Bengaluru CityDistrictsKarnatakaLatestLeading NewsMain Post

ರಾಜ್ಯದಲ್ಲಿ 150 ಸೀಟು ಗೆದ್ದೇ ಗೆಲ್ಲುತ್ತೇವೆ: ಅರುಣ್ ಸಿಂಗ್

- ಸತೀಶ್ ಜಾರಕಿಹೊಳಿ ವಿರುದ್ಧ ಕಿಡಿ

ಬೆಂಗಳೂರು: ಈ ಬಾರಿಯ ಚುನಾವಣೆ (Election) ಯಲ್ಲಿ ರಾಜ್ಯದಲ್ಲಿ 150 ಸೀಟು ಗೆದ್ದೇ ಗೆಲ್ಲುತ್ತೇವೆ. ಕಾಂಗ್ರೆಸ್ (Congress) ಪಕ್ಷ ಹೆಸರು ಇಲ್ಲದ ಹಾಗೆ ಆಗುತ್ತಿದೆ. ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಒಂದು ಸೀಟು ಕೂಡ ಗೆದ್ದಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ (Arun Singh) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಪ್ರವಾಸ ನಡೆಯುತ್ತಿದೆ. ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಚರ್ಚಿಸುತ್ತಿದ್ದೇವೆ. ಬೂತ್ ಮಟ್ಟದ ಕಾರ್ಯಕರ್ತರಿಂದಲೇ ಪಕ್ಷ ಗೆಲ್ಲುತ್ತದೆ ಎಂದರು.

ಸಂಘಟನೆ ಮತ್ತು ಕಾರ್ಯಕರ್ತರ ಪಕ್ಷ ಬಿಜೆಪಿ. ರಾಜ್ಯದಲ್ಲಿ 150 ಸೀಟು ಗೆದ್ದೇ ಗೆಲ್ಲುತ್ತೇವೆ. ಕಾಂಗ್ರೆಸ್ ಪಕ್ಷ ಹೆಸರು ಇಲ್ಲದ ಹಾಗೆ ಆಗುತ್ತಿದೆ. ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಒಂದು ಸೀಟು ಗೆದ್ದಿಲ್ಲ. ಹಿಮಾಚಲ ಪ್ರದೇಶ ಮತ್ತು ಗುಜರಾತ್ (Gujrat) ನಲ್ಲಿ ಕೂಡ ಕಾಂಗ್ರೆಸ್ ಸೋಲುತ್ತದೆ. ಎಲ್ಲಾ ಕಡೆ ಬಿಜೆಪಿ (BJP) ಗೆದ್ದುಕೊಂಡು ಬರುತ್ತಿದೆ. ಮುಂದಿನ ದಿನದಲ್ಲೂ ಕರ್ನಾಟಕದಲ್ಲಿ ಬಿಜೆಪಿ ವಿಜಯಶಾಲಿಯಾಗುತ್ತದೆ ಎಂದು ಹೇಳಿದರು.

ಕರ್ನಾಟಕದಲ್ಲಿ ನಾವು ಸಾಕಷ್ಟು ಕೆಲಸ ಮಾಡಿದ್ದೇವೆ. ನಾವು ಮಾಡಿರುವ ಕೆಲಸ ನೋಡಿ ಕರ್ನಾಟಕದಲ್ಲಿ ಸಾಕಷ್ಟು ಇನ್ವೆಸ್ಟ್ ಆಗಿದೆ. ರಾಜ್ಯದ ಎಲ್ಲಾ ಸಚಿವರು ಗ್ರೌಂಡ್ ನಲ್ಲಿ ಇಳಿದು ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಕೆಲಸ ರಾಜ್ಯದ ಜನಕ್ಕೆ ಇಷ್ಟ ಆಗಿದೆ. ಹಾಗಾಗಿ ಮುಂದಿನ ಬಾರಿಯೂ ರಾಜ್ಯದಲ್ಲಿ ನಮ್ಮದೇ ಸರ್ಕಾರವಿರುತ್ತದೆ. ಕಾಂಗ್ರೆಸ್‍ನವರ ಬಳಿ ಹೇಳಿಕೊಳ್ಳಲು ಏನೂ ಇಲ್ಲ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ ಅಲೆಮಾರಿ ರಾಜಕಾರಣಿ, ರಾಜ್ಯದಲ್ಲಿ ಎಲ್ಲಿಯೇ ಸ್ಪರ್ಧಿಸಿದರೂ ಸೋಲುತ್ತಾರೆ : ಈಶ್ವರಪ್ಪ

ಇದೇ ವೇಳೆ ಹಿಂದೂ ಪದದ ಕುರಿತು ಸತೀಶ್ ಜಾರಕಿಹೊಳಿ (Sathish Jarakiholi) ವಿವಾದಾತ್ಮಕ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಯಾವಾಗಲೂ ನಮ್ಮ ಸಂಸ್ಕೃತಿಯನ್ನು ಹೀಯಾಳಿಸಿಕೊಂಡು ಬರುತ್ತಿದೆ. ರಾಹುಲ್ ಗಾಂಧಿ ಅನೇಕ ದೇವಸ್ಥಾನಗಳಿಗೆ ಭೇಟಿ ನೀಡುತ್ತಾರೆ. ಆದರೆ ಕಾಂಗ್ರೆಸ್ ಪಕ್ಷದ ಶಾಸಕರು ಈಥರ ಹೇಳಿಕೆಗಳನ್ನು ಕೊಡುತ್ತಾರೆ. ಈ ನಿಂದನೆ ಮಾಡಿರುವುದು ಸರಿಯಲ್ಲ ಎಂದು ಆಕ್ರೋಶ ಹೊರಹಾಕಿದರು.

ರಾಜ್ಯದ ಜನರು ಇದಕ್ಕೆ ಉತ್ತರ ನೀಡುತ್ತಾರೆ. ಜಾರಕಿಹೊಳಿ ವಿರುದ್ಧ ಕಾಂಗ್ರೆಸ್‍ನವರು ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದರೆ ಡಿಕೆ ಸಿದ್ದರಾಮಯ್ಯ, ರಾಹುಲ್ ಗಾಂಧಿ (Rahul Gandhi) ಮೂರು ಜನ ಇದನ್ನು ಒಪ್ಪಿಕೊಂಡಂತೆ ಆಗುತ್ತದೆ. ಅವರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಇಲ್ಲಿನವರೇ. ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಇದರ ಬಗ್ಗೆ ಗಮನ ಹರಿಸಬೇಕು ಎಂದರು.

ಬಳಿಕ ಅರುಣ್ ಸಿಂಗ್ ಅವರು ಕಲಬುರಗಿಯಲ್ಲಿ ಇಂದು ನಡೆಯಲಿರುವ ಜನಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲು ತೆರಳಿದರು. ಇಂದಿನಿಂದ ನಾಲ್ಕು ದಿನಗಳ ಕಾಲ ಜನ ಸಂಕಲ್ಪ ಯಾತ್ರೆ ನಡೆಯಲಿದೆ.

Live Tv

Leave a Reply

Your email address will not be published. Required fields are marked *

Back to top button