– ಯಾವುದೇ ರೈತರನ್ನ ಒಕ್ಕಲೆಬ್ಬಿಸೋದಿಲ್ಲ ಎಂದ ಸಿದ್ದರಾಮಯ್ಯ
ಬೆಂಗಳೂರು: ವಿಜಯಪುರದಲ್ಲಿ (Vijayapura) ರೈತರ ಜಮೀನಿಗೆ ವಕ್ಫ್ ಬೋರ್ಡ್ (Waqf Board) ಕೊಟ್ಟಿರುವ ನೋಟಿಸನ್ನು ವಾಪಸ್ ಪಡೆಯೋದಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿದ್ದಾರೆ.
ವಿಜಯಪುರದಲ್ಲಿ ರೈತರ ಜಮೀನಿಗೆ ವಕ್ಫ್ ಬೋರ್ಡ್ ಕೊಟ್ಟಿರುವ ನೋಟಿಸ್ ವಿಚಾರವಾಗಿ ಕೊನೆಗೂ ಸಿಎಂ ಸಿದ್ದರಾಮಯ್ಯ ಮೌನ ಮುರಿದಿದ್ದು, ಮೊದಲ ಬಾರಿಗೆ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಯಾವುದೇ ರೈತರನ್ನ ಸರ್ಕಾರ ಒಕ್ಕಲು ಎಬ್ಬಿಸಲ್ಲ. ಸೋಮವಾರ ಮೂರು ಜನ ಸಚಿವರು ಸುದ್ದಿಗೋಷ್ಠಿ ಮಾಡಿ ಮಾತನಾಡಿದ್ದಾರೆ. ವಿಜಯಪುರದಲ್ಲಿ ಯಾವುದೇ ರೈತರನ್ನು ಒಕ್ಕಲೆಬ್ಬಿಸೋದಿಲ್ಲ. ರೈತರಿಗೆ ನೋಟಿಸ್ ಕೊಟ್ಟಿದ್ದರೆ ಅದನ್ನು ವಾಪಸ್ ಪಡೆಯುತ್ತೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ: ಸಿಎಂ
ಇನ್ನು ಯಾದಗಿರಿ ಮತ್ತು ಧಾರವಾಡದಲ್ಲಿ ರೈತರಿಗೆ ನೋಟಿಸ್ ಕೊಟ್ಟಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅದರ ಬಗ್ಗೆ ನೋಡುತ್ತೇನೆ. ಕಂದಾಯ ಸಚಿವರಿಗೆ ಅದನ್ನು ಪರಿಶೀಲಿಸಲು ತಿಳಿಸುತ್ತೇನೆ ಎಂದರು. ಇದನ್ನೂ ಓದಿ: ಜಾತಿಗಣತಿಯನ್ನ ಈ ಸರ್ಕಾರ ಯಾಕೆ ಬಿಡುಗಡೆ ಮಾಡ್ತಿಲ್ಲ: ಕುಮಾರಸ್ವಾಮಿ ಪ್ರಶ್ನೆ