ತುಮಕೂರು: ಹೆಚ್ಡಿ ಕುಮಾರಸ್ವಾಮಿ (HD Kumaraswamy) ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ರೈತರ ಸಾಲ ಮನ್ನಾ (Loan Waiver) ಮಾಡಿ ಬಾಕಿ ಉಳಿಸಿದ್ದ 300 ಕೋಟಿ ಹಣವನ್ನು ಕಾಂಗ್ರೆಸ್ ಸರ್ಕಾರ ಮುಂದಿನ ದಿನದಲ್ಲಿ ತೀರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.
ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಹಕಾರ ಸಚಿವ ಕೆಎನ್ ರಾಜಣ್ಣ ಅವರ 75ನೇ ವರ್ಷದ ‘ಅಮೃತ ಮಹೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡಿದ್ದೇವೆ ಎಂದು ಕುಮಾರಸ್ವಾಮಿ ಹೆಸರು ಪಡೆದುಕೊಂಡರು. ಆದರೆ ಬಾಕಿಯನ್ನು ನಮ್ಮ ಸರ್ಕಾರ ತೀರಿಸಬೇಕಾಗಿದೆ. ಹೆಸರು ಅವರಿಗೆ, ಹೊರೆ ಹೊತ್ತುಕೊಂಡಿದ್ದು ನಮ್ಮ ಸರ್ಕಾರ ಎಂದರು. ಇದನ್ನೂ ಓದಿ: ಹೊಳೆ ದಡದಲ್ಲಿ ಮಹಿಳೆ ಶವ ಹೂತಿಟ್ಟಿದ್ದ ಕೇಸ್ಗೆ ಟ್ವಿಸ್ಟ್; ಲವ್ವಿಡವ್ವಿ ಅಂತಾ ಹೋಗಿದ್ದವನಿಂದಲೇ ಹತ್ಯೆ
ಬಡತನ ದೂರ ಮಾಡಬೇಕು, ಬಡ ಜನರಿಗೆ ಸಾಮಾಜಿಕ, ಆರ್ಥಿಕ ಶಕ್ತಿ ತುಂಬಬೇಕು ಎಂಬ ಕಾರಣಕ್ಕೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಎಲ್ಲ ಜಾತಿ, ಧರ್ಮ ಹಾಗೂ ಪಕ್ಷದವರು ಇದರ ಲಾಭ ಪಡೆದುಕೊಳ್ಳುತ್ತಿದ್ದಾರೆ. ಆದರೆ ಕೆಲವರು ವೃಥಾ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: 2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ
ಬಡವರಿಗೆ ಅಕ್ಕಿ ಕೊಡುವ ಯೋಜನೆಗೆ ಕೆಎನ್ ರಾಜಣ್ಣ ‘ಅನ್ನಭಾಗ್ಯ’ ಹೆಸರು ಸೂಚಿಸಿದ್ದರು. ಯೋಜನೆ ಜಾರಿಗೆ ತರುವ ಸಮಯದಲ್ಲಿ ಅದೇ ಹೆಸರಿಡಲಾಯಿತು. ಸರ್ಕಾರಿ ಶಾಲಾ ಮಕ್ಕಳಿಗೆ ‘ಶೂ ಭಾಗ್ಯ’ ಕಲ್ಪಿಸಲು ರಾಜಣ್ಣ ಕಾರಣ ಎಂದು ಸ್ಮರಿಸಿದರು. ಇದನ್ನೂ ಓದಿ: ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಮಕ್ಕಳ ಹಾಜರಾತಿಗೆ Facial Recognition ತಂತ್ರಜ್ಞಾನ- ಸರ್ಕಾರ ಆದೇಶ
ರಾಜಕೀಯ ಅಧಿಕಾರ ಇದ್ದರೆ ಮಾತ್ರ ಬಡವರ ಕೆಲಸ ಮಾಡಲು ಸಾಧ್ಯ. ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರಿದರೆ ಬಡವರ ಕೆಲಸ ಮಾಡಲು ಸಾಧ್ಯವಾಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: 2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