ಕಲಬುರಗಿ: ಹಿಜಬ್ ಪರ ಹೋರಾಟಗಾರರ ಬಗ್ಗೆ ಅಷ್ಟೊಂದು ಒಲವು ಹೊಂದಿರುವ ಕಾಂಗ್ರೆಸ್ (Congress) ನಾಯಕರು ಬುರ್ಖಾ ಧರಿಸಿಕೊಂಡು ಓಡಾಡುವುದಾದರೆ ತಾವೇ ಸ್ವತಃ ಬುರ್ಖಾ ಖರೀದಿಸಿ ಕೊಡುವುದಾಗಿ ಬಿಜೆಪಿ (BjP) ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ (C T Ravi) ಲೇವಡಿ ಮಾಡಿದರು.
ಕಲಬುರಗಿ (kalaburagi) ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಡಿ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ ಎಂಬುದರಿಂದ ಹಿಡಿದು ವಾಲ್ಮೀಕಿ ಹಗರಣದ ಕೋಟ್ಯಂತರ ರೂ. ಅಕ್ರಮವಾಗಿ ಚುನಾವಣೆಗೆ ಬಳಕೆ ಆಗಿದೆ ಅನ್ನೋದು ಈಗಾಗಲೇ ಸಾಬೀತಾಗಿದೆ. ಹಾಗಾಗಿ, ಈ ಬಗ್ಗೆ ರಾಜ್ಯದ ಜನರ ಚಿತ್ತ ಬೇರೆಡೆ ಸೆಳೆಯಲು ಹುಬ್ಬಳ್ಳಿ ಗಲಭೆಕೋರರು ಹಾಗೂ ಹಿಜಾಬ್ ಪರ ಹೋರಾಟಗಾರರ ವಿರುದ್ಧ ಹಾಕಲಾಗಿದ್ದ ಎಲ್ಲ ಪ್ರಕರಣಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಗೃಹಲಕ್ಷ್ಮೀ ಯೋಜನೆಯ ಹಣದಿಂದ ಗ್ರಂಥಾಲಯ ಸ್ಥಾಪಿಸಿ, ಯುವಜನತೆಗೆ ನೆರವಾದ ಮಹಿಳೆ
ಮೈಸೂರಿನ ಮುಡಾ ಪ್ರಕರಣ (MUDA Scam) ತಮ್ಮ ಕುತ್ತಿಗೆಗೆ ಸುತ್ತಿಕೊಳ್ಳುತ್ತದೆ ಎಂಬುದು ಸಹ ಮುಖ್ಯಮಂತ್ರಿಗಳಿಗೆ ಈಗಾಗಲೇ ಮನದಟ್ಟಾಗಿದೆ. ಇದೆಲ್ಲವನ್ನೂ ವಿಷಯಾಂತರ ಮಾಡಲು ಅವರು ಶತಪ್ರಯತ್ನ ಮಾಡುತ್ತಿದ್ದಾರೆ ಎಂದು ನೇರವಾಗಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬಿಷ್ಣೋಯ್ ಗ್ಯಾಂಗ್‌ಗೆ ಭಾರತದ ಸರ್ಕಾರಿ ಏಜೆಂಟ್ ಜೊತೆ ನಂಟಿದೆ: ಕೆನಡಾ ಪೊಲೀಸರ ಗಂಭೀರ ಆರೋಪ
ಹುಬ್ಬಳ್ಳಿ (Hubballi) ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರ ಪರವಾಗಿ ತಾವಿರುವುದಾಗಿ ಹೇಳುವ ಸಿಎಂ, ಆಂಜನೇಯಸ್ವಾಮಿಯ ಮೇಲೆ ಕಲ್ಲು ತೂರಾಟ ಮಾಡಿದವರ ಪರವಾಗಿಯೂ ಇದ್ದೇವೆ ಎನ್ನುತ್ತಿದ್ದಾರೆ. ಅಷ್ಟೇ ಅಲ್ಲ, ಕುಕ್ಕರ್ ಬ್ಲಾಸ್ಟ್ ಮಾಡಿದವರು ತಮ್ಮ ಬ್ರದರ್ಸ್ ಎನ್ನುತ್ತಾರೆ ಎಂದು ಅಚ್ಚರಿ ಹೊರಹಾಕಿದರು.
ಬಿಜೆಪಿಯವರು ಅಲ್ಪಸಂಖ್ಯಾತರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎನ್ನುವ ಇವರಿಗೆ ಸಿಸಿಟಿವಿ ದೃಶ್ಯಾವಳಿಗಳು ದೇವಸ್ಥಾನ ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿರುವುದಕ್ಕೆ ಸಾಕ್ಷಿ ಎನಿಸುತ್ತಿಲ್ಲವೇ? ಪೊಲೀಸರು ಮತ್ತು ದೇವರ ಮೂರ್ತಿಗಳ ಮೇಲೆ ಕಲ್ಲು ತೂರುವವರು ಅಮಾಯಕರು ಎಂದು ಸ್ವತಃ ಮುಖ್ಯಮಂತ್ರಿಗಳು ಹೇಳಿಕೆ ನೀಡುತ್ತಾರೆ. ಹಾಗಾದರೆ, ನೀವು ಮುಖ್ಯಮಂತ್ರಿ ಮಾತ್ರವಲ್ಲ, ನ್ಯಾಯವಾದಿ ಸಹ ಆಗಿರುವುದರಿಂದ ಎಲ್ಲವನ್ನೂ ತನಿಖೆ ಮಾಡಿ ನೋಡೋಣ ಎಂದು ಸವಾಲು ಹಾಕಿದರು. ಇದನ್ನೂ ಓದಿ: ದಾಖಲೆ ತೋರಿಸಿದ್ರೆ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ಸನ್ಯಾಸತ್ವ ಸ್ವೀಕರಿಸುತ್ತೇನೆ: ಸಿ.ಟಿ ರವಿ
ಮುಡಾ ಮತ್ತು ವಾಲ್ಮೀಕಿ ಹಗರಣಗಳನ್ನು ಬಿಜೆಪಿ ಅಷ್ಟು ಸುಲಭವಾಗಿ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಉಪ್ಪಿಟ್ಟು ತಿಂದು ಕಾಫಿ ಕುಡಿದು ಬರುತ್ತಿದ್ದಾರೆ. ಸಭೆಯ ಪ್ರಮುಖ ವಿಷಯ ಏನು ಅನ್ನೋದನ್ನೇ ಓದುವುದಿಲ್ಲ. ಏನನ್ನೂ ಓದದೆ ಕೇವಲ ತಲೆ ಅಲುಗಾಡಿಸಿ ಬರುತ್ತಾರೆ ಎಂದು ಟೀಕಿಸಿದರು.ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಚೆನ್ನೈನಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