ಬೆಂಗಳೂರು: ಮುಂದಿನ ದಿನಗಳಲ್ಲಿ ಹೈಕೋರ್ಟ್ ನಿಂದ ಯಾವುದೇ ಸೂಚನೆ ಬರದಂತೆ ಎಚ್ಚೆತ್ತುಕೊಂಡು ಕಾರ್ಯನಿರ್ವಹಿಸುತ್ತೇವೆ ಎಂದು ಬಿಬಿಎಂಪಿ ನೂತನ ಮೇಯರ್ ಗಂಗಾಂಬಿಕೆ ಹೇಳಿದ್ದಾರೆ.
ಮೇಯರ್ ಆಗಿ ಇಂದು ಆಯ್ಕೆಯಾದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗುತ್ತದೆ. ಅಕ್ಟೋಬರ್ ನಲ್ಲಿ ಭಾರೀ ಮಳೆಯಾಗಲಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತದೆ. ಈ ಕುರಿತು ಅಧಿಕಾರಿಗಳ ಜೊತೆ ತೆರಳಿ ಖುದ್ದಾಗಿ ಪರಿಶೀಲಿಸುತ್ತೇನೆ ಎಂದರು.
Advertisement
Advertisement
ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾಗಿದ್ದೇವೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದ್ದು, ಇತರರಿಗೆ ನಾವೇ ಮಾದರಿಯಾಗಬೇಕು ಎಂದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ ಎಂದು ಹೇಳಿದರು.
Advertisement
ಇದಕ್ಕೂ ಮುನ್ನ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ್ದ ಅವರು, ನಾನು ಹಾಗೂ ಉಪ ಮೇಯರ್ ಚರ್ಚೆ ಮಾಡಿ, ಆಡಳಿತ ನಡೆಸುತ್ತೇವೆ. ನಮ್ಮ ಮುಂದೆ ಅನೇಕ ಸಮಸ್ಯೆಗಳು ಇದ್ದರೂ, ಅವು ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿರುತ್ತದೆ. ಬಿಬಿಎಂಪಿಯ ಎಲ್ಲ ಸದಸ್ಯರ ಸಲಹೆ ಹಾಗೂ ಸೂಚನೆ ಪಡೆದುಕೊಂಡು ಕಾರ್ಯ ನಿರ್ವಹಿಸುತ್ತೇವೆ ಎಂದು ಭರವಸೆ ನೀಡಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv