– ಮತ ಚಲಾವಣೆಗೂ ಮುನ್ನ ಮನೆ ದೇವರಿಗೆ ವಿಶೇಷ ಪೂಜೆ
ಹಾಸನ: ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆ ಗ್ರಾಮದಲ್ಲಿಂದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ (Prajwal Revanna) ಮತ ಚಲಾಯಿಸಿದ್ದಾರೆ.
ಮತ ಚಲಾವಣೆಗೂ (Voting) ಮುನ್ನ ಹರದನಹಳ್ಳಿ ಗ್ರಾಮದಲ್ಲಿರುವ ದೇವೇಶ್ವರ ದೇವಾಲಯಕ್ಕೆ ಸಹೋದರ ಸೂರಜ್‌ರೇವಣ್ಣ ಅವರೊಂದಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ವಿವಿಧ ದೇಗುಲಗಳಲ್ಲಿ ಪೂಜೆ ಸಲ್ಲಿಸಿದ ಬಳಿಕ ಹಕ್ಕು ಚಲಾಯಿಸಿದ ಮಾಜಿ ಪ್ರಧಾನಿ ಹೆಚ್‌ಡಿಡಿ
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಜಿಲ್ಲೆಯಲ್ಲಿ ಜೆಡಿಎಸ್ (JDS) ವಾತಾವರಣ ತುಂಬಾ ಚೆನ್ನಾಗಿದೆ. ಯಾವುದೇ ಅನುಮಾನ ಇಲ್ಲ, ಖಂಡಿತಾ ಈ ಚುನಾವಣೆಯಲ್ಲಿ ನಾನು ಗೆಲ್ತೀನಿ. ನೂರಕ್ಕೆ ನೂರು ಜನರ ಮೇಲೆ ವಿಶ್ವಾಸ ಇದೆ. ಮನೆ ದೇವರು ದೇವೇಶ್ವರನಿಗೆ ಪೂಜೆ ಸಲ್ಲಿಸಿದ್ದೇನೆ. ಬಿಜೆಪಿ ಕಾರ್ಯಕರ್ತರು, ನಮ್ಮ ಮುಖಂಡರು ಒಟ್ಟಾಗಿ ಕೆಲಸ ಮಾಡಿದ್ದಾರೆ. ಏನೇ ಬಂದರೂ ಎದುರಿಸುತ್ತೇವೆ. ಮೊದಲ ಹಂತದ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿಯೂ ಮೈತ್ರಿ ಪಕ್ಷ ಗೆಲ್ಲಲ್ಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಳಿಕ ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ, ಪಡುವಲಹಿಪ್ಪೆ ಗ್ರಾಮದ ಮತಗಟ್ಟೆ ಸಂಖ್ಯೆ 251ರಲ್ಲಿ ಪ್ರಜ್ವಲ್ ಹಕ್ಕು ಚಲಾಯಿಸಿದ್ದಾರೆ. ಇದನ್ನೂ ಓದಿ: ಈ ದೇಶ ಉಳಿಸುವ ವ್ಯಕ್ತಿ ಮೋದಿ ಒಬ್ಬರೇ – ಪ್ರಧಾನಿಗಳ ಗುಣಗಾನ ಮಾಡಿದ ದೊಡ್ಡಗೌಡರು