ಬೆಳಗಾವಿ: ಜಾರಕಿಹೊಳಿ ಬ್ರದರ್ಸ್ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕದನ ಕ್ಲೈಮಾಕ್ಸ್ ಹಂತಕ್ಕೆ ತಲುಪಿದ್ದು, ಪಕ್ಷಕ್ಕೆ ಯಾವುದೇ ಸಮಸ್ಯೆಯಾಗದಂತೆ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ ಅಂತ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇದನ್ನೂ ಓದಿ: ಮಾಧ್ಯಮಗಳ ಮೂಲಕ ಬೆಳಗಾವಿ ಕಿತ್ತಾಟಕ್ಕೆ ಹೇಳಿಕೆ ನೀಡುವುದು ಸರಿಯಲ್ಲ: ದಿನೇಶ್ ಗುಂಡೂರಾವ್
ನಗರದಲ್ಲಿ ಇಂದು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಈಗಾಗಲೇ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರನ್ನ ಸಮಸ್ಯೆ ಬಗೆಹರಿಸಲು ಇಲ್ಲಿಗೆ ಕಳುಹಿಸಿದ್ದಾರೆ. ಸದ್ಯ ಅವರು ಸಕ್ರ್ಯೂಟ್ ಹೌಸ್‍ನಲ್ಲಿ ಇದ್ದಾರೆ. ಅಲ್ಲಿಗೆ ತೆರಳಿ ಮಾತಾನಾಡುತ್ತೇವೆ. ಸಂಧಾನದ ಮೂಲಕ ಸಮಸ್ಯೆಯನ್ನು ಇತ್ಯರ್ಥ ಮಾಡಿಕೊಳ್ಳುತ್ತೇವೆ ಅಂತ ಹೇಳಿದ್ರು. ಇದನ್ನೂ ಓದಿ: ಡಿಕೆಶಿಗೆ ಕಾದಿದೆ ಗಂಡಾಂತರ, ಹೆಬ್ಬಾಳ್ಕರ್ ಬೆಂಗ್ಳೂರಿಗೆ ಹೋಗಿ ಶೋ ಮಾಡ್ತಿದ್ದಾರೆ: ಜಾರಕಿಹೊಳಿ
ನಾಮಪತ್ರ ಸಲ್ಲಿಸದಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಹೀಗಾಗಿ ಯಾರೂ ನಾಮಪತ್ರ ಸಲ್ಲಿಸುತ್ತಿಲ್ಲ. ಹೀಗಾಗಿ ಇದೀಗ ಖಂಡ್ರೆ ಏನ್ ಹೇಳ್ತಾರೋ ಅದರಂತೆ ನಡೆದುಕೊಳ್ಳುತ್ತೇವೆ. ಅದೇ ರೀತಿ ಲಕ್ಷ್ಮಿ ಬಣಕ್ಕೂ ದಿನೇಶ್ ಗುಂಡೂರಾವ್ ಇದೇ ಸಂದೇಶವನ್ನು ರವಾನಿಸಿರಬಹುದು. ಒಟ್ಟಿನಲ್ಲಿ ಕೆಪಿಸಿಸಿ ಸಮಸ್ಯೆ ಬಗೆಹರಿಸಲಿದ್ದು, ಚುನಾವಣೆ ಮುಂದೂಡುವ ಸಾಧ್ಯತೆಗಳಿವೆ ಅಂತ ಅವರು ಹೇಳಿದ್ದಾರೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಕ್ಷಮಿಸಲ್ಲ-ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆಶಿ ಕೆಂಡಾಮಂಡಲ!
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv