-ಸಮರ್ಪಕ ವಿದ್ಯುತ್ ಕೊಟ್ಟು ರೈತರ ಸಂಕಷ್ಟಕ್ಕೆ ಸ್ಪಂದಿಸಲು ಬಿವೈವಿ ಆಗ್ರಹ
ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಬಡವರ ಭವಿಷ್ಯ ರೂಪಿಸುವ ವಿಶ್ವವಿದ್ಯಾಲಯಗಳನ್ನು (Universities) ಮುಚ್ಚುವುದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y Vijayendra) ಗುಡುಗಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ದುಂಡುಮೇಜಿನ ಸಭೆಯನ್ನು ಆಯೋಜಿಸಲಾಗಿತ್ತು. ಶಿಕ್ಷಣ ತಜ್ಞರು, ಹಿರಿಯರು, ಜನಪ್ರತಿನಿಧಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ಮುಂದಿನ 5 ವರ್ಷಗಳಲ್ಲಿ 350 ಕೋಟಿ ರೂ. ಹಣಕಾಸು ಕೊಡಲು ಸಾಧ್ಯವಿಲ್ಲದ ಕಾರಣ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವಂತೆ ರಾಜ್ಯ ಸರ್ಕಾರದ ಕ್ಯಾಬಿನೆಟ್ ಉಪ ಸಮಿತಿ ಕೊಟ್ಟ ವರದಿಯು ವಿವಿಗಳನ್ನು ಮುಚ್ಚುವ ಸರ್ಕಾರದ ತೀರ್ಮಾನ ಅವೈಜ್ಞಾನಿಕ. ಇದು ಅವಿವೇಕತನದ ನಿರ್ಧಾರ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯತ್ನಾಳ್ ಸ್ಪರ್ಧೆ ಇಲ್ಲ; ಹೈಕಮಾಂಡ್ ವಾರ್ನ್ ಬಳಿಕ ಭಿನ್ನರ ಶಸ್ತ್ರತ್ಯಾಗ – ಬಿವೈವಿ ಫುಲ್ ಆ್ಯಕ್ಟಿವ್
ಇದರ ವಿರುದ್ಧ ರಾಜಕೀಯೇತರ ನೆಲೆಯಿಂದ ಹೋರಾಟ ಮಾಡಬೇಕಿದೆ. ವಿದ್ಯಾರ್ಥಿ ಪರಿಷತ್ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದೆ. ಬಿಜೆಪಿ ಕೂಡ ಈ ಹೋರಾಟಕ್ಕೆ ಸಂಪೂರ್ಣ ಬೆಂಬಲ ಕೊಡಲಿದೆ. ದೊಡ್ಡ ಮಟ್ಟದ ಹೋರಾಟ ಮಾಡಲಿದ್ದೇವೆ. ಒಂದು ಜಿಲ್ಲೆ ಒಂದು ವಿವಿ ಪರಿಕಲ್ಪನೆಯಡಿ ಈ ವಿವಿಗಳನ್ನು ರಚಿಸಲಾಗಿದೆ. ಹಣಕಾಸಿನ ಬಿಕ್ಕಟ್ಟನ್ನೇ ಆಧಾರವಾಗಿ ಇಟ್ಟುಕೊಂಡು ರಾಜ್ಯ ಸರ್ಕಾರ ಅವಿವೇಕತನದ ನಿರ್ಧಾರ ತೆಗೆದುಕೊಳ್ಳಬಾರದು. ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ಪೋಷಕರಿಗೆ ಬಿತ್ತು 25,000 ರೂ. ದಂಡ
ನಗರದ ಗುಂಡಿ ಮುಚ್ಚಲಾಗದ ಸರ್ಕಾರ:
