– ಮಳೆಯಿಲ್ಲದೆ ಕರಾವಳಿ ಜನತೆ ಕಂಗಾಲು
ಮಂಗಳೂರು: ನಿನ್ನೆ ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ ಹಿನ್ನೆಲೆ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ ಕರಾವಳಿಯ ಭಾಗದಲ್ಲಿ ನಿರೀಕ್ಷೆಯಷ್ಟು ಮಳೆಯಾಗಿಲ್ಲ.
ಹವಾಮಾನ ಇಲಾಖೆ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಕರಾವಳಿ ಕೆಲವು ಭಾಗದಲ್ಲಿ ಸಣ್ಣ ಪ್ರಮಾಣದ ಮಳೆಯಾಗಿದ್ದು, ನೇತ್ರಾವತಿ ಇನ್ನೂ ತುಂಬಿಕೊಂಡಿಲ್ಲ. ಮಂಗಳೂರಿನಲ್ಲಿ ನಿನ್ನೆಯಿಂದ ಬೆಳಗ್ಗೆ 8 ಗಂಟೆವರೆಗೆ 82 ಮಿಲಿಮೀಟರ್ ಮಳೆಯಾಗಿದ್ದರೆ, ಬೆಳ್ತಂಗಡಿ, ಸುಳ್ಯದಲ್ಲಿ ಕಡಿಮೆ ಮಳೆಯಾಗಿದೆ ಎಂದು ಜಿಲ್ಲಾಡಳಿತ ಅಂಕಿ ಅಂಶ ನೀಡಿದೆ.
Advertisement
Advertisement
ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿತ್ತು. ವಾಯುಭಾರ ಕುಸಿತದಿಂದಾಗಿ ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆ ಇದ್ದು ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಮಳೆಯ ಪ್ರಮಾಣ ತುಂಬ ಕಡಿಮೆಯಾಗಿದೆ. ಇಂದು ಬೆಳಗ್ಗೆ ಮಳೆಯಾಗಿದ್ದು ಬಿಟ್ಟರೆ ಬಹುತೇಕ ಬಿಸಿಲಿನ ಪ್ರಮಾಣ ಹೆಚ್ಚಿತ್ತು.
Advertisement
Advertisement
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯಾದರೆ ಮಾತ್ರ ಕುಮಾರಧಾರ, ನೇತ್ರಾವತಿ ನದಿಗಳು ತುಂಬಿಕೊಳ್ಳುತ್ತೆ. ಹೀಗಾಗಿ ಕರಾವಳಿ ಜನ ಈ ಬಾರಿ ಮಳೆ ಕೊರತೆಯಿಂದಾಗಿ ಆತಂಕದಲ್ಲೇ ಕಾಲ ಕಳೆಯುತ್ತಿದ್ದಾರೆ. ಕಳೆದ ಬಾರಿಯಷ್ಟೂ ಮಳೆಯಾಗಿಲ್ಲ ಎನ್ನುವುದು ಕರಾವಳಿ ಜನರ ಕೊರಗಾಗಿದೆ.