ಬೆಳಗಾವಿ: ರಾಜ್ಯದಲ್ಲಿ ಕುಡಿಯುವ ನೀರಿನ ಅಭಾವ ಆಗದಂತೆ ಈಗಾಗಲೇ ಜಲಾಶಯಗಳಲ್ಲಿ ನೀರನ್ನು ಸಂಗ್ರಹಿಸಿ ಇಡಲಾಗಿದ್ದು ಕುಡಿಯುವ ನೀರಿನ ಸಮಸ್ಯೆ ಬಂದರೂ ಪರಿಹಾರ ಮಾಡಲು ಸೂಚನೆ ಕೊಡುತ್ತೇನೆ ಎಂದು ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಹೇಳಿದರು.
Advertisement
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಡಿಯುವ ನೀರನ್ನು ಗ್ರಾಮೀಣ ಪ್ರದೇಶಕ್ಕೆ ನೀರು ಸರಬರಾಜು ಮಾಡಲು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ಯ ಇಲಾಖೆ ಮತ್ತು ಪಟ್ಟಣಗಳಿಗೆ ನಗರಾಭಿವೃದ್ಧಿ ಇಲಾಖೆಗೆ ಪೂರೈಸುವ ಜವಾಬ್ದಾರಿ ವಹಿಸಿಕೊಟ್ಟಿದ್ದೇವೆ. ಒಂದು ವೇಳೆ ಕುಡಿಯುವ ನೀರಿನ ಸಮಸ್ಯೆ ಎಲ್ಲಿಯೇ ಇದ್ದರೂ ಪರಿಹಾರ ಮಾಡಲು ಸೂಚನೆ ಕೊಡುತ್ತೇನೆ. ನಮ್ಮ ಜಲಾಶಯದಲ್ಲಿ ಬೇಸಿಗೆ ಕಾಲಕ್ಕೆ ಬೇಕಾಗುವಷ್ಟು ನೀರನ್ನು ಹಿಡಿದಿಟ್ಟಿದ್ದೇವೆ ಎಂದರು. ಇದನ್ನೂ ಓದಿ: 90 ವರ್ಷದ ಬುದ್ಧಿಮಾಂದ್ಯ ತಾಯಿ, ಮಗನನ್ನು ಗುರುತಿಸುವ ಭಾವನಾತ್ಮಕ ವೀಡಿಯೋ ವೈರಲ್
Advertisement
Advertisement
ಹಿಡಕಲ್, ನಾರಾಯಣಪುರ, ಆಲಮಟ್ಟಿ, ಹಿಪ್ಪರಗಿ ಜಲಾಶಯದಲ್ಲಿ ನೀರಿನ್ನು ಹಿಡಿದು ಇಟ್ಟಿದ್ದೇವೆ. ಹೀಗೆ ರಾಜ್ಯದ ಬೇರೆ, ಬೇರೆ ಜಲಾಶಯದಲ್ಲಿ ನೀರನ್ನು ಸಂಗ್ರಹಿಸಲಾಗಿದೆ. ಅವಶ್ಯಕತೆ ಇದ್ದಾಗ ಕುಡಿಯಲು ನೀರು ಜಲಾಶಯದಿಂದ ಕೊಡುತ್ತೇವೆ. ಬೇಸಿಗೆ ಕಾಲದಲ್ಲಿ ಕುಡಿಯಲು ಮಾತ್ರ ಕೊಡುತ್ತೇವೆ. ಬೇಸಿಗೆ ಕಾಲದಲ್ಲಿ ಬೆಳೆಗಳಿಗೆ ಕೊಡಲು ಆಗುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಸೂರ್ಯ-ಚಂದ್ರ ಇರುವವರೆಗೂ ಹಿಂದೂ ಧರ್ಮ, ಮಾತೃ ಭಾಷೆ ಶಾಶ್ವತವಾಗಿರುತ್ತೆ: ಕಾರಜೋಳ
Advertisement