ಚಿತ್ರದುರ್ಗ: ನೂರಕ್ಕೆ ನೂರರಷ್ಟು ಮೂರು ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ ಎಂದು ಉಪಚುನಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು.
ಜಿಲ್ಲೆಯ ಚಳ್ಳಕೆರೆ (Challakere) ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಗೇಶ್ವರ್‌ಗೆ ಕಾಂಗ್ರೆಸ್ (Congress) ಸರ್ಕಾರ ಗಾಳ ಹಾಕುತ್ತಿದೆ ಎಂದು ಜೆಡಿಎಸ್ (JDS) ಆರೋಪಿಸುತ್ತಿರುವ ವಿಚಾರವಾಗಿ ಜೆಡಿಎಸ್‌ನವರು ಬಾಯಿಗೆ ಬಂದಂತೆ ಮಾತಾಡುತ್ತಾರೆ. ಮೊದಲು ಜೆಡಿಎಸ್‌ನವರು ಅಭ್ಯರ್ಥಿ ಘೋಷಣೆ ಮಾಡಲಿ. ಇಂದು ಸಂಜೆ ಅಥವಾ ನಾಳೆ ನಾವು ಅಭ್ಯರ್ಥಿ ಘೋಷಿಸುತ್ತೇವೆ. ನೂರಕ್ಕೆ ನೂರರಷ್ಟು ಮೂರು ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಪ್ರತಿಕ್ರಿಯಿಸಿದರು.ಇದನ್ನೂ ಓದಿ:ಗುಜರಾತ್ ವಿವಿ ಮಾನಹಾನಿ ಕೇಸ್ – ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಜಾ
Advertisement
Advertisement
ಇನ್ನೂ ಕಾಂಗ್ರೆಸ್ ನಾಯಕರನ್ನು ಯೋಗೇಶ್ವರ್ ಭೇಟಿಯಾಗಿದ್ದಾರೆ ಎಂದು ಜೆಡಿಎಸ್‌ನವರು ಆರೋಪಿಸುತ್ತಿದ್ದಾರೆ. ಜೆಡಿಎಸ್‌ನವರು ಬಾಯಿಗೆ ಬಂದಂತೆ ಮಾತನಾಡುತ್ತಿದೆ. ಮೊದಲು ನೀವು ಅಭ್ಯರ್ಥಿಯನ್ನು ಆಯ್ಕೆ ಮಾಡಿ ಎಂದರು.
Advertisement
ಬೆಂಗಳೂರಲ್ಲಿ ಮಳೆ ಜಾಸ್ತಿಯಾಗಿದೆ. ಆದರೆ ಬೆಳೆಗಳಿಗೆ ಯಾವುದೇ ತೊಂದರೆ ಆಗಿಲ್ಲ. ನಮ್ಮ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ನಮ್ಮ ಸರ್ಕಾರ ಬೀಳಿಸಲು ಸಾವಿರ ಕೋಟಿ ರೂ. ಖರ್ಚೆಂದು ಯತ್ನಾಳ್ ಹೇಳಿದ್ದರು. ಸಾವಿರ ಕೋಟಿ ಬ್ಲಾಕ್ ಮನಿ ಅಲ್ಲವೇ? ಅಷ್ಟೊಂದು ಹಣ ಎಲ್ಲಿಂದ ತರುತ್ತಾರೆ? ಜೆಪಿಯವರು ಬ್ಲಾಕ್ ಮನಿ ಮಾಡಿದ್ದಾರೆ ಎಂದು ಕಿಡಿಕಾರಿದರು.ಇದನ್ನೂ ಓದಿ: ಅತ್ಯಾಚಾರ ಕೇಸ್- ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