ರಾಯ್ಪುರ: ಮದುವೆಯಲ್ಲಿ ಉಡುಗೊರೆಯಾಗಿ (Wedding Gift) ಪಡೆದಿದ್ದ ಹೋಮ್ ಥಿಯೇಟರ್ ಮ್ಯೂಸಿಕ್ ಸಿಸ್ಟಮ್ (Music System) ಸ್ಫೋಟಗೊಂಡಿದ್ದು, ನವವಿವಾಹಿತ ಮತ್ತು ಆತನ ಹಿರಿಯ ಸಹೋದರ ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದ (Chhattisgarh) ಕಬೀರ್ಧಾಮ್ ಜಿಲ್ಲೆಯಲ್ಲಿ ನಡೆದಿದೆ.
ಸೋಮವಾರ ಈ ಘಟನೆ ನಡೆದಿದ್ದು, ಸ್ಫೋಟಕ್ಕೆ (Blast) ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಸ್ಫೋಟದ ಪರಿಣಾಮ ಹೋಮ್ ಥಿಯೇಟರ್ ಸಿಸ್ಟಮ್ ಅನ್ನು ಇರಿಸಲಾಗಿದ್ದ ಕೋಣೆಯ ಮೇಲ್ಛಾವಣಿ ಹಾಗೂ ಗೋಡೆಗಳೇ ಕುಸಿದು ಹೋಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಇನ್ನೂ ನಾಲ್ವರು ಗಾಯಗೊಂಡಿದ್ದಾರೆ.
Advertisement
Advertisement
ವರದಿಗಳ ಪ್ರಕಾರ ಮೃತ ನವವಿವಾಹಿತ ವ್ಯಕ್ತಿ ಹೇಮೇಂದ್ರ ಮೇರಾವಿ (22) ಏಪ್ರಿಲ್ 1 ರಂದು ವಿವಾಹವಾಗಿದ್ದರು. ಸೋಮವಾರ ಹೇಮೇಂದ್ರ ಹಾಗೂ ಕುಟುಂಬದ ಇತರ ಸದಸ್ಯರು ತಮ್ಮ ಮನೆ ಕೋಣೆಯೊಳಗೆ ಮದುವೆಗೆ ಬಂದಿದ್ದ ಉಡುಗೊರೆಗಳನ್ನು ಬಿಚ್ಚುತ್ತಿದ್ದರು ಎನ್ನಲಾಗಿದೆ.
Advertisement
ಉಡುಗೊರೆಗಳ ಪೈಕಿ ಹೋಮ್ ಥಿಯೇಟರ್ ಮ್ಯೂಸಿಕ್ ಸಿಸ್ಟಮ್ ಕೂಡಾ ಒಂದಾಗಿತ್ತು. ಅದರ ತಂತಿಯನ್ನು ಎಲೆಕ್ಟ್ರಿಕ್ ಬೋರ್ಡ್‌ಗೆ ಜೋಡಿಸಿ ಬಳಿಕ ಅದನ್ನು ಆನ್ ಮಾಡಿದಾಗ ಭಾರೀ ಸ್ಫೋಟ ಉಂಟಾಗಿದೆ. ಘಟನೆಯಲ್ಲಿ ಮೇರಾವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಬಾಯ್‍ಫ್ರೆಂಡ್ ಬಿಡುವಂತೆ ಹೇಳಿದ ತಾಯಿಯನ್ನು ಕೊಲೆಗೈದ 14ರ ಮಗಳು!
Advertisement
ಮೇರಾವಿ ಸಹೋದರ ರಾಜ್‌ಕುಮಾರ್ (30) ಮತ್ತು ಒಂದೂವರೆ ವರ್ಷದ ಬಾಲಕ ಸೇರಿದಂತೆ ಇತರ ನಾಲ್ವರಿಗೆ ಗಾಯಗಳಾಗಿದ್ದು, ಅವರನ್ನು ಕೌರಾದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ವೇಳೆ ಮೆರಾವಿ ಅವರ ಸಹೋದರ ಸಾವನ್ನಪ್ಪಿದ್ದಾರೆ. ಪ್ರಸ್ತುತ ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಷಯ ತಿಳಿದ ತಕ್ಷಣ ವಿಧಿವಿಜ್ಞಾನ ತಜ್ಞರೊಂದಿಗೆ ಪೊಲೀಸ್ ತಂಡ ಸ್ಥಳಕ್ಕೆ ತೆರಳಿದೆ. ಕೊಠಡಿಯನ್ನು ಪರಿಶೀಲಿಸಿದಾಗ ಸ್ಫೋಟಕ್ಕೆ ಕಾರಣವಾಗಿರುವ ಯಾವುದೇ ವಸ್ತು ಪತ್ತೆಯಾಗಿಲ್ಲ. ಮ್ಯೂಸಿಕ್ ಸಿಸ್ಟಮ್ ಮಾತ್ರವೇ ಕೋಣೆಯಲ್ಲಿ ಸ್ಫೋಟಗೊಂಡಿದ್ದು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ರೆಂಗಾಖರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ದುರ್ಗೇಶ್ ರಾವ್ಟೆ ತಿಳಿಸಿದ್ದಾರೆ. ಇದನ್ನೂ ಓದಿ: ಕ್ರ್ಯಾಶ್ ಟೆಸ್ಟ್‌ನಲ್ಲಿ 5 ಸ್ಟಾರ್ ಪಡೆದ ಫೋಕ್ಸ್‌ವ್ಯಾಗನ್ ವರ್ಟಸ್, ಸ್ಕೋಡಾ ಸ್ಲಾವಿಯಾ