ಇಸ್ಲಾಮಾಬಾದ್: ಬಾಂಗ್ಲಾದೇಶದಲ್ಲಿ ನಡೆದಂತೆ ಈಗ ಪಾಕಿಸ್ತಾನದಲ್ಲೂ (Pakistan) ಪ್ರತಿಭಟನೆ ಆರಂಭವಾಗಿದೆ. ರಾಜಧಾನಿ ಇಸ್ಲಾಮಾಬಾದ್‌ನಲ್ಲಿ (Islamabad) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಅವರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಜನರು ಬೀದಿಗಿಳಿದಿದ್ದಾರೆ.
ಭಾನುವಾರ ಇಮ್ರಾನ್ ಖಾನ್ ಅವರ ತೆಹ್ರೀಕ್-ಎ-ಇನ್ಸಾಫ್ (PTI) ಪಕ್ಷ ಇಸ್ಲಾಮಾಬಾದ್‌ನಲ್ಲಿ ಪ್ರತಿಭಟನಾ ಸಭೆಯನ್ನು ಆಯೋಜಿಸಿತ್ತು. ಪ್ರತಿಭಟನಾ ಸಭೆಯ ಬಳಿಕ ಇಮ್ರಾನ್ ಬೆಂಬಲಿಗರು ರಾಜಧಾನಿಯಲ್ಲಿ ಪ್ರತಿಭಟನೆ (Protest) ಆರಂಭಿಸಿದ್ದಾರೆ.
عمران خان کا خطاب، جلسہ گاہ کے فضائی مناظر، ہر طرف انسانوں کے سر ہی سر۔۔۔!!! pic.twitter.com/7wllcJq7L2
— Mughees Ali (@mugheesali81) September 8, 2024
ಇಮ್ರಾನ್ ಖಾನ್ ಅವರ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ಅವರ ಮೇಲೆ ಬಂದಿರುವ ಆರೋಪಗಳೆಲ್ಲವೂ ರಾಜಕೀಯ ಪ್ರೇರಿತ. ಒಂದು ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿರುವ (Jail) ಅವರನ್ನು ಬಿಡುಗಡೆಗೊಳಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಇದನ್ನೂ ಓದಿ: 25 ವರ್ಷಗಳ ಬಳಿಕ ಮೊದಲ ಬಾರಿಗೆ ಕಾರ್ಗಿಲ್ ಯುದ್ಧದಲ್ಲಿ ತನ್ನ ಪಾತ್ರದ ಬಗ್ಗೆ ಪಾಕ್ ತಪ್ಪೊಪ್ಪಿಗೆ!
ದೇಶದ ವಿವಿಧ ಭಾಗಗಳಿಂದ ಜನರು ಇಸ್ಲಾಮಾಬಾದ್‌ನತ್ತ ಆಗಮಿಸುತ್ತಿದ್ದಾರೆ. ಖಾನ್ ಜೈಲಿನಿಂದ ಬಿಡುಗಡೆಯಾಗುವವರೆಗೂ ನಾವು ವಿಶ್ರಮಿಸುವುದಿಲ್ಲ ಬೆಂಬಲಿಗರು ಘೋಷಿಸಿದ್ದಾರೆ.
ಪ್ರತಿಭಟನಾಕಾರರಿಗೆ ಇಸ್ಲಾಮಾಬಾದ್ ಪ್ರವೇಶವನ್ನು ಬಂದ್ ಮಾಡಲಾಗಿದೆ. ಗಲಾಟೆ ನಿಯಂತ್ರಿಸಲು ಭಾರೀ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ. ರಸ್ತೆಯಲ್ಲಿ ಶಿಪ್ಪಿಂಗ್ ಕಂಟೈನರ್ ಇಡುವ ಮೂಲಕ ಪ್ರತಿಭಟನಾಕಾರರ ಸಂಚಾರವನ್ನು ತಡೆಯಲಾಗುತ್ತಿದೆ. ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.