ಬೆಳಗಾವಿ: ನಾನು ಸಾರಿಗೆ ಮಂತ್ರಿ ಇದ್ದಾಗ ಕೊನೆಯಾಗಿ ನೇಮಕಾತಿಯಾತ್ತು. ಕಳೆದ ಏಳು ವರ್ಷಗಳಿಂದ 13,888 ಸಿಬ್ಬಂದಿ ನಿವೃತ್ತಿ ಹೊಂದಿದ್ದಾರೆ. ಈಗ 9 ಸಾವಿರ ಸಾರಿಗೆ ಸಿಬ್ಬಂದಿ ಹೊಸದಾಗಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹೇಳಿದರು.
ತಾಲೂಕಿನ ಸುವರ್ಣ ಗಾರ್ಡನ್ ಬಳಿಯ ಟೆಂಟ್‌ನಲ್ಲಿ ನಡೆದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಸಚಿವರು ಮಾತನಾಡಿದರು.
Advertisement
ಶಕ್ತಿ ಯೋಜನೆ (Shakti scheme) ಜಾರಿಯಾದ ಮೇಲೆ ಮೇಲೆ ಜನರು ಜಾಸ್ತಿ ಓಡಾಡುತ್ತಿದ್ದಾರೆ. ಮೊದಲು 85 ಲಕ್ಷ ಜನರು ಓಡಾಡುತ್ತಿದ್ದರು. ಈಗ 1 ಕೋಟಿ ಜನರು ಓಡಾಟ ಮಾಡುತ್ತಿದ್ದಾರೆ. ಶಾಲೆಗೆ ಹೋಗುವಾಗ, ಬರುವಾಗ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಮಹಿಳೆಯರ ಓಡಾಟ ಕೂಡ ಹೆಚ್ಚಾಗಿದೆ. ಇದಕ್ಕೆಲ್ಲಾ ಪ್ರಮುಖ ಕಾರಣ ಕಳೆದ ನಾಲ್ಕು ವರ್ಷದಲ್ಲಿ ಒಂದೇ ಒಂದು ಬಸ್ (Bus) ಖರೀದಿ ಮಾಡಿಲ್ಲ. ಹೊಸ ಬಸ್ ತಗೊಂಡು ಹಳೆಯ ಬಸ್ಸುಗಳನ್ನು ಸ್ಕ್ರ್ಯಾಪ್ ಮಾಡಬೇಕು. ಹೀಗೆ ಆಗಿದ್ದರೆ ಏನು ಸಮಸ್ಯೆ ಆಗುತ್ತಿರಲಿಲ್ಲ ಎಂದರು. ಇದನ್ನೂ ಓದಿ: ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ – ಠಾಣೆ ಎದುರೇ ಹಾರ ಬದಲಿಸಿದ ಜೋಡಿ
Advertisement
Advertisement
ಬೆಳಗಾವಿ ಸಾರಿಗೆ ವಿಭಾಗಕ್ಕೆ ಬಿಎಂಟಿಸಿ (BMTC) ಹಳೆ ಬಸ್ ಬಿಟ್ಟಿರುವುದಕ್ಕೆ ಇಲ್ಲಿ ಬಸ್ ಇಲ್ಲ ಎಂಬ ಕಾರಣಕ್ಕೆ ತೆಗೆದುಕೊಂಡಿದ್ದಾರೆ. ಮತ್ತೆ ಆ ಬಸ್ಸುಗಳನ್ನು ವಾಪಸ್ ಕಳುಹಿಸಿದ್ದಾರೆ. ಸತತವಾಗಿ ನಾಲ್ಕು ವರ್ಷ ಬಸ್ ಖರೀದಿ ಮಾಡಿಲ್ಲ, ಏಳು ವರ್ಷಗಳಿಂದ ನೇಮಕಾತಿ ಮಾಡಿಲ್ಲ, ಹೀಗಾಗಿ ಸಮಸ್ಯೆ ಆಗುತ್ತಿದೆ. ಹಾಗಾಗಿ 5500 ಹೊಸ ಬಸ್ ಖರೀದಿ ಮಾಡುತ್ತಿದ್ದು, 9 ಸಾವಿರ ಸಿಬ್ಬಂದಿ ನೇಮಕಾತಿ ಮಾಡಲಿದ್ದೇವೆ ಎಂದರು.
