– ಸಿದ್ದರಾಮಯ್ಯ ಹುಲಿಯಾ ಅಲ್ಲ ಕರಿಯಾ ಎಂದ ಎಂಎಲ್‌ಸಿ
ಬೆಂಗಳೂರು: ದಲಿತರ ವಿರುದ್ಧ ಕಾಂಗ್ರೆಸ್ (Congress) ಪಕ್ಷದ ಅನ್ಯಾಯವನ್ನು ಪ್ರತಿಭಟಿಸಿ ಕಾಂಗ್ರೆಸ್ಸಿನಲ್ಲಿರುವ ದಲಿತ ಮುಖಂಡರು, ಜನಪ್ರತಿನಿಧಿಗಳು ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್‌ನ ವಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಅವರು ಒತ್ತಾಯಿಸಿದರು.
ಬೆಂಗಳೂರಿನ ಸ್ವಾತಂತ್ರ‍್ಯ ಉದ್ಯಾನವನದಲ್ಲಿ ಇಂದು ನಡೆದ ಬಿಜೆಪಿಯ (BJP) ಬೃಹತ್ ಪ್ರತಿಭಟನೆ ಸಂದರ್ಭದಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿರುವ ಎಲ್ಲ ದಲಿತ ಮುಖಂಡರಿಗೂ ಧಿಕ್ಕಾರವಿರಲಿ. ದಲಿತರಿಗೆ ಅನ್ಯಾಯ ಮಾಡಿದ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು ಎಂದು ಆಗ್ರಹವನ್ನು ಮುಂದಿಟ್ಟರು. ಇದನ್ನೂ ಓದಿ :ಜನಹಿತಕ್ಕಾಗಿ ಮುಖ್ಯಮಂತ್ರಿ ರಾಜೀನಾಮೆ ಕೊಟ್ಟು ತೊಲಗಲಿ: ಅಶ್ವತ್ಥನಾರಾಯಣ್
ನಾನು ಹಿಂದುಳಿದ ವರ್ಗದ ನಾಯಕ. ಆದ್ದರಿಂದಲೇ ನನಗೆ ಬಿಜೆಪಿಯವರು ತೊಂದರೆ ಕೊಡುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಹಾಗಿದ್ದರೆ ಈ ದೇಶದ ಪ್ರಧಾನಮಂತ್ರಿ ಯಾರು? ಅವರು ಕೂಡ ಹಿಂದುಳಿದವರು. ಅವರು ನಿಮ್ಮ ಥರ ಕರಿ ಕಾಗೆ ಅಲ್ಲ. ಸಿದ್ದರಾಮಯ್ಯ(CM Siddaramaiah) ರಾಜೀನಾಮೆ ಕೊಡುವವರೆಗೆ ನಾವು ವಿರಮಿಸುವುದಿಲ್ಲ ಎಂದು ಪ್ರಕಟಿಸಿದ ಅವರು, ಭ್ರಷ್ಟಾಚಾರದ ಕಪ್ಪನ್ನು ಅಳಿಸುವವರೆಗೆ, ನಿಮ್ಮನ್ನು ಮನೆಗೆ ಕಳಿಸುವವರೆಗೆ ನಾವು ವಿರಮಿಸುವುದಿಲ್ಲ. ನಾವು ಹೋರಾಟದಿಂದ ವಿರಮಿಸುವುದಿಲ್ಲ ಎಂದರು. ಇದನ್ನೂ ಓದಿ : ಡಿ.ಕೆ ಶಿವಕುಮಾರ್‌ಗೆ ನಾಡಿನ ಜನ ಪಾಠ ಕಲಿಸೋ ದಿನ ದೂರವಿಲ್ಲ: ಜೆಡಿಎಸ್
ನಿಮ್ಮ ಮಂಡೆಯಲ್ಲಿ ಬುದ್ಧಿ ಉಂಟಾ ಮಾರಾಯರೇ?
ಸರ್ಕಾರಿ ಜಮೀನನ್ನು ನೀವು ಖರೀದಿಸಿದ್ದೀರಲ್ಲವೇ? ನಿಮ್ಮ ಮಂಡೆಯಲ್ಲಿ ಬುದ್ಧಿ ಉಂಟಾ ಮಾರಾಯರೇ? ಎಂದು ಛಲವಾದಿ ನಾರಾಯಣಸ್ವಾಮಿ ಅವರು ಮುಖ್ಯಮಂತ್ರಿಗಳಿಗೆ ಪ್ರಶ್ನೆ ಹಾಕಿದರು. ಇದನ್ನೂ ಓದಿ : ಸಿದ್ದರಾಮಯ್ಯ ಅಲ್ಲ, ಮೊದಲು ನನ್ನನ್ನ ಫೇಸ್ ಮಾಡಿ – ಹೆಚ್‌ಡಿಕೆಗೆ ಜಮೀರ್ ಸವಾಲ್
ನಿಮ್ಮ ಮಂಡೆಯಲ್ಲಿ ಬುದ್ಧಿ ಇಲ್ಲ. ಹುಲಿಯಾ ಎಂದಾಗ ಖುಷಿ ಪಡುತ್ತಿದ್ದ ನೀವೀಗ ಕರಿಯಾ ಆಗಿ ಕೂತಿದ್ದೀರಲ್ಲಾ ಎಂದು ಕೇಳಿದರು. ಎಷ್ಟು ವೈಟ್ನರ್ ಹಾಕಿದ್ರೂ ಬಿಳಿ ಆಗೋದಿಲ್ಲ ಮಾರಾಯರೇ. ದಯವಿಟ್ಟು ರಾಜೀನಾಮೆ ಕೊಟ್ಟು ಹೋಗಿಬಿಡಿ ಎಂದರು. ಇದನ್ನೂ ಓದಿ : ದಲಿತರ ಬಗ್ಗೆ ಮಾತಾಡೋ ನೈತಿಕತೆ ಬಿಜೆಪಿಯವರಿಗೆ ಇಲ್ಲ – ಸಿದ್ದರಾಮಯ್ಯ