ಶಿವಮೊಗ್ಗ: ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದರೆ ಬಿಜೆಪಿ (BJP) ಜಾರಿಗೆ ತಂದ ಇತಿಹಾಸ ತಿರುಚಿದ ಪಠ್ಯ ಪುಸ್ತಕವನ್ನು (Text Book) ಪರಿಷ್ಕರಣೆ ಮಾಡುತ್ತೇವೆ ಎಂದು ಹೇಳಿದ್ದೆವು. ಆ ಕೆಲಸವನ್ನು ಈಗ ಮಾಡಿಯೇ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ.
Advertisement
ಶಿವಮೊಗ್ಗದಲ್ಲಿ (Shivamogga) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದಿನ ಬಿಜೆಪಿ ಸರ್ಕಾರ ಪಠ್ಯ ಪುಸ್ತಕ ಪರಿಷ್ಕರಣೆ ನೆಪದಲ್ಲಿ ಇತಿಹಾಸ ತಿರುಚಲು ಹೊರಟಿತ್ತು. ಆದರೆ ನಮ್ಮ ಸರಕಾರ ಆ ರೀತಿ ಮಾಡದೇ ಇರುವ ಸತ್ಯವನ್ನು ವಿದ್ಯಾರ್ಥಿಗಳಿಗೆ ತಿಳಿಸುತ್ತೇವೆ. ಪಠ್ಯ ಪುಸ್ತಕ ಪರಿಷ್ಕರಣೆಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರೇ ಮುತುವರ್ಜಿ ವಹಿಸಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಮುಸ್ಲಿಮರ ಮನೆಲಿ 2, 3 ಹೆಂಡತಿಯರು ಇರ್ತಾರೆ, ಗೃಹಲಕ್ಷ್ಮಿ ಹೆಸರಿನಲ್ಲಿ ಕುಟುಂಬದಲ್ಲಿ ಬೆಂಕಿ: ಪ್ರತಾಪ್ ಸಿಂಹ ವ್ಯಂಗ್ಯ
Advertisement
Advertisement
ಮುಖ್ಯಮಂತ್ರಿ ಅವರ ನೇತೃತ್ವದಲ್ಲಿಯೇ ಪರಿಷ್ಕರಣೆ ನಡೆಯಲಿದೆ. ಇದಕ್ಕಾಗಿ ಈಗಾಗಲೇ ಹಲವು ತಜ್ಞರು, ಸಾಹಿತಿಗಳ ಚರ್ಚೆ ನಡೆಸಿದ್ದೇವೆ. ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಚರ್ಚಿಸಲು ಸೋಮವಾರ ಸಂಜೆ ಭೇಟಿಯಾಗಲು ಮುಖ್ಯಮಂತ್ರಿ ಅವರು ಸಮಯ ನಿಗದಿ ಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.
Advertisement
ಇನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿನ ಯೋಜನೆಗಳನ್ನು ಮುಂದುವರಿಸುವಂತೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಅವರು ಪತ್ರ ಬರೆಯಲಿ ಪತ್ರ ಬರೆದ ಮಾತ್ರಕ್ಕೆ ಅವರ ಮಾತು ಕೇಳಬೇಕು ಎಂದೇನಿಲ್ಲ. ಈಗ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಮಗೆ ಯಾವುದು ಸರಿ ಎನಿಸುತ್ತದೆಯೋ ಆ ಕೆಲಸವನ್ನು ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತ: ನೆರವಿಗೆ ಧಾವಿಸಿದ ಸಿಎಂ ಸಿದ್ದರಾಮಯ್ಯಗೆ ವಾಲಿಬಾಲ್ ಕ್ರೀಡಾಪಟುಗಳ ಧನ್ಯವಾದ