ಬೆಂಗಳೂರು: ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರವಾಗಿ ನಿರ್ಣಯ ತೆಗೆದುಕೊಂಡಿದ್ದೇವೆ. ಸಾಮಾಜಿಕ ನ್ಯಾಯ ಸುಮ್ ಸುಮ್ನೆ ಬರುವುದಿಲ್ಲ. ಇಂಥಾ ತೀರ್ಮಾನ ಮಾಡಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaih) ತಿಳಿಸಿದ್ದಾರೆ.
ಒಳಮೀಸಲಾತಿ ಕುರಿತ ಸಚಿವ ಸಂಪುಟ ನಿರ್ಣಯಕ್ಕಾಗಿ ಮಾದಿಗ ಸಮುದಾಯ ನಾಯಕರು ಸಿದ್ದರಾಮಯ್ಯರನ್ನ ಗೃಹ ಕಚೇರಿ ಕೃಷ್ಣದಲ್ಲಿ ಅಭಿನಂದಿಸಿದರು.
ಈ ವೇಳೆ ಮಾತನಾಡಿದ ಸಿಎಂ, ಒಳಮೀಸಲಾತಿಗಾಗಿ ಮಾದಿಗ ಸಮುದಾಯ ದಶಕಗಳಿಂದ ಹೋರಾಟ ನಡೆಸಿದೆ. ಈಗ ಸುಪ್ರೀಂ ಕೋರ್ಟ್ (Supreme Court) ಕೂಡ ತೀರ್ಪು ನೀಡಿದೆ. ನಾವು ಜಾರಿ ಮಾಡಲೇಬೇಕಿದೆ. 101 ಪರಿಶಿಷ್ಟ ಜಾತಿಗಳಿವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಮುಖ್ಯ. ಎಲ್ಲರನ್ನೂ ಸಮಾಧಾನ ಮಾಡುವುದು ಸಾಧ್ಯವಿಲ್ಲದಿದ್ದರೂ ಶೇ.90ರಷ್ಟು ಸಮುದಾಯಗಳಿಗೆ ಸಮಾಧಾನ ಆಗುವ ತೀರ್ಮಾನ ತೆಗೆದುಕೊಳ್ಳಬೇಕಿದೆ. ಇದನ್ನು ನಮ್ಮ ಸರ್ಕಾರ ಮಾಡಲಿದೆ ಎಂದರು. ಇದನ್ನೂ ಓದಿ: ವಿಜಯಪುರದಲ್ಲಿ ರೈತರಿಗೆ ನೀಡಿರೋ ನೋಟಿಸ್ ವಾಪಸ್ ಪಡೆಯುತ್ತೇವೆ: ಸಿಎಂ ಘೋಷಣೆ
ಗೃಹ ಸಚಿವ ಪರಮೇಶ್ವರ್ (G Parameshwar) ಅವರ ನಿವಾಸದಲ್ಲಿ ನಡೆದ ದಲಿತ ಶಾಸಕರ ಸಭೆಯಲ್ಲಿ, ಒಳಮೀಸಲಾತಿಗೆ ತಮ್ಮ ವಿರೋಧ ಇಲ್ಲ ಎನ್ನುವ ನಿರ್ಣಯ ಮಾಡಿದ್ದಾಗಿದೆ. ಹೀಗಾಗಿ ಎಲ್ಲರೂ ಒಳಮೀಸಲಾತಿ ಪರವಾಗಿದ್ದಾರೆ. ತೆಲಂಗಾಣ ಸರ್ಕಾರ ಈಗಾಗಲೇ ಒಳಮೀಸಲಾತಿ ಜಾರಿ ಸಂಬಂಧ ಒಂದು ಆಯೋಗ ರಚನೆ ಮಾಡಿದ್ದಾಗಿದೆ. ನಾನು ತೆಲಂಗಾಣ ಸಿಎಂ ಜೊತೆಗೂ ಇತ್ತೀಚಿಗೆ ಮೈಸೂರಿನಲ್ಲಿ ಈ ಬಗ್ಗೆ ಚರ್ಚೆ ಮಾಡಿದ್ದೇನೆ. ಹರಿಯಾಣದಲ್ಲೂ ಕ್ಯಾಬಿನೆಟ್ ನಿರ್ಣಯ ಆಗಿದೆ. ಆದರೆ ಆದೇಶ ಆಗಿಲ್ಲ. ನಮ್ಮ ಕ್ಯಾಬಿನೆಟ್‌ನಲ್ಲೂ ಹಿಂದೊಮ್ಮೆ ಅನೌಪಚಾರಿಕ ಚರ್ಚೆ ಮಾಡಿದ್ದೆ. ಸೋಮವಾರ ನಡೆದ ಕ್ಯಾಬಿನೆಟ್‌ನಲ್ಲಿ ಸಚಿವ ಮಹದೇವಪ್ಪ ಒಳಮೀಸಲಾತಿ ವಿಚಾರ ಪ್ರಸ್ತಾಪಿಸಿದರು ಎಂದು ಹೇಳಿದರು. ಇದನ್ನೂ ಓದಿ: ಜಾತಿಗಣತಿಯನ್ನ ಈ ಸರ್ಕಾರ ಯಾಕೆ ಬಿಡುಗಡೆ ಮಾಡ್ತಿಲ್ಲ: ಕುಮಾರಸ್ವಾಮಿ ಪ್ರಶ್ನೆ
ಸಚಿವರಾದ ಪ್ರಿಯಾಂಕ್ ಖರ್ಗೆ, ತಿಮ್ಮಾಪುರ, ಮುನಿಯಪ್ಪ ಅವರೆಲ್ಲರೂ ಮಾತನಾಡಿದರು. ಎಲ್ಲರೂ ಒಳಮೀಸಲಾತಿ ಒಪ್ಪಿಕೊಂಡರು. ಯಾರದ್ದೂ ವಿರೋಧ ಇರಲಿಲ್ಲ. ಆದರೆ ಅಗತ್ಯ ಡಾಟಾ ಅಗತ್ಯವಿದೆ ಎನ್ನುವ ಸಂಗತಿ ಕೂಡ ಚರ್ಚೆಗೆ ಬಂದಿದೆ. ಹೀಗಾಗಿ ಆಯೋಗ ರಚನೆ ಮಾಡಿದ್ದೇವೆ. ಆಯೋಗ ಎಲ್ಲ ವರದಿಗಳನ್ನೂ ಅಧ್ಯಯನ ಮಾಡಿ ಅಗತ್ಯ ಅಂಕಿ ಅಂಶ ಸಮೇತ ವರದಿ ನೀಡುತ್ತದೆ. ವರದಿ ಬರುವವರೆಗೂ ಹೊಸದಾಗಿ ಯಾವ ನೇಮಕಾತಿ ನೋಟಿಫಿಕೇಶನ್ ಹೊರಡಿಸುವುದು ಬೇಡ ಎನ್ನುವ ನಿರ್ಣಯ ಆಗಿದೆ. ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ ಎಂದರು. ಇದನ್ನೂ ಓದಿ: 3 ತಿಂಗಳ ಒಳಗೆ ಒಳಮೀಸಲಾತಿ ಜಾರಿಗೆ ಕ್ರಮ: ಸಿದ್ದರಾಮಯ್ಯ
ಸಮುದಾಯಗಳನ್ನು ಪರಸ್ಪರ ಸುಳ್ಳುಗಳ ಮೂಲಕ ಎತ್ತಿಕಟ್ಟುವ ಬಿಜೆಪಿ (BJP) ಕೇಂದ್ರದಲ್ಲಿ ಏಕೆ SCP/TSP ಕಾಯ್ದೆ ಜಾರಿ ಮಾಡಿಲ್ಲ? ಬಿಜೆಪಿ ಆಡಳಿತದಲ್ಲಿರುವ ಯಾವ ರಾಜ್ಯಗಳಲ್ಲೂ ನಾವು ಜಾರಿ ಮಾಡಿದ SCP/TSP ಕಾಯ್ದೆಯನ್ನು ಅವರೇಕೆ ಮಾಡಲಿಲ್ಲ ಹೇಳಿ. ಬಡ್ತಿಯಲ್ಲೂ ಮೀಸಲಾತಿ ತಂದಿದ್ದು ನಾವು ಮಾತ್ರ. ಬಿಜೆಪಿಯ ಯಾವ ರಾಜ್ಯಗಳಲ್ಲೂ ಜಾರಿ ಮಾಡಿಲ್ಲ. ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಮ್ಮ ರಾಜ್ಯ ಮಾತ್ರ. ಇದು ನನ್ನ ಕಮಿಟ್‌ಮೆಂಟ್. ರಾಜಕಾರಣಕ್ಕಾಗಿ ಇದೆಲ್ಲಾ ಮಾಡಿದ್ದಲ್ಲ. ಇದರ ಮುಂದುವರೆದ ಭಾಗವಾಗಿಯೇ ಒಳಮೀಸಲಾತಿ ಜಾರಿಗೆ ಮುಂದಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಯಾರನ್ನೋ ಓಲೈಸಲು ಹೋದರೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ರಾಜ್ಯ ಸರ್ಕಾರಕ್ಕೆ ಹೆಚ್‌ಡಿಕೆ ಎಚ್ಚರಿಕೆ
ಸಮಾಜದಲ್ಲಿ ಸಮಾನತೆ ಸುಮ್ಮನೆ ಬರುವುದಿಲ್ಲ. ಈ ರೀತಿ ನಿರ್ಣಯಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಹೊಸ ಆಯೋಗದ ವರದಿ ನಿಗದಿತ ಸಮಯದೊಳಗೆ ಬರುವ ನಿರೀಕ್ಷೆ ಇದೆ. ವರದಿ ಬಂದ ತಕ್ಷಣ ಒಳಮೀಸಲಾತಿ ಜಾರಿ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ ನಾಯಕರ ಟೀಕೆಗೆ ನ.23ಕ್ಕೆ ಉತ್ತರ ಕೊಡ್ತೀನಿ: ಹೆಚ್‌ಡಿಕೆ