ವಿಜಯಪುರ: ಸಿಎಂ ಸಿದ್ದರಾಮಯ್ಯ (Siddaramaiah) ಲಫಂಗ ಇದ್ದಾನೆ, ಮೀಸಲಾತಿ ನೀಡಲ್ಲ ಎಂದು ಸಿಎಂ ವಿರುದ್ಧ ವಿಜಯಪುರ (Vijayapura) ಜಿಲ್ಲೆಯ ಮನಗೂಳಿಯ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಬುಧವಾರ ಕಾರ್ಯಕ್ರಮವೊಂದರಲ್ಲಿ ಏಕವಚನದಲ್ಲೆ ವಾಗ್ದಾಳಿ ನಡೆಸಿದ್ದರು. ಅವರ ಸ್ಥಾನಕ್ಕೆ ನಾನು ಬಳಸಿದ ಶಬ್ದ ಒಳ್ಳೆಯದಲ್ಲ. ಆಶಿರ್ವಚನದ ವೇಳೆ ಬಳಸಿದ ಎರಡು ಪದಗಳನ್ನು ಹಿಂದೆ ಪಡೆಯುತ್ತೇನೆ ಎಂದು ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ್ದಾರೆ.
ಸಿಎಂ ವಿರುದ್ಧದ ಹೇಳಿಕೆಗೆ ಪ್ರತಿಕ್ರಿಯಿಸಿದ ಸ್ವಾಮೀಜಿ (Abhinava Sanganabasava Shivacharya Swamiji), ನಾವು ನೋವು ಆಗುವಂತಹ ಮಾತುಗಳನ್ನ ಆಡಿದ್ದೇವೆ ಎಂದು ಅವರ ಅಭಿಮಾನಿಗಳು ಹೇಳುತ್ತಿದ್ದಾರೆ. ಅದಕ್ಕಾಗಿ ನಾನು ಆಶಿರ್ವಚನದ ವೇಳೆ ಬಳಸಿದ ಎರಡು ಪದಗಳನ್ನು ಹಿಂದೆ ಪಡೆಯುತ್ತೇನೆ. ಅವರ ಸ್ಥಾನಕ್ಕೆ ನಾನು ಬಳಸಿದ ಶಬ್ದ ಒಳ್ಳೆಯದಲ್ಲ. ಕಾರಣ ನಾನು ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಬಕಾರಿ ಸಚಿವರ ಖಾತೆ ಬದಲಿಸುವಂತೆ ಆಗ್ರಹಿಸಿ ನ.20ಕ್ಕೆ ರಾಜ್ಯಾದ್ಯಂತ ಬಾರ್ ಬಂದ್
Advertisement
Advertisement
ಬುಧವಾರ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದ ಕಾರ್ಯಕ್ರಮವೊಂದರಲ್ಲಿ ಜಿಲ್ಲೆಯ ಮನಗೂಳಿಯ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯಸ್ವಾಮೀಜಿ ಪಂಚಮಸಾಲಿ 2ಎ ಮೀಸಲಾತಿ ವಿಚಾರದಲ್ಲಿ ಸಿಎಂ ವಿರುದ್ಧ ಆಶಿರ್ವಚನದ ವೇಳೆ ಸಿದ್ದರಾಮಯ್ಯ ಲಫಂಗ ಇದ್ದಾನೆ. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕೂಡಲಸಂಗಮ ಜಯಮೃತ್ಯುಂಜಯ ಶ್ರೀಗಳ ಹೆಗಲ ಮೇಲೆ ಸಿದ್ದರಾಮಯ್ಯ ಕೈ ಹಾಕ್ತಾನೆ. ನಾನೇ ಆಗಿದ್ರೇ ಅವರ ಕಪಾಳಕ್ಕೆ ಹೊಡೆಯುತ್ತಿದ್ದೆ. ಸಿಎಂ ಆದಾಗ ಗದ್ದಲ ಮಾಡುತ್ತಾರೆ. ಪಂಚಮಸಾಲಿ 2ಎ ಮೀಸಲಾತಿಯಲ್ಲಿ ನಾಟಕ ಮಾಡಿಕೊಂಡು ಹೋಗುತ್ತಿದ್ದಾರೆ. ಸಿದ್ದರಾಮಯ್ಯ ಮೀಸಲಾತಿ ನೀಡಲ್ಲ ಎಂದು ಕಿಡಿಕಾರಿದ್ದರು. ಇದೀಗ ಸ್ವಾಮೀಜಿ ಸಿಎಂ ವಿರುದ್ಧ ಬಳಸಿದ ಎರಡು ಪದ ಹಿಂಪಡೆಯುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಡುಪಿ| ರಾಶಿ ರಾಶಿ ಗೋವಾ ಮದ್ಯ ಬಾಟಲಿಗಳು ವಶ