ಬೆಂಗಳೂರು: ನಾಳೆಯಿಂದ ಮೇ 20ರ ವರೆಗೆ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು (Heavy Rain) ಭಾರತೀಯ ಹವಾಮಾನ ಇಲಾಖೆ (IMD) ಆರೆಂಜ್ ಅಲರ್ಟ್ (Orange Alert) ಜಾರಿ ಮಾಡಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಹಾಸನ, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಲಾಪುರ, ತುಮಕೂರು, ಚಿತ್ರದುರ್ಗದಲ್ಲಿ 115 ಮಿ.ಮೀನಿಂದ 204 ಮಿ.ಮೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಅಂಜಲಿ ಹತ್ಯೆಗೈದಿದ್ದ ಆರೋಪಿ ಅರೆಸ್ಟ್ – ಬಗೆದಷ್ಟು ಬಯಲಾಗ್ತಿದೆ ವಿಶ್ವನ ದುಷ್ಕೃತ್ಯ
Advertisement
Advertisement
ಮೇ 18 ರಿಂದ 20ರ ವರೆಗೆ ಬೆಂಗಳೂರಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ಬೆಂಗಳೂರಿಗೆ ಆರೆಂಜ್ ಅಲರ್ಟ್ ಜಾರಿ ಮಾಡಿದೆ. ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಟ್ಟುನಿಟ್ಟಿನ ಕ್ರಮ; ಅಪಘಾತಗಳ ಸಂಖ್ಯೆ ಇಳಿಕೆ
Advertisement
ದಕ್ಷಿಣ ಒಳನಾಡು ಭಾಗದಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದ್ದು ಅದರಲ್ಲೂ ಮೈಸೂರು, ಮಂಡ್ಯ, ಕೋಲಾರದಲ್ಲೂ ಭಾರೀ ಮಳೆ ಎಚ್ಚರಿಕೆಯನ್ನು ನೀಡಿದೆ.
Advertisement