Advertisement
2013ರಿಂದ 2017ರವರೆಗೆ ನಾನು ಸಾರಿಗೆ ಸಚಿವ ಇದ್ದಾಗ ಈ ಭಾಗಕ್ಕೆ ಹೆಚ್ಚು ಬಸ್ ನಿಲ್ದಾಣ ಕೊಟ್ಟಿದ್ದೇನೆ. ಬೆಳಗಾವಿ, ಬಾಗಲಕೋಟೆ, ಗದಗ, ಹುಬ್ಬಳ್ಳಿ ಧಾರವಾಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಅತಿಹೆಚ್ಚು ಬಸ್ ನಿಲ್ದಾಣ ನೀಡಿದ್ದೆ. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣಕ್ಕೆ ಎರಡು ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ಹಾಕಲು ಸೂಚನೆ ನೀಡಿದ್ದೇನೆ. ಬೆಳಗಾವಿ ನಗರಕ್ಕೆ 100 ಹೊಸ ಬಸ್ ಖರೀದಿ ಮಾಡುತ್ತೇನೆ. ಮೂರು ತಿಂಗಳಲ್ಲಿ ಅವಧಿಯಲ್ಲಿ ಈ ಹೊಸ ಬಸ್ ಗಳು ಬರುತ್ತವೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಇದನ್ನೂ ಓದಿ: ಪ್ರೇಮಿಗಾಗಿ ಪಾಕ್ ತೊರೆದು ಭಾರತಕ್ಕೆ ಬಂದ ಚೆಲುವೆ
ಉತ್ತರ ಕರ್ನಾಟಕ ಮತ್ತು ರಾಜ್ಯದ ವಿವಿಧ ಸಮಸ್ಯೆಗಳ ಬಗ್ಗೆ ಮನವಿ ಸ್ವೀಕರಿಸಿದ್ದೇನೆ. ಬಿಸಿ ಊಟ ತಯಾರಿಸುವವರಿಗೆ ಗೌರವಧನ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದಾರೆ. ಶಿಳ್ಳೇಕ್ಯಾತ ಸಮಾಜದ ಬೇಡಿಕೆ, ಮಹಿಳೆಯರಿಗೆ ಅನಧಿಕೃತ ಗರ್ಭಕೋಶ ಆಪರೇಷನ್ ಹೀಗೆ ಅನೇಕ ಸಮಸ್ಯೆಗಳಿವೆ. ಪ್ರತಿಭಟನಾಕಾರರು ಕೊಟ್ಟಿರುವ ಮನವಿಗಳನ್ನು ಸಿಎಂಗೆ ಕೊಡುತ್ತೇನೆ. ಸರ್ಕಾರ ಕೂಡ ಅವರಿಗೆ ಸ್ಪಂದಿಸುತ್ತದೆ ಎಂದು ಭರವಸೆ ನೀಡಿದರು.
ಉತ್ತರ ಕರ್ನಾಟಕ ಬಗ್ಗೆ ತಾರತಮ್ಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ತಾರತಮ್ಯ ಅಷ್ಟೇನೂ ಇಲ್ಲ. ಕೆಲವೊಂದು ಲೋಪದೋಷಗಳು ಇರಬಹುದು. ಆದರೆ ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸಾಕಷ್ಟು ಅಭಿವೃದ್ಧಿಯಾಗಿವೆ. ಸಾಕಷ್ಟು ನೀರಾವರಿ ಯೋಜನೆ, ರಸ್ತೆಗಳ ಅಭಿವೃದ್ಧಿ ವಿಚಾರದಲ್ಲಿ ಒತ್ತು ನೀಡಲಾಗಿದೆ ಎಂದು ಹೇಳಿಕೆ ನೀಡಿದರು.
ಸುವರ್ಣ ಸೌಧಕ್ಕೆ ಕಚೇರಿ ಸ್ಥಳಾಂತರ ವಿಚಾರಕ್ಕೆ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ ಸೌಧಕ್ಕೆ ಕಚೇರಿಗಳನ್ನ ಶಿಫ್ಟ್ ಮಾಡಿದರೆ ಜನರು ಬರುತ್ತಾರೆ ಹೋಗ್ತಾರೆ. ರಾಜ್ಯಮಟ್ಟದ ಕಚೇರಿ ಸ್ಥಳಾಂತರ ಮಾಡಬೇಕು ಎಂದು ಅವರು ಹೇಳಿದರು.