ಬೆಂಗಳೂರು: ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾಗಿದೆ. ಕೊಲ್ಲೂರು, ಭಾಗಮಂಡಲ ತಲಾ 16 ಸೆ.ಮೀ ಮಳೆಯಾಗಿದೆ. ಕಮ್ಮರಡಿ, ಕ್ಯಾಸಲ್ ರಾಕ್, ಸಿದ್ದಾಪುರ , ಉಡುಪಿ, ಮೂರ್ನಾಡು, ತಲಾ 11 ಸೆ.ಮಿ ನಿಲ್ಕುಂದ್ , ಜಿಕೋಟ , ಮಂಗಳೂರು ವಿಮಾನ, ನಿಲ್ದಾಣ, ಸೋಮವಾರಪೇಟೆ ತಲಾ 10 ಸೆ.ಮಿ.ದಾಖಲಾಗಿದೆ.
ಮುಂದಿನ 24 ಘಂಟೆಗಳು: ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಮಳೆ/ ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆಯಿದೆ.
ಮುಂದಿನ 48 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆಯಿದೆ.
ಗುಡುಗು ಮುನ್ಸೂಚನೆ: ಮುಂದಿನ 24 ಘಂಟೆಗಳು: ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾದ್ಯತೆ ಇದೆ.
ಭಾರೀ ಮಳೆ ಎಚ್ಚರಿಕೆ
ಮುಂದಿನ 24 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಹಾಗು ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ , ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಬಾರೀ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ, ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: 10ರ ಮಗಳು, ತಾಯಿ ಪ್ರತ್ಯೇಕ ಕೋಣೆಯಲ್ಲಿ ನೇಣಿಗೆ ಶರಣು – ಪ್ರೀತಿಸಿ ಮದ್ವೆಯಾಗಿದ್ದ ವೈದ್ಯ ದಂಪತಿ
ಮುಂದಿನ 48 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ, ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಘಂಟೆಗೆ 45-55 ಕಿ.ಮೀ. ಇರಲಿದ್ದು, 65 ಕಿ.ಮೀ. ವರೆಗೂ ತಲುಪುವ ಸಾಧ್ಯತೆ ಇದೆ. ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.
ಬೆಂಗಳೂರು:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲವು ಸಲ ಮಳೆಯಾಗುವ ಸಾಧ್ಯತೆ ಇದ್ದು, ಒಮ್ಮೊಮ್ಮೆ ಭಾರೀ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.