ಬೀದರ್: ಪುತ್ರನ ಮದುವೆ ಕಾರ್ಡ್ ಹಂಚಲು ಹೋದ ದಂಪತಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾಲಾಲ ತಾಂಡದ ಬಳಿ ನಡೆದಿದೆ.
ಕಾಂಗ್ರೆಸ್ ಮುಖಂಡ ಸೂರ್ಯಕಾಂತ್ ಪಾಟೀಲ್ (50) ಹಾಗೂ ಪತ್ನಿ ಜಯಶ್ರೀ ಪಾಟೀಲ್ (45) ಸಾವನ್ನಪ್ಪಿದ ದುರ್ದೈವಿಗಳು. ಇದೇ ತಿಂಗಳು 26 ರಂದು ಮಗನ ಮದುವೆ ಇದ್ದ ಕಾರಣ ಲಗ್ನ ಪತ್ರಿಕೆ ಹಂಚಲು ಸಂಬಂಧಿಕರ ಮನೆಗೆ ಹೋಗಿದ್ದರು. ಇದನ್ನೂ ಓದಿ: ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್‍ಗೆ 3ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ
ಮದುವೆ ಕಾರ್ಡ್ ಹಂಚಿಕೆ ಮಾಡಿ ಮನೆಗೆ ವಾಪಸ್ಸಾಗುತ್ತಿರುವ ವೇಳೆ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ದಂಪತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದ ಸೂರ್ಯಕಾಂತ್ ಪಾಟೀಲ್ ಮಾಜಿ ಗ್ರಾಪಂ ಅಧ್ಯಕ್ಷರಾಗಿದ್ದರು ಎಂದು ತಿಳಿದು ಬಂದಿದೆ. ಧನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: ಕತ್ರಿನಾ, ವಿಕ್ಕಿ ಮದುವೆಗೆ ನಮಗೆ ಯಾವುದೇ ಆಹ್ವಾನ ಬಂದಿಲ್ಲ: ಸಲ್ಮಾನ್ ಖಾನ್ ಸಹೋದರಿ