2-3 ವರ್ಷಗಳು ಕಳೆದರೂ, ಭಗವಂತನೇ ಭೂಮಿಗೆ ಅವತರಿಸಿ ಬಂದರೂ ಈ ಬೆಂಗಳೂರನ್ನು ಉದ್ಧಾರ ಮಾಡಲು ಆಗುವುದಿಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು. ಅವರು ಕಾಂಗ್ರೆಸ್ ಪಕ್ಷದವರು. ಬೆಂಗಳೂರನ್ನು ಸಿಂಗಾಪುರ ಮಾಡುವುದಾಗಿ ಹೇಳಿ ಅಧಿಕಾರಕ್ಕೆ ಬಂದಿರುವ ಸಚಿವರ ಬಾಯಲ್ಲಿ ಬಂದ ಮಾತು ಇದು ಎಂದು ಟೀಕಿಸಿದರು. ಇದನ್ನೂ ಓದಿ: ರೋಹಿಣಿ-ರೂಪಾ ಗಲಾಟೆ ಪ್ರಕರಣ; ಸಿಂಧೂರಿಗೆ ರಿಲೀಫ್ ನೀಡಿದ ಹೈಕೋರ್ಟ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆಗೆ ಬೆಂಗಳೂರು ಮಹಾನಗರದಲ್ಲಿ ಗುಂಡಿ ಮುಚ್ಚಲು ಸಾಧ್ಯ ಆಗುತ್ತಿಲ್ಲ. ಬೆಂಗಳೂರಿನಲ್ಲಿ ಅಭಿವೃದ್ಧಿ ಆಗುತ್ತಿಲ್ಲ. ಶಾಸಕರಿಗೆ ಹಣ ಕೊಡುತ್ತಿಲ್ಲ. ಇವರು ಅಭಿವೃದ್ಧಿ ಬಗ್ಗೆ ಮಾತನಾಡುವುದು ದುರಂತ. ಭಾರತವನ್ನು ಬೆಂಗಳೂರಿನ ಮುಖೇನ ನೋಡುತ್ತಾರೆ. ಡಿಕೆಶಿ ಅವರ ಇಂಥಾ ಹೇಳಿಕೆ ಸಹಜವಾಗಿ ಸಾಕಷ್ಟು ಜನರಿಗೆ ಬೇಸರ ತಂದಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಇದ್ದವರು ಮೂರು ಜನ ಆದ್ರೆ ಕದ್ದವರು ಯಾರು?: ಸಿಎಂ ಕ್ಲೀನ್‌ಚಿಟ್‌ಗೆ ಸಿ.ಟಿ.ರವಿ ವ್ಯಂಗ್ಯ
ರೈತರು ವಿದ್ಯುತ್ ಸಮಸ್ಯೆ ಎದುರಿಸುತ್ತಿರುವ ಕುರಿತು ಮಾತನಾಡಿ, ರಾಜ್ಯ ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ. ಗ್ಯಾರಂಟಿಗಳ ಭ್ರಮೆಯಿಂದ ಹೊರಬಂದು ವಿದ್ಯುತ್ ಸಮಸ್ಯೆಯಿಂದ ಬಳಲುತ್ತಿರುವ ನಾಡಿನ ರೈತರ ಸಂಕಷ್ಟವನ್ನು ನಿವಾರಿಸಬೇಕು. ಸಮರ್ಪಕವಾಗಿ ವಿದ್ಯುತ್ ಪೂರೈಸಬೇಕು. 6-7 ತಾಸು ವಿದ್ಯುತ್ ಕೊಡಲು ರಾಜ್ಯ ಸರ್ಕಾರದಿಂದ ಆಗುತ್ತಿಲ್ಲ. ರೈತರಿಗೆ ಯಾವಾಗ ಕರೆಂಟ್ ಬರುತ್ತದೆ. ಯಾವಾಗ ಇರುವುದಿಲ್ಲ ಎಂದು ತಿಳಿಯದಂತಾಗಿದೆ. ಇಲಾಖೆಯವರು ರಾತ್ರಿ 10 ಗಂಟೆಯಿಂದ ವಿದ್ಯುತ್ ಕೊಡುವುದಾಗಿ ಹೇಳುತ್ತಾರೆ. 12 ಗಂಟೆವರೆಗೂ ರೈತರು ಹೊಲದಲ್ಲಿ ಕಾದರೂ ಬರುವುದಿಲ್ಲ ವಿದ್ಯುತ್ ಎಂದು ದೂರಿದರು. ಇದನ್ನೂ ಓದಿ: ಹೇಮಾವತಿ ನಾಲೆ ಅಭಿವೃದ್ಧಿ ಹೆಸರಲ್ಲಿ ನೂರಾರು ಕೋಟಿ ಅಕ್ರಮ ಆರೋಪ
ಸರ್ಕಾರವು ರೈತರನ್ನು ಸಂಕಷ್ಟಕ್ಕೆ ದೂಡುತ್ತಿದೆ. ವಿದ್ಯುತ್ ಅಭಾವ ಇದ್ದರೆ ಹೊರರಾಜ್ಯಗಳಿಂದ ಖರೀದಿ ಮಾಡುವ ಬಗ್ಗೆ ಸರ್ಕಾರ ತಯಾರಿ ಮಾಡಬೇಕಿದೆ. ವಿದ್ಯುತ್ ಅವ್ಯವಸ್ಥೆಯಿಂದ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳದೇ, ಅವರ ಸಮಸ್ಯೆಗಳನ್ನು ಪರಿಹರಿಸಿ ಎಂದರು. ಇದನ್ನೂ ಓದಿ: ಗ್ಯಾರಂಟಿ ಎಫೆಕ್ಟ್: ಬೆಳಗಾವಿಯ ಏಕೈಕ ಯೋಗ & ಪ್ರಕೃತಿ ಚಿಕಿತ್ಸಾಲಯ ಬಂದ್