ಶಾಹೀನ್ ಚಂಡಮಾರುತ ಹಿನ್ನೆಲೆ ಇಂದಿನಿಂದ ಅಕ್ಟೋಬರ್ 3 ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಾಳೆ ಶಾಹೀನ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಇಂದಿನಿಂದ ಕರ್ನಾಟಕದಲ್ಲೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಅ.3ರ ವರೆಗೂ ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
Advertisement
ಇಂದಿನಿಂದ ಅ.3 ರವರೆಗೆ ಉಡುಪಿ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಬೀದರ್, ಕಲಬುರ್ಗಿ, ವಿಜಯಪುರದಲ್ಲಿ ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
Advertisement
ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 30-24
ಶಿವಮೊಗ್ಗ: 31-22
ಬೆಳಗಾವಿ: 29-21
ಮೈಸೂರು: 29-21
ಮಂಡ್ಯ: 29-21
ರಾಮನಗರ: 29-21
ಮಡಿಕೇರಿ: 25-17
ಹಾಸನ: 28-20
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 28-20
ಕೋಲಾರ: 28-21
ತುಮಕೂರು: 29-21
ಉಡುಪಿ: 31-24
ಕಾರವಾರ: 30-26
ಚಿಕ್ಕಮಗಳೂರು: 27-19
ದಾವಣಗೆರೆ: 31-22
ಚಿತ್ರದುರ್ಗ: 31-21
ಹಾವೇರಿ: 31-22
ಬಳ್ಳಾರಿ: 33-23
ಗದಗ: 31-22
ಕೊಪ್ಪಳ: 31-23
ರಾಯಚೂರು: 32-24
ಯಾದಗಿರಿ: 32-24
ವಿಜಯಪುರ: 31-23
ಬೀದರ್: 29-22
ಕಲಬುರಗಿ: 31-23
ಬಾಗಲಕೋಟೆ: 32-23