ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಉತ್ತರ ಒಳನಾಡಿನಲ್ಲಿ ಅ.3ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಗುಲಾಬ್ ಚಂಡಮಾರುತ ಪರಿಣಾಮ ಮಹಾರಾಷ್ಟ್ರದ ಮರಾಠವಾಡ ಸೇರಿದಂತೆ ಹಲವೆಡೆ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 29-20
ಮಂಗಳೂರು: 29-24
ಶಿವಮೊಗ್ಗ: 29-21
ಬೆಳಗಾವಿ: 27-20
ಮೈಸೂರು: 31-21
ಮಂಡ್ಯ: 32-21
ರಾಮನಗರ: 31-21
ಮಡಿಕೇರಿ: 24-17
ಹಾಸನ: 28-19
ಚಾಮರಾಜನಗರ: 31-21
ಚಿಕ್ಕಬಳ್ಳಾಪುರ: 29-19
ಕೋಲಾರ: 30-20
ತುಮಕೂರು: 31-21
ಉಡುಪಿ: 29-24
ಕಾರವಾರ: 29-25
ಚಿಕ್ಕಮಗಳೂರು: 27-19
ದಾವಣಗೆರೆ: 31-21
ಚಿತ್ರದುರ್ಗ: 31-21
ಹಾವೇರಿ: 29-22
ಬಳ್ಳಾರಿ: 34-23
ಗದಗ: 30-21
ಕೊಪ್ಪಳ: 32-22
ರಾಯಚೂರು: 32-23
ಯಾದಗಿರಿ: 32-23
ವಿಜಯಪುರ: 31-22
ಬೀದರ್: 29-22
ಕಲಬುರಗಿ: 31-23
ಬಾಗಲಕೋಟೆ: 32-22