್ರಮವನ್ನು ಬಿಜೆಪಿ ಹಾಗೂ ಜನತಾ ದಳದವರು ಕೊಟ್ಟಿದ್ದರೆ, ರಾಜಕೀಯದಲ್ಲಿ ನಿಮಗೆ ಮಾತನಾಡುವ ಶಕ್ತಿ ಇರುತ್ತಿತ್ತು. ಆದರೆ, ನೀವು ಅದನ್ನು ಕಳೆದುಕೊಂಡಿದ್ದೀರಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನಮ್ಮ ಸರ್ಕಾರದ ಸಾಧನೆ ಹೇಳೋಕೆ ಒಂದು ದಿನ ಸಾಲೋದಿಲ್ಲ: ಸಿದ್ದರಾಮಯ್ಯ

ಧರ್ಮ, ದೇವರು ಬಿಜೆಪಿಯವರ ಆಸ್ತಿಯಲ್ಲ
ಬಿಜೆಪಿಯವರು ಭಾವನೆ ಮೇಲೆ ರಾಜಕಾರಣ ಮಾಡುತ್ತಾರೆ. ನಾವು ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ. ನಮ್ಮ ಸರ್ಕಾರಗಳು ಕಾಲದಲ್ಲಿ ಉಳುವವನಿಗೆ ಭೂಮಿ, ಆಶ್ರಯ, ಆರಾಧಾನ ಕಾರ್ಯಕ್ರಮ ನೀಡಿದ್ದೆವು. ರಾಮಲಿಂಗಾ ರೆಡ್ಡಿ ಅವರ ನೇತೃತ್ವದಲ್ಲಿ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ದೇವರು ಬಿಜೆಪಿಯ ಆಸ್ತಿಯಲ್ಲ. ದೇಶದ ಎಲ್ಲಾ ವರ್ಗದ ಜನರ ಆಸ್ತಿ. ರಾಜಕಾರಣದಲ್ಲಿ ಧರ್ಮ ಇರಬೇಕೇ ಹೊರತು, ಧರ್ಮದಲ್ಲಿ ರಾಜಕಾರಣ ಇರಬಾರದು. ಕಾಂಗ್ರೆಸ್ ಸರ್ಕಾರ ಪಿಂಚಣಿ ಯೋಜನೆ, ಮಧ್ಯಾಹ್ನ ಬಿಸಿಯೂಟ, ಸ್ತ್ರೀಶಕ್ತಿ, ಮನರೇಗಾ ಕಾರ್ಯಕ್ರಮ ಕೊಟ್ಟಿದ್ದು ಕಾಂಗ್ರೆಸ್. ಉದ್ಯೋಗ ಖಾತರಿ ಕಾಯ್ದೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಸಾಯಿಸಿದೆ. ಮತ್ತೆ ಇಂತಹ ಕಾರ್ಯಕ್ರಮವನ್ನು ನಿಮ್ಮ ಪಂಚಾಯ್ತಿಗಳಿಗೆ ನೀಡಲು ಸಾಧ್ಯವೇ ಎಂದು ಬಸವರಾಜ ಬೊಮ್ಮಾಯಿ ಹಾಗೂ ಧಾರವಾಡದ ಸಂಸದರಿಗೆ ಕೇಳಲು ಬಯಸುತ್ತೇನೆ. ನೀವುಗಳು ಮಹಾತ್ಮಾ ಗಾಂಧಿ ಹೆಸರನ್ನು ತೆಗೆದು ಅವರನ್ನು ಕೊಂದಿದ್ದೀರಿ. ನಮ್ಮ ಸರ್ಕಾರ ಕೊಟ್ಟಂತಹ ಯೋಜನೆಗಳನ್ನು ಯಡಿಯೂರಪ್ಪ, ಸದಾನಂದ ಗೌಡರು, ಜಗದೀಶ ಶೆಟ್ಟರ್ ಹಾಗೂ ಕುಮಾರಸ್ವಾಮಿ ಅವರ ಸರ್ಕಾರ ನೀಡಿತೇ ಎಂದು ಪ್ರಶ್ನಿಸಿದರು.

