ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ತನ್ನ ವರ್ಚಸ್ಸು ಕಳೆದುಕೊಂಡಿದೆ. ಹೀಗಾಗಿ ಮತ್ತೆ ಆಪರೇಶನ್‌ಗೆ ಕಾಂಗ್ರೆಸ್ ಮುಂದಾಗಿದೆ. ಇದು ಕಾಂಗ್ರೆಸ್‌ನ ವೀಕ್‌ನೆಸ್ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.
ಮಾಜಿ ಬಿಜೆಪಿ (BJP) ಶಾಸಕರಿಗೆ ಕಾಂಗ್ರೆಸ್ ಗಾಳ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕೆಲವರು ಟಿಕೆಟ್ ಸಿಗದೇ ಇದ್ದವರು ಕಾಂಗ್ರೆಸ್‌ಗೆ ಹೋಗುತ್ತಾರೆ. ಅದರಿಂದ ಕಾಂಗ್ರೆಸ್‌ಗೆ ಯಾವುದೇ ಲಾಭವಿಲ್ಲ. ಟಿಕೆಟ್ ಸಿಗದೇ ಇದ್ದವರು ಹೋಗೋದು ಸಹಜ. ಅದರ ಬಗ್ಗೆ ನಾವೇನು ಹೆಚ್ಚು ತಲೆ ಕೆಡಿಸಿಕೊಳ್ಳಲ್ಲ. ಕಾಂಗ್ರೆಸ್‌ನ ಈ ಆಪರೇಶನ್‌ನಿಂದ ರಾಜಕೀಯವಾಗಿ ಯಾವುದೇ ಲಾಭವಾಗುವುದಿಲ್ಲ ಎಂದರು. ಇದನ್ನೂ ಓದಿ: ರಜನಿಕಾಂತ್ ವಿರುದ್ಧ ಮತ್ತೆ ಗುಡುಗಿದ ವಾಟಾಳ್ ನಾಗರಾಜ್
ಉತ್ತರ ಕರ್ನಾಟಕ ಭಾಗದಲ್ಲಿ ಸಾಕಷ್ಟು ಬರಗಾಲ ಇದೆ. ಈಗಾಗಲೇ ಮುಂಗಾರು ಮುಗಿದಿದೆ. ಮುಂಗಾರು ಬೆಳೆ ನಾಶವಾಗಿರೋ ರೈತರು ಕಂಗಾಲಾಗಿದ್ದಾರೆ. ಆದರೆ ಬೆಳೆ ಪರಿಹಾರಕ್ಕೆ ಸರ್ಕಾರ ಮುಂದಾಗಿಲ್ಲ. ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಈ ಹಿಂದೆ ಪ್ರವಾಹ ಬಂದಾಗ ರೈತರಿಗೆ ಎರಡು ಪಟ್ಟು ಪರಿಹಾರ ನೀಡಿದ್ದೇವೆ. ಬಹುತೇಕ ಸಂದರ್ಭಗಳಲ್ಲಿ ರಾಜ್ಯದ ರೈತರಿಗೆ ನಾವು ಪರಿಹಾರ ಒದಗಿಸಿದ್ದೇವೆ. ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ತಮಿಳರ ಮೇಲೆ ಹಲ್ಲೆ ಎಂದು ಫೇಕ್ ವೀಡಿಯೋ ಹಂಚಿಕೆ – ಇಬ್ಬರ ವಿರುದ್ಧ ಎಫ್‍ಐಆರ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]