ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಭಾನುವಾರ ತಮಿಳುನಾಡಿನ 38 ಜಿಲ್ಲೆಗಳ ಪೈಕಿ 36 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
Advertisement
ರಾಜಧಾನಿ ಚೆನ್ನೈನಲ್ಲಿ 24 ಗಂಟೆಗಳಲ್ಲಿ 134.29 ಮಿಮೀ ರಷ್ಟು ಅತೀ ಹೆಚ್ಚು ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಗರದ ಹಲವಾರು ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ತಗ್ಗು ಪ್ರದೇಶಗಳಲ್ಲಿರುವ ಮನೆಗಳು ನೀರಿನಲ್ಲಿ ಮುಳುಗಡೆಗೊಂಡಿದೆ. ಅಲ್ಲದೇ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲು ಮೂರು ಜಲಾಶಯಗಳ ಗೇಟ್‍ಗಳನ್ನು ತೆರೆಯಲಾಗಿದೆ. ಇದನ್ನೂ ಓದಿ: NCB ವಿಚಾರಣೆಯಿಂದ ಆರ್ಯನ್ ಖಾನ್ ಎಸ್ಕೇಪ್- ಶಾರೂಖ್ ಮಗ ಕೊಟ್ಟ ಕಾರಣ ಏನು?
Advertisement
#WATCH | Tamil Nadu: Water logging in parts of Chennai, following heavy rainfall here, affects normal life. Visuals from Korattur area this morning.
Heavy rainfall expected in coastal areas of Andhra Pradesh and Tamil Nadu from 9-11th Nov due to northeast monsoon, as per IMD. pic.twitter.com/E5ZaWH3KCM
— ANI (@ANI) November 8, 2021
Advertisement
ಪ್ರಧಾನಿ ನರೇಂದ್ರ ಮೋದಿ ಅವರು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಕರೆ ಮಾಡಿ ರಾಜ್ಯದ ಪರಿಸ್ಥಿತಿ ಸಂವಹನ ನಡೆಸಿದ್ದು, ರಕ್ಷಣಾ ಮತ್ತು ಪರಿಹಾರ ಕುರಿತಂತೆ ಕೇಂದ್ರದಿಂದ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಇಲ್ಲಿಯವರೆಗೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‍ಡಿಆರ್‍ಎಫ್) ನಾಲ್ಕು ತಂಡಗಳನ್ನು ರಾಜ್ಯದಲ್ಲಿ ನಿಯೋಜಿಸಲಾಗಿದೆ.
Advertisement
Tamil Nadu: Water logging in parts of Chennai, following heavy rainfall here, affects normal life in the city.
Visuals from Korattur area in the city.
Heavy rainfall expected in coastal areas of Andhra Pradesh and Tamil Nadu from 9-11th Nov due to northeast monsoon, as per IMD pic.twitter.com/Oe2vjUvgrY
— ANI (@ANI) November 8, 2021
ಧಾರಾಕಾರ ಮಳೆಯಿಂದಾಗಿ ತಮಿಳುನಾಡಿನ ಮೂರು ಜಿಲ್ಲೆಗಳಲ್ಲಿ ಶಾಲಾ, ಕಾಲೇಜಿಗೆ ರಜೆ ಘೋಷಿಸಲಾಗಿದ್ದು, ಚೆನ್ನೈ ನಗರದ ರೈಲು ಸಂಚಾರ ಅಸ್ತವ್ಯಸ್ಥಗೊಂಡಿದೆ. ಇನ್ನೂ 2 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಚೆನ್ನೈನಲ್ಲಿ ವರುಣನ ಆರ್ಭಟ – ಪ್ರವಾಹದ ಎಚ್ಚರಿಕೆ
Spoke to Tamil Nadu CM, Thiru @mkstalin and discussed the situation in the wake of heavy rainfall in parts of the state. Assured all possible support from the Centre in rescue and relief work. I pray for everyone’s well-being and safety.
— Narendra Modi (@narendramodi) November 7, 2021
ಮತ್ತೊಂದೆಡೆ ಇಂದು ಮುಂಜಾನೆಯಿಂದ ಬೆಂಗಳೂರಿನಲ್ಲಿ ದಟ್ಟಮಂಜು ಕವಿದ ವಾತಾವರಣವಿದ್ದು, ಜಿಟಿಜಿಟಿ ಮಳೆಯಾಗುತ್ತಿದೆ. ಇದನ್ನೂ ಓದಿ: ಕೇರಳದಲ್ಲಿ120 ವರ್ಷಗಳಲ್ಲಿಯೇ ಅತ್ಯಧಿಕ ಮಳೆ