ಹುಬ್ಬಳ್ಳಿ: ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ವಿಶ್ವಾಸ ವ್ಯಕ್ತಪಡಿಸಿದರು.
ಹುಬ್ಬಳ್ಳಿಯಲ್ಲಿಂದು (Hubballi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಪ್ರಚಾರದ ವೇಳೆ ಬಿಜೆಪಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಮತದಾನ ವೇಳೆ ಗುಂಡಿನ ದಾಳಿ, ಇವಿಎಂ ಧ್ವಂಸ – ಮಣಿಪುರದ 11 ಮತಗಟ್ಟೆಗಳಲ್ಲಿ ಮರು ಮತದಾನ
ನಮ್ಮ ಪರಿವಾರ ಮೋದಿ ಪರಿವಾರ, ಮನೆ ಮನೆಗೆ ಬಿಜೆಪಿ ಘೋಷವಾಕ್ಯ ಮತ್ತು ಅಭಿವೃದ್ಧಿ ವಿಷಯ ಮುಂದಿಟ್ಟುಕೊಂಡು ನಮ್ಮ ಕಾರ್ಯಕರ್ತರು ಪ್ರಚಾರಕ್ಕೆ ಇಳಿದಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಇಂದು ಹುಬ್ಬಳ್ಳಿಗೆ ಜೆಪಿ ನಡ್ಡಾ – ನೇಹಾ ಕುಟುಂಬಸ್ಥರ ಭೇಟಿ ಸಾಧ್ಯತೆ
ನಡ್ಡಾ ಮತಯಾಚನೆ:
ಹುಬ್ಬಳ್ಳಿಯಲ್ಲಿಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ಅವರು ಮತಯಾಚನೆ ನಡೆಸಲಿದ್ದಾರೆ. ಮಧ್ಯಾಹ್ನವೇ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಧಾವಿಸಲಿದ್ದು, ಖಾಸಗಿ ಹೋಟೆಲ್‌ನಲ್ಲಿ ಶಾಸಕರು, ಅಭ್ಯರ್ಥಿಗಳು ಹಾಗೂ ಪ್ರಮುಖ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಸಂಜೆ ಹುಬ್ಬಳ್ಳಿ ಉಣಕಲ್ ಎಂ ಆರ್ ಸಾಕ್ರೆ ಸ್ಕೂಲ್ ಮೈದಾನದಲ್ಲಿ ನಡೆಯುವ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶದ ಬಳಿಕ ಖಾಸಗಿ ಹೋಟೆಲ್‌ನಲ್ಲಿ ಕೋರ್‌ಕಮಿಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವ ಜೋಶಿ ತಿಳಿಸಿದರು.