ಮುಂಬೈ: ಇಂದಿನಿಂದ ಮಾಸ್ಕ್ ಧರಿಸದಿದ್ದರೆ ಯಾವುದೇ ದಂಡವನ್ನು ವಿಧಿಸಲಾಗುವುದಿಲ್ಲ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಘೋಷಿಸಿದೆ. ಆದರೂ ಸೋಂಕು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರದ ಹಿನ್ನೆಲೆ ನಾಗರಿಕರು ಮಾಸ್ಕ್ ಧರಿಸುವುದು ಉತ್ತಮ ಎಂದು ತಿಳಿಸಿದೆ.
Advertisement
ಪ್ರಸ್ತುತ ಕೊರೊನಾ ವೈರಸ್ ಸೋಂಕಿನ ಹರಡುವಿಕೆ ನಿಯಂತ್ರಣದಲ್ಲಿರುವುದರಿಂದ, ವಿಧಿಸಲಾಗಿದ್ದ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ. ಆದರೆ ವಿಶ್ವಾದ್ಯಂತ ಸೋಂಕು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಹಾಗಾಗಿ ಕೊರೊನಾ ಭೀತಿ ಹಾಗೆಯೇ ಇದೆ. ಕೋವಿಡ್-19 ನಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ನಾಗರಿಕರು ಸ್ವಯಂಪ್ರೇರಣೆಯಿಂದ ಮಾಸ್ಕ್‌ಗಳನ್ನು ಧರಿಸಬೇಕು ಬಿಎಂಸಿ ಆಡಳಿತ ಮುನ್ನೆಚ್ಚರಿಕೆ ನೀಡುವ ಮೂಲಕ ಜನರಿಗೆ ಮನವಿ ಮಾಡಿದೆ. ಇದನ್ನೂ ಓದಿ: ಬಸ್‍ನಲ್ಲಿ ಕಿರುಕುಳ ನೀಡುತ್ತಿದ್ದ ಕಾಮುಕನಿಗೆ ತಕ್ಕ ಪಾಠ ಕಲಿಸಿದ ಯುವತಿ
Advertisement
Advertisement
2020ರ ಆರಂಭದಲ್ಲಿ ಕಾಣಿಸಿಕೊಂಡ ಕೊರೊನಾ ಸೋಂಕು ವಿಶ್ವಾದ್ಯಂತ ಭಾರೀ ಸುದ್ದಿಯಾಗಿತ್ತು. ಮಾಸ್ಕ್ ಧರಿಸುವುದರಿಂದ ಕೊರೊನಾ ಸೋಂಕಿನ ಹರಡುವಿಕೆಯನ್ನು ತಪ್ಪಿಸಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಸೂಚಿಸಿತ್ತು. ಹಾಗಾಗಿ ವೈರಸ್ ತಡೆಯಲು ಮುಂಬೈ ಬಿಎಂಸಿ ಹಲವಾರು ನಿಯಮಗಳೊಂದಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಘೋಷಿಸಿತ್ತು ಮತ್ತು ಮಾಸ್ಕ್ ಧರಿಸದೇ ನಿಯಮ ಉಲ್ಲಂಘಿಸುವವರಿಗೆ 200 ರೂ. ದಂಡ ವಿಧಿಸಲು ಆರಂಭಿಸಿತ್ತು. ಇದನ್ನೂ ಓದಿ: ಏ.1 ರಂದು ನಡೆದಾಡೋ ದೇವರ ಜನ್ಮ ದಿನಾಚರಣೆ- ಅಮಿತ್ ಶಾ ಕಾರ್ಯಕ್ರಮ ಉದ್ಘಾಟನೆ