ವೀಕೆಂಡ್ ಕರ್ಫ್ಯೂ ನಡುವೆಯೂ ಕೋಳಿ ವ್ಯಾಪಾರ ಜೋರು – ಕೋವಿಡ್ ನಿಯಮ ಉಲ್ಲಂಘನೆ

Public TV
1 Min Read
raichuru chicken business

ರಾಯಚೂರು: ವೀಕೆಂಡ್ ಕರ್ಫ್ಯೂ ನಡುವೆಯೂ ಸಾಮಾಜಿಕ ಅಂತರವಿಲ್ಲದೆ ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ರಾಯಚೂರಿನಲ್ಲಿ ಕೋಳಿ ವ್ಯಾಪಾರ ಜೋರಾಗಿ ನಡೆಯುತ್ತಿದೆ.

night curfew 1

ಪೊಲೀಸರ ಭಯಕ್ಕೆ ಓಣಿಗಳಲ್ಲಿ ಕೋಳಿಗಳನ್ನು ಮಾರಾಟ ಮಾಡಲಾಗುತ್ತಿದೆ. ಗ್ರಾಮೀಣ ಭಾಗದಿಂದ ಕೋಳಿಗಳನ್ನು ತಂದು ಇಲ್ಲಿ ಮಾರಾಟ ಮಾಡಲಾಗುತ್ತಿದ್ದು, ಪ್ರತೀ ಭಾನುವಾರ ವ್ಯಾಪಾರ ಜೋರಾಗಿ ನಡೆಯುತ್ತಿದೆ. ವೀಕೆಂಡ್ ಕರ್ಫ್ಯೂ ಇರುವುದರಿಂದ ತೆರೆಮರೆಯಲ್ಲಿ ಕೋಳಿ ವ್ಯಾಪಾರ ಮಾಡಲಾಗುತ್ತಿದೆ. ಇದನ್ನೂ ಓದಿ: ಕೋವಿಡ್ ಸ್ವಯಂ ಪರೀಕ್ಷೆ ಕಿಟ್ ಖರೀದಿಸಲು ಆಧಾರ್ ಕಡ್ಡಾಯ – ಮುಂಬೈ ಮೇಯರ್

CORONA 6

ಕೋಳಿ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಈ ವೇಳೆ ಸಾಮಾಜಿಕ ಅಂತರವನ್ನೂ ಮರೆತು, ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಖರೀದಿ ಮಾಡುತ್ತಿದ್ದಾರೆ. ಇದನ್ನೂ ಓದಿ: ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಪಂಜಾಬ್‌ ಸಿಎಂ ಮನವಿ ಪತ್ರ

Share This Article
Leave a Comment

Leave a Reply

Your email address will not be published. Required fields are marked *