ಮೈಸೂರು: ವೀಕೆಂಡ್ ಕರ್ಫ್ಯೂ, ಲಾಕ್ ಡೌನ್ ವಿಧಿಸುವದಾದರೆ ವ್ಯಾಕ್ಸಿನ್ ಯಾಕೆ ಬೇಕಿತ್ತು ಎಂದು ಸಂಸದ ಪ್ರತಾಪ್ ಸಿಂಹ ರಾಜ್ಯ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.
Advertisement
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ. ಅಲ್ಲಿ ಪ್ರಚಾರ ರ್‍ಯಾಲಿ ನಡೆಯುತ್ತದೆ ತಾನೇ? ಹೀಗಿರುವಾಗ ಕರ್ನಾಟಕದಲ್ಲಿ ಯಾಕೆ ಕರ್ಫ್ಯೂ , ಲಾಕ್ ಡೌನ್ ಅಂತಾ ಜನರನ್ನು ಮತ್ತೆ ಕಂಗಾಲು ಮಾಡುತ್ತಿದ್ದಿರಿ? ಜನರನ್ನು ಭೀತಿಯಲ್ಲಿ ಇಡುವುದು ಮೊದಲು ಸರ್ಕಾರ ನಿಲ್ಲಿಸಲಿ. ಕರ್ಫ್ಯೂ, ಲಾಕ್ ಡೌನ್ ನಿಂದ ಜನರಿಗೆ ಬಹಳ ತೊಂದರೆಯಾಗಿದೆ ಎಂದರು. ಇದನ್ನೂ ಓದಿ: ಹಿಂದೂ ಮಹಿಳೆ, ಮುಸ್ಲಿಂ ವ್ಯಕ್ತಿ ರೈಲಿನಲ್ಲಿ ಪ್ರಯಾಣ – ಲವ್ ಜಿಹಾದ್ ಅಂತ ಠಾಣೆಗೆ ಎಳೆದೊಯ್ದ ಭಜರಂಗದಳ ಸದಸ್ಯರು
Advertisement
Advertisement
ಜನರ ಜೀವನ, ಜೀವ ಎರಡು ಮುಖ್ಯವಾಗಿದೆ. ಜೀವ ಉಳಿಸಿ ಕೊಳ್ಳಲು ವ್ಯಾಕ್ಸಿನ್ ಕೊಟ್ಟಿದ್ದೇವೆ. ಈಗ ಜೀವನ ಉಳಿಯ ಬೇಕಾದರೆ ಕಫ್ರ್ಯೂ, ಲಾಕ್ ಡೌನ್ ತೆಗೆಯಿರಿ. ಸಿಎಂ ಬಸವರಾಜ ಬೊಮ್ಮಾಯಿ ಈ ಬಗ್ಗೆ ಶುಕ್ರವಾರದ ಸಭೆಯಲ್ಲಿ ಒಳ್ಳೆಯ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಎಲ್ಲಾ ವರ್ಗದ ಜನರಿಗೂ ಕರ್ಫ್ಯೂ, ಲಾಕ್ ಡೌನ್ ನಿಂದ ತೊಂದರೆ ಆಗಿದೆ ಎಂದು ನುಡಿದರು. ಇದನ್ನೂ ಓದಿ: ತಜ್ಞರು ಗ್ರೀನ್ ಸಿಗ್ನಲ್ ಕೊಟ್ರೆ ಬೆಂಗಳೂರಿನಲ್ಲಿ ಮರು ದಿನವೇ ಶಾಲೆ ಪ್ರಾರಂಭ: ಬಿಸಿ ನಾಗೇಶ್