ಸರ್ಕಾರಕ್ಕೆ ಸಾವಿರ ದಿನಗಳು ತುಂಬಿವೆ. ಈ ಸಾವಿರ ದಿನಗಳಲ್ಲಿ ರಾಜ್ಯದಲ್ಲಿ ದೊಡ್ಡ ಬದಲಾವಣೆಯಾಗಿದೆ. ಸಾಧನೆ ಇಲ್ಲದೆ ಸತ್ತರೆ ಸಾವಿಗೆ ಅಪಮಾನ, ಆದರ್ಶ ಇಲ್ಲದೆ ಸತ್ತರೆ ಬದುಕಿಗೆ ಅಪಮಾನ. ನಿಮ್ಮ ಋಣ ತೀರಿಸಲು ನಾವು ಇಲ್ಲಿಗೆ ಬಂದಿದ್ದೇವೆ. ನಿಮ್ಮ ಕೆಲಸ ನಮ್ಮದು. ನುಡಿದಂತೆ ನಡೆದು ನಿಮ್ಮ ಆಶೀರ್ವಾದ ಪಡೆಯಲು ನಾವಿಲ್ಲಿಗೆ ಬಂದಿದ್ದೇವೆ. ಬೆಲೆ ಏರಿಕೆ ನಿಯಂತ್ರಿಸಿ ನಿಮ್ಮ ಬದುಕಿನಲ್ಲಿ ಬದಲಾವಣೆ ತರಲು ನಾವು ಐದು ಗ್ಯಾರಂಟಿ ಯೋಜನೆ ತಂದೆವು. ಇದು ಕಾಂಗ್ರೆಸ್ ಗ್ಯಾರಂಟಿಯಾಗಿ ಉಳಿಯಲಿಲ್ಲ. ಬಿಜೆಪಿ ಆಡಳಿತ ಬೇರೆ ರಾಜ್ಯಗಳಲ್ಲಿ ಕರ್ನಾಟಕ ಮಾದರಿಯನ್ನು ಅನುಸರಿಸಿ ಇಂದು ದೇಶದ ಗ್ಯಾರಂಟಿಯಾಗಿದೆ. ಇದಕ್ಕೆ ಕಾರಣ ನೀವು ಕೊಟ್ಟ ಮತಗಳು. ಹೀಗಾಗಿ ನಿಮಗೆ ಅಭಿನಂದನೆ ಸಲ್ಲಿಸಲು ನಾನಿಲ್ಲಿ ನಿಂತಿದ್ದೇನೆ ಎಂದು ಹೇಳಿದರು.

ನಮ್ಮ ಗ್ಯಾರಂಟಿಗಳು, ಅಭಿವೃದ್ಧಿ ಕೆಲಸಗಳಿಗೆ ಸಾವಿಲ್ಲ. ಆದರೆ, ನಮ್ಮ ಸರ್ಕಾರದ ವಿರುದ್ಧದ ಟೀಕೆಗಳಿಗೆ, ಆರೋಪಗಳು, ಅಪಪ್ರಚಾರಕ್ಕೆ ಸಾವಿದೆ. ನೀವು ಕೊಟ್ಟ ಶಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೃಷ್ಣಬೈರೇಗೌಡರು ಈ ಅಭೂತಪೂರ್ವ ಯೋಜನೆ ಜಾರಿಗೆ ತಂದಿದ್ದಾರೆ. ದೇವರು ವರ ಹಾಗೂ ಶಾಪ ನೀಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾನೆ. ಕೊಟ್ಟ ಅವಕಾಶದಲ್ಲಿ ಈ ಭೂಮಿ ಗ್ಯಾರಂಟಿಯನ್ನು ನಮ್ಮ ಸರ್ಕಾರ ನೀಡಿದೆ. ಆ ಮೂಲಕ ನಿಮ್ಮ ಬದುಕಿನಲ್ಲಿ ಧೈರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ ಎಂದರು.

ನಿನ್ನೆಗೆ ನಮ್ಮ ಸರ್ಕಾರಕ್ಕೆ ಸಾವಿರ ದಿನಗಳು ತುಂಬಿವೆ. ನಿನ್ನೆ ನಾವು ಈ ಕಾರ್ಯಕ್ರಮ ಮಾಡಬೇಕಿತ್ತು. ಆದರೆ, ನಮ್ಮ ಸರ್ಕಾರ ಬೆಂಗಳೂರಿನಲ್ಲಿ ಅಣೆಕಟ್ಟು ಸುರಕ್ಷತೆ ವಿಚಾರವಾಗಿ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜಿಸುತ್ತಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಇವತ್ತು ಆಯೋಜಿಸುವಂತೆ ಕೃಷ್ಣಬೈರೇಗೌಡರು ಹಾಗೂ ಶಿವಾನಂದ ಪಾಟೀಲ್ ಅವರಿಗೆ ಕೇಳಿಕೊಂಡೆ. ನಮ್ಮಲ್ಲಿರುವ ಅನೇಕ ಅಣೆಕಟ್ಟುಗಳು 60-70 ವರ್ಷಗಳಷ್ಟು ಹಳೆಯದಾಗಿವೆ. ಕೇಂದ್ರ ಸಚಿವರು, ವಿದೇಶಗಳಿಂದ 700 ತಜ್ಞರು ಆಗಮಿಸಿದ್ದಾರೆ ಎಂದು ತಿಳಿಸಿದರು.

TAGGED:congressd k shivakumarhaveriಕಾಂಗ್ರೆಸ್ಡಿ.ಕೆ.ಶಿವಕುಮಾರ್ಹಾವೇರಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
3 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
3 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
3 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
4 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
5 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?