ಚಿತ್ರದುರ್ಗ: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಭಾರತೀಯ ವಾಯುಸೇನೆ ನಡೆಸಿದ ಸರ್ಜಿಕಲ್ ಸ್ಟ್ರೈಕನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ. ಉಗ್ರರ ಮೇಲೆ ಭಾರತದ ವಾಯುಸೇನೆ ದಾಳಿಯ ಪರಿಣಾಮ ರಾಜ್ಯದಲ್ಲಿ 22 ಕ್ಕೂ ಹೆಚ್ಚು ಲೋಕಸಭೆ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಉಗ್ರರ ನೆಲೆಗಳ ಮೇಲೆ ಯಶಸ್ವಿಯಾಗಿ ನಡೆದ ಏರ್ ಸ್ಟ್ರೈಕ್ ನಿಂದಾಗಿ ದೇಶದಲ್ಲಿ ಬಿಜೆಪಿ ಪರ ಉತ್ತಮ ಅಲೆಯಿದೆ. ಭಾರತದಲ್ಲಿ ಇಂದಿನ ವಾತಾವರಣ ಭಾರತೀಯ ಜನತಾ ಪಕ್ಷದ ಪರವಾಗಿದೆ. ಪಾಕಿಸ್ತಾನದ ಒಳಗೆ ನುಗ್ಗಿ ನಮ್ಮ ವಾಯುಸೇನೆ ಉಗ್ರರ ನೆಲೆ ನಾಶ ಮಾಡಿದ್ದು ಸಂತೋಷವಾಗಿದೆ. ಅಲ್ಲದೇ 40 ವರ್ಷದ ಬಳಿಕ ಉಗ್ರ ನೆಲೆಗಳನ್ನು ಉಡೀಸ್ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಪರ ಅಲೆ ಇದೆ. ರಾಜ್ಯದಿಂದ 22 ಸಂಸದರನ್ನು ಕರೆದ್ಯೊಯ್ದು ಮೋದಿ ಅವರಿಗೆ ನಮ್ಮ ಕಾಣಿಕೆ ಕೊಡಬೇಕಿದೆ. ಅಲ್ಲಿಯವರೆಗೂ ನಾನು ಮನೆ ಸೇರುವುದಿಲ್ಲ ಎಂದರು.
ಪಾಕ್ ಉಗ್ರರರ ಮೇಲೆ ಭಾರತ ನಡೆಸಿದ ಏರ್ ಸ್ಟ್ರೈಕ್ ನಿಂದ ಯುವಕರು ಕುಣಿದು ಕುಪ್ಪಳಿಸುತ್ತಾ, ಸಂಭ್ರಮಿಸುತ್ತಿದ್ದಾರೆ. ಹುತಾತ್ಮರಾದ ಸೈನಿಕರ ಕಣಕಣ ರಕ್ತಕ್ಕೂ ಪ್ರತಿಕಾರವನ್ನು ಭಾರತ ತೀರಿಸಿಕೊಂಡಿದೆ ಎಂದರು. ಇದೇ ವೇಳೆ ತೋಟಗಾರಿಕಾ ಸಚಿವ ಎಂಸಿ ಮನುಗೂಳಿಯವರು ಉಗ್ರರ ಮೇಲೆ ಆಗಲಿ ಹಾಗೂ ಯೋಧರ ಮೇಲಾಗಲಿ ದಾಳಿ ಮಾಡಬಾರದಿತ್ತು ಎಂಬ ಹೇಳಿಕೆಗೆ ತಿರುಗೇಟು ನೀಡಿ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರ ಹೇಳಿಕೆಗಳು ಅಧಿಕಾರದ ಪರಮಾವಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಎಸ್ ಯಡಿಯೂರಪ್ಪ ಹೇಳಿದ ಹೇಳಿಕೆಗೆ ನಿಮ್ಮ ಅಭಿಪ್ರಾಯ ಏನು? ಕಮೆಂಟ್ ಮಾಡಿ ತಿಳಿಸಿ
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv